ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ಜಿಲ್ಲೆಯ ಅರಕೇರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರೌಢಶಾಲಾ ಕ್ರೀಡಾಕೂಟದಲ್ಲಿ ಭಾಗವಹಿಸಿದ ಇಂಡಿ ಮುರಾರ್ಜಿ ದೇಸಾಯಿ ಶಾಲೆಯ ವಿದ್ಯಾರ್ಥಿ ಕುಪ್ರೇಂದ್ರ ಯಂಪುರೆ ೧೫೦೦ಮೀ. ಓಟದಲ್ಲಿ ಹಾಗೂ ಎತ್ತರ ಜಿಗಿತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
ವಿದ್ಯಾರ್ಥಿಯ ಈ ಸಾಧನೆಗೆ ಶಾಲೆಯ ಪ್ರಾಂಶುಪಾಲರು, ದೈಹಿಕ ಶಿಕ್ಷಕರು, ಸಿಬ್ಬಂದಿಯ ವರ್ಗ, ಪಾಲಕರು ಹಾಗೂ ಶಾಲೆಯ ವಿದ್ಯಾರ್ಥಿಗಳು ಅಭಿನಂದಿಸಿ ಮುಂದೆ ನಡೆಯುವ ರಾಜ್ಯ ಮಟ್ಟದ ಪ್ರೌಢಶಾಲಾ ಕ್ರೀಡಾಕೂಟದಲ್ಲಿ ಗೆಲುವು ಸಾದಿಸಲಿ ಎಂದು ಶುಭ ಹಾರೈಸಿದ್ದಾರೆ.

