Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಗ್ರಾಪಂಗಳಿಗೆ ಮೂಲಸೌಲಭ್ಯಗಳನ್ನು ಒದಗಿಸಿ ಆಡಳಿತ ಬಲಪಡಿಸಲು ಕ್ರಮ

ಮಾ.08 ರಂದು ಕಬ್ಬು ನುರಿಸುವ ಹಂಗಾಮ ಮುಕ್ತಾಯ ; ರೈತರಿಗೆ ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಕಾರ್ಖಾನೆಯ ಪ್ರಕಟಣೆ

ಜೇವೂರ ಗ್ರಾಮದ ಹಠಯೋಗಿ ಶ್ರೀ ರೇವಣಸಿದ್ಧೇಶ್ವರ ಮಹಾಸ್ವಾಮಿಗಳ ಪುಣ್ಯಾರಾಧನೆ .

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»ವಿಶೇಷ ಲೇಖನ»ಶರಣರು ಕಂಡ ಸಹಜ ಧರ್ಮ
ವಿಶೇಷ ಲೇಖನ

ಶರಣರು ಕಂಡ ಸಹಜ ಧರ್ಮ

By Updated:No Comments6 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಲೇಖನಡಾ.ಶಶಿಕಾಂತ ಪಟ್ಟಣ, ಪೂನಾ

ಉದಯರಶ್ಮಿ ದಿನಪತ್ರಿಕೆ

“ಧರ್ಮ” ಎನ್ನುವ ಪದವು ಸಂಸ್ಕೃತ ಪದದಿಂದ ಬಂದದ್ದು “ಧಾರಣಾತ್ ಧರ್ಮಃ” ಅಂದರೆ ಯಾವುದನ್ನು ಧರಿಸಲು ಆಧರಿಸಲು ಸಮರ್ಥವಾಗುತ್ತದೆಯೋ ಅದು ಧರ್ಮವೆಂದಾಗುತ್ತದೆ. ಧರ್ಮ ಅಂದರೆ ಧಾರಣ. ಜಿಡ್ಡುಗಟ್ಟಿದ ಮೃತಪ್ರಾಯವಾಗ ಬಹುದಾದ ಸಾಮಾಜಿಕ ಧಾರ್ಮಿಕ ರಾಜಕೀಯ ಆರ್ಥಿಕ ವ್ಯವಸ್ಥೆಗೆ ಒಂದು ಬೃಹತ್ ಪರ್ಯಾಯ ವ್ಯವಸ್ಥೆಯನ್ನು 12ನೆ ಶತಮಾನದಲ್ಲಿ ಶರಣರು ಕಲ್ಪಿಸಿದರು. ಧರ್ಮವು ಶೊಷಣೆಯಾದಾಗ ಮೋಸ ಕಪಟ ಕಳ್ಳತನ ಕಂದಾಚಾರ ಮೂಡನಂಬಿಕೆ ತಾಂಡವವಾಡುವಾಗ ಬಸವಣ್ಣನವರು “ದಯವಿಲ್ಲದ ಧರ್ಮ ಅದೆವುದಯ್ಯಾ” ಎಂದು ಧರ್ಮಕ್ಕೆ ದಯೆ ಪ್ರೀತಿಯನ್ನು ಅಡಿಪಾಯ ಹಾಕಿದರು.
Religion is a way of life -ಅದು ಬರಿ ಸಿದ್ಧಾಂತವಲ್ಲ ಬದುಕಿನ ಕ್ರಮ ಅಥವಾ ಸಾಧನೆಯ ಹಾದಿ(Religion is a way of life but not view of Life ). ಬದುಕನ್ನ ಕೇವಲ ಅವಲೋಕಿಸಿ ವ್ಯಾಖ್ಯಾನ ಮಾಡುವುದು ಧರ್ಮವಲ್ಲ. ಶರಣರು “ಧರ್ಮ ಕೇವಲ ಬದುಕಿನ ಮಾರ್ಗವಲ್ಲ ಆದರೆ ಅದು ಬದುಕಿನ ನೀತಿ ಸಂಹಿತೆ ಸತ್ಯ ಶುದ್ಧ ಆಚರಣೆ” ಎಂದು ಹೇಳಿದರು. ಇಲ್ಲಿ ಸಲ್ಲುವವ ಅಲ್ಲಿ ಸಲ್ಲುವವ, ಇಲ್ಲಿ ಸಲ್ಲದವ ಅಲ್ಲಿಯೂ ಸಲ್ಲರಯ್ಯ.
ಬಸವಣ್ಣ ನಿರ್ಮಲವಾದ ಮನಸ್ಸಿಗೆ ಮನುಷ್ಯ ತನ್ನನ್ನೇ ಆತ್ಮಾವಲೋಕನ ಮಾಡಿಕೊಳ್ಳಬೇಕು “ಎನ್ನ ಚಿತ್ತವು ಅತ್ತಿಯ ಹಣ್ಣು ನೋಡಯ್ಯಾ” ಮಾವಿನ ಕಾಯೋಳು ಎಕ್ಕೆ ಕಾಯಿ ನಾನಯ್ಯಾ” “ಮನವೆಂಬ ಮರ್ಕಟ” “ವಿಷಯ ವೆಂಬ ಹಸುರೆನ್ನ ಮುಂದೆ ಪಸರಿಸಿದಿರಿ” ಹೀಗೆ ತನು ವಿರೋಧ ಆತ್ಮಾವಲೋಕನ ಜೊತೆಗೆ ಭ್ರತ್ಯಾಚಾರದ ಕಿಂಕರ ಭಾವನೆಯಿಂದಾ ಬಸವಣ್ಣನವರು ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ಭಕ್ತಿ ಚಳುವಳಿ ಮತ್ತು ಸಮತೆಯ ಸಂಘರ್ಷವನ್ನು ಸಾರಿದರು.
ಪರಿಣಾಮವಾಗಿ ಕಕ್ಕಯ್ಯ, ಚೆನ್ನಯ್ಯ, ಹರಳಯ್ಯಾ, ಮಾಚಯ್ಯ, ಚೆಂದಯ್ಯ, ಸತ್ಯಕ್ಕಾ ಕಾಳವ್ವೆ, ನಿ೦ಬೆಕ್ಕಾ, ಅಂಬಿಗರ ಚೌಡಯ್ಯಾ ಹೀಗೆ ಕೆಳಸ್ತರದ ಜನರ ಸಂಘಟನೆಯಿಂದ ಲಿಂಗಾಯತ ಎಂಬ ಒಂದು ಹೊಸ ಧರ್ಮವನ್ನು ಬಸವಣ್ಣ ಮತ್ತು ಎಲ್ಲಾ ಶರಣರು ಸ್ಥಾಪಿಸಿದರು. ಧರ್ಮ ಗುರು ಸ್ಥಾಪಕ ಬಸವಣ್ಣ.
ವಚನಗಳು ಸಮತೆ ಶಾಂತಿ ಪ್ರೀತಿ ವಿಶ್ವ ಬಂಧುತ್ವ ಸಾರುವ ನಿರ್ವಿವಾದ ಸತ್ಯಗಳು. ಆದರೆ ಯಾವುದೇ ಲಾಂಛನ ಕಾವಿ ಮಠವಿರದ ಈ ಧರ್ಮದಲ್ಲಿ ಮತ್ತೆ ಮೌಡ್ಯ
ತುಂಬಿಕೊಂಡಿವೆ. ಶರಣರ ಮೂಲ ಆಶಯ ಗುರುತಿಸದೆ ಅದನ್ನು ತಮ್ಮ ಗ್ರಹಿಕೆಗೆ ತಕ್ಕಂತೆ ವ್ಯಾಖ್ಯಾನ ಮಾಡುತ್ತಾ ಜನರನ್ನು ತಪ್ಪು ದಾರಿಗೆ ಎಳೆಯುತ್ತಿದ್ದಾರೆ.
ಶರಣರು ಅನುಭಾವಿಗಳು ಸ್ವಾಮಿಗಳು, ಮಠಾಧೀಶರು, ಅಕ್ಕ , ಮಾತೆಯವರು. (MYSTICS PAR EXCELLENCE )
ಕಾಯಕ ದಾಸೋಹ ತತ್ವವನ್ನು ಮೊಟ್ಟ ಮೊದಲ ಬಾರಿಗೆ ತೋರಿ ಬದುಕಿದ ಧೀರರು. ಶರಣರ ಆಧ್ಯಾತ್ಮ ದೃಷ್ಟಿ ಸಂಪದ್ದ್ಭರಿತ ಹಾಗು ಗಟ್ಟಿ ಧ್ವನಿ ಹೊಂದಿದ ಬದುಕಿನ ಪಥ ಸೋಪಾನ.
“ಅರಿವೇ ಗುರು ಆಚಾರವೇ ಲಿಂಗ ಅನುಭಾವವೇ ಜಂಗಮ” ಎಂದೆನ್ನುವ ಶರಣರು ಲಿಂಗ ಯೋಗ (ಪೂಜೆಯಲ್ಲ ) ಮೂಲಕ ಅನುಸಂಧಾನ ಮಾಡಿ ಮನುಷ್ಯ ಹೇಗೆ ತಾನೇ ದೇವನಾಗಬಲ್ಲನು ಎಂದು ಸಾಧಿಸಿ ತೋರಿದ್ದಾರೆ. ಅಲ್ಲಿಯವರೆಗಿದ್ದ ಸೋಹಂ ಎಂಬ ಭಾವವು ದಾಸೋಹಂ ಎಂಬ ಮಹಾನ್ ತತ್ವದಲ್ಲಿ ಪರಿವರ್ತನೆಗೊಂಡಿತು. ಇಂತಹ ಕ್ರಾಂತಿ ಜಗತ್ತಿನಲ್ಲಿಯೇ ಅಪರೂಪವಾಗಿದೆ. ವರ್ಗ ವರ್ಣ ಆಶ್ರಮ ಲಿಂಗ ಬೇಧ ಧಿಕ್ಕರಿಸಿದ ಶರಣರು ಸರ್ವಕಾಲಿಕ ಸಮಕಾಲೀನ ಸಮಾನತೆಯ ಸಮಾಜದ ರೂವಾರಿಗಳು.
ಅಂದಿನ ಮೌಢ್ಯ, ಅಂಧ ಶೃದ್ಧೆ ,ಕಂಧಚಾರ, ಪುನರ್ಜನ್ಮ , ಕರ್ಮ ಸಿದ್ಧಾಂತವನ್ನು ಶರಣರು ಸಂಪೂರ್ಣ ತಿರಸ್ಕರಿಸಿ ಹೊಸ ಸಮಾಜವನ್ನು ನಿರ್ಮಿಸಿದರು.
ಶರಣರು ಪುನರ್ಜನ್ಮ ಕರ್ಮ ಸಿದ್ಧಾಂತ ವಿರೋಧಿಸಿದ ಧೀರರು.
ಅಟ್ಟೆ ಮುಟ್ಟಲಿಲ್ಲ, ಮುಟ್ಟಿ ಮರಳಲಿಲ್ಲ,
ಏನೆಂಬೆ ಲಿಂಗವೆ, ಎಂತೆಂಬೆ ಲಿಂಗಯ್ಯಾ?
“ನಿಜವನರಿದ ಬಳಿಕ ಮರಳಿ ಹುಟ್ಟಲಿಲ್ಲ, ಕಾಣಾ ಗುಹೇಶ್ವರಾ”
ಇಲ್ಲಿ ಅಟ್ಟೆ ಎಂದರೆ ತಲೆಯಿಲ್ಲದ ದೇಹ ಎಂದರ್ಥ. ನಿರ್ಗುಣ ಶೂನ್ಯ ಬಯಲು ಕದಳಿ ಎಂಬ ಪಾರಿಭಾಷಿಕ ಪದಗಳಿವೆ. ಬಸವಣ್ಣವರು ಹುಡುಕಿದ ಸಂಶೋಧಿಸಿದ
ಇಷ್ಟಲಿಂಗ ಲಿಂಗವನರಿಯದೆ ಏನನ್ನೂ ಅರಿತರೂ ಫಲವಿಲ್ಲಾ, ಲಿಂಗವನರಿತ ಬಳಿಕ ಮತ್ತೆನನ್ನೂ ಅರಿತರೂ ಫಲವಿಲ್ಲಾ, ಅದಕ್ಕೆ ಇಂತಹ ಸ್ಥಳ ಮುಟ್ಟಿದ ಬಳಿಕ ಭಕ್ತನಾಗಿ ಮತ್ತೆ ಭವಿಯಾಗಲಿಲ್ಲ. ಏನೆಂಬೆ ಲಿಂಗವೆ, ಎಂತೆಂಬೆ ಲಿಂಗಯ್ಯಾ? ಇಂತಹ ಸುಂದರ ಲಿಂಗ ತತ್ವ ತಿಳಿದ ಬಳಿಕ ಮರಳಿ ಹುಟ್ಟಲು ಸಾಧ್ಯವೇ?
ಭವಿ ಒಂದು ಜನ್ಮ ಅದು ಪರಿವರ್ತಿತಗೊಂಡ ಇನ್ನೊಂದು ಸ್ಥಲವೇ” ಭಕ್ತ ” ಇನ್ನೊಂದು ಜನ್ಮ
ಇಂತಹ ನಿಜವನರಿದ ಬಳಿಕ ಮರಳಿ ಹುಟ್ಟು ಸಾಧ್ಯವಿಲ್ಲ.
ಇದು ಅಲ್ಲಮರ ಅಭಿಮತ .
ಇದೆ ರೀತಿ ದಿಟ್ಟ ಗಣಾಚಾರಿ ಅಂಬಿಗರ ಚೌಡಯ್ಯ .ಈ ಕೆಳಗಿನಂತೆ ಪ್ರಶ್ನಿಸಿದ್ದಾನೆ.
“ಕ್ಷೀರದಿಂದಾದ ತುಪ್ಪ ಕ್ಷೀರವಪ್ಪುದೇ?
ನೀರಿನಿಂದಾದ ಮುತ್ತು ನೀರಪ್ಪುದೇ?
ಮೀರಿ ಪೂರ್ವಕರ್ಮವನು ಹರಿದ ಭಕ್ತಗೆ
ಬೇರೆ ಮತ್ತೆ ಜನ್ಮವುಂಟೆ ಲಿಂಗವಲ್ಲದೆ?
ಕಟ್ಟಿಹೆ ಬಿಟ್ಟಿಹೆವೆಂಬ ದಂದುಗ ನಿಮಗೇಕೆ?
ತೆರನನರಿಯದೆ ಹಲವು ತೊಪ್ಪಲ ತರಿತಂದು ಮೇಲೊಟ್ಟಲೇಕೊ?
ಜಂಗಮ ಬಂದರೆ ತೆರನರಿತು ಅರ್ಪಿಸಬಲ್ಲಡಲ್ಲಿ ಶಿವ ತೆರಹಿಲ್ಲದಿಪ್ಪನೆಂದಾತ ನಮ್ಮ ಅಂಬಿಗರ ಚೌಡಯ್ಯ.
ಹಾಲಿನಿಂದಾ ತುಪ್ಪ ಮತ್ತೆ ಹಾಳಾಗುವುದೆ ಕ್ರಿಯೆಯಿಳಿದು. ನೀರಿನಿಂದಾದ ಮುತ್ತು ನೀರಪ್ಪುದೇ? ನೀರಿನಲ್ಲಿ ಹುಟ್ಟಿದ ಮುತ್ತು ಮತ್ತೆ ನೀರಾಗುವುದೆ?
ಮೀರಿ ಪೂರ್ವಕರ್ಮವನು ಹರಿದ ಭಕ್ತಗೆ ಮತ್ತೆ ಬೇರೆ ಜನ್ಮ ಉಂಟೆ?
ಕಟ್ಟಿಹೆ ಬಿಟ್ಟಿಹೆನೆ೦ಬ ಆತಂಕ ನಿಮಗೇಕೆ ಭಕ್ತರೆ? ಅರ್ಥವಿಲ್ಲದ ನೆಲೆಯಿಲ್ಲದ ತಪ್ಪಲು ತಂದು ಅನಗತ್ಯ ಒಟ್ಟಲೇಕೊ? ಜಂಗಮ ಬಂದಲ್ಲಿ ತೆರನರಿತು ಅರ್ಪಿಸಿದಡೆ ಶಿವ ನೋಪ್ಪುವ” ಎಂದು ಹೇಳಿದ್ದಾರೆ.
ಶರಣರು ಕರ್ಮ ಸಿದ್ಧಾಂತವನ್ನು ಪುನರ್ಜನ್ಮವನ್ನು ಒಪ್ಪಲಿಲ್ಲ. ಮತ್ತು ಕಟುವಾಗಿ ವಿರೋಧಿಸಿದರು. ಆದರೆ ಪಲ್ಲಟ ಪರಿವರ್ತನೆ ಭವಿ ಭಕ್ತ ವಿವರಣೆ ಕೊಡುವಾಗ ಒಂದು ಸ್ಥಿತಿಯಿಂದ ಇನ್ನೊಂದು ಸ್ಥಿತಿಗೆ ಮಾರ್ಪಾಡಾದಾಗ ಅದನ್ನು ಒಂದು ಜನ್ಮ ಮತ್ತೊಂದು ಜನ್ಮ ಎಂದು ಕರೆದರು.


ನಾವೇ ಒಂದು ಅಪಘಾತದಲ್ಲಿ ಸಿಕ್ಕು ಪಾರಾದಾಗ “ಸಾಮಾನ್ಯವಾಗಿ ನಾವು ಪುನರ್ಜನ್ಮ ಪಡೆದೆವು ಎಂದು ಹೇಳುವುದು ವಾಡಿಕೆ.
ಕಾರಣ ಶರಣರು ಪುನರ್ಜನ್ಮ ಒಪ್ಪಲಿಲ್ಲ. ಹಿಂದಿನ ಜನ್ಮವಿಲ್ಲ, ಮುಂದೆ ಇನ್ನೊಂದು ಜನ್ಮವೂ ಇಲ್ಲ. “ನುಡಿದಂತೆ ನಡೆ, ಇದೇ ಜನ್ಮ ಕಡೆ” ಇದು ಶರಣರ ಸ್ಪಷ್ಟವಾಣಿ.
ಶರಣರು ರೂಪಿಸಿದ ಜಂಗಮ ತತ್ವ
ಜಂಗಮ ಪದ ಶರಣರು ಸಮಾಜವೆಂತಲೂ ತತ್ವ ನಿಷ್ಠ ಸಾಧಕರೆಂತಲೂ ಸಮಷ್ಟಿ ಎಂತಲೂ ಬಳಸಿ ಲಿಂಗವೇ ಜಂಗಮ ಎಂದೆನ್ನುತ್ತಾ ವ್ಯಕ್ತಿ ಸಮಷ್ಟಿಯ ಸಂಬಂಧಗಳನ್ನು ಗಟ್ಟಿಗೊಳಿಸಿದ್ದಾರೆ. “ಬಸುರಿಗೆ ಮಾಡಿದ ಸುಖ ದುಃಖಗಳು ಶಿಶುವಿಗೆ ಮೂಲ” ಎಂದು ಹೇಳಿ ಬಸುರಿ -ಇದು ಜಂಗಮ ಪರಿಕಲ್ಪನೆ ಶಿಶು ಭಕ್ತನಾಗುತ್ತಾನೆ.
ಇದೆ ರೀತಿ
“ಮರಕ್ಕೆ ಬಾಯಿ ಬೇರೆಂದು ತಳೆಯಿಂಕೆ ನೀರೆರೆದಡೆ ಮೇಲೆ ಪಲ್ಲವಿಸಿತ್ತು ನೋಡಾ, ಲಿಂಗದ ಬಾಯಿ ಜಂಗಮವೆಂದು ಪಡಿ ಪದಾರ್ಥವ ನೀಡಿದಡೆ ಮುಂದೆ ಸಕಳಾರ್ಥವನಿವನು. ಆ ಜಂಗಮ ಹರನೆಂದು ಕಂಡು, ನರನೆಂದು ಭಾವಿಸಿದೊಡೆ ನರಕ ತಪ್ಪದು ಕಾಣಾ, ಕೂಡಲಸಂಗಮದೇವ”
ಅತ್ಯಂತ ಸ್ಪಷ್ಟವಾಗಿ ನಿರೂಪಿಸಿದ ಲಿಂಗ ಜಂಗಮ ತತ್ವಗಳು ಇಲ್ಲಿ ಕಾಣುತ್ತೇವೆ. ಹೇಗೆ ಮರಕ್ಕೆ ಬಾಯಿ ಬೇರೋ ಹಾಗೆ ಲಿಂಗದ ಬಾಯಿ ಜಂಗಮ ಅಂದರೆ ಸಮಾಜ. ಸಮಾಜದ ವ್ಯಕ್ತಿಯನ್ನು ಹರನೆಂದು ನಂಬಿ ಪ್ರೀತಿಯಿಂದ ನೋಡಬೇಕಾದವರು ನರನೆಂದು ಕಡೆಗಣಿಸಿದರೆ ಸ್ವರ್ಗವೂ ಕೂಡಾ ನರಕವೇ ಎಂದು ಎಚ್ಚರಿಸಿದ್ದಾರೆ ಬಸವಣ್ಣನವರು. ಜಂಗಮ ಜಾತಿಯಲ್ಲ ಅದು ಸಮಾಜ. ಲಿಂಗ ತತ್ವವನ್ನು ಪ್ರಾಣದಲ್ಲಿ ಇತ್ತು ನಿರುಪಾದಿತವಾಗಿ ಗೌರವಿಸುವ ಸುಂದರ ಸಮತೆಯ ವ್ಯವಸ್ಥೆ- ಇಂತಹ ಸಮತೆಯ ಜಂಗಮ ವ್ಯವಸ್ಥೆಯನ್ನು ಬಸವಣ್ಣ ಮತ್ತು ಶರಣರು ಅರಿತು ಆಚರಿಸಿದಲ್ಲದೆ ಅವರು ತಾವು ಕಂಡ ಸತ್ಯವನ್ನು ಮುಕ್ತ ವಚನಗಳಲ್ಲಿ ವ್ಯಕ್ತಗೊಳಿಸಿದ್ದಾರೆ. ಅನುಭಾವವೇ ಜಂಗಮ -ಜಂಗಮವೂ ಕೂಡಾ ಉಪಾದಿತ ವ್ಯವಸ್ಥೆಯಲ್ಲ. ಶ್ರೇಣೀಕೃತ ವ್ಯವಸ್ಥೆಯನ್ನು ಸರಳಗೊಳಿಸುವ ಜಂಗಮ ನೀತಿಯು ಮುಂದೊಂದು ದಿನ ಜಾತಿ ವ್ಯವಸ್ಥೆಗೆ ಕಾರಣವಾಯಿತು ಎಂದೆನಿಸಿದೆ. ಜಾತಿ ಜಂಗಮವು ಲಿಂಗಾಯತರೊಳಗಿನ ಬ್ರಾಹ್ಮಣೀಕರಣವಾಗಿ ನಿರ್ಮಾಣವಾಯಿತು. ಇಂತಹ ಜಂಗಮವು ಮೇಲು ಕೀಳು ಸೃಷ್ಟಿಸಿದ ಉಚ್ಚ ನೀಚ ಪದ್ಧತಿಯನ್ನು ಮರು ಸೃಷ್ಟಿಸಿದ ಉಪಕರಣವಾಯಿತು.
ಅಷ್ಟಾವರಣ
ಅಷ್ಟಾವರಣವು ಬಸವ ಪೂರ್ವದಲ್ಲಿದ್ದವು ಎಂದು ಕೆಲ ಶೈವವಾದಿಗಳು ಚರ್ಚಿಸುತ್ತಾರೆ. ಗುರು ಲಿಂಗ ಜಂಗಮ ವಿಭೂತಿ, ಮಂತ್ರ ರುದ್ರಾಕ್ಷಿ, ಪಾದೋದಕ, ಪ್ರಸಾದ -ಇವುಗಳಿಗೆ ವೈಜ್ಞಾನಿಕ ಕಾರಣ ಕೊಟ್ಟು ಪಂಚ ಮಹಾಭೂತಗಳಿಂದ ಪಂಚೇಂದ್ರಿಯ ಅನುಭಕ್ಕೆ ಬಂದು ಪ್ರಸನ್ನತೆ ಮಾಡುವ ಕಾಯ ಗುಣವಾಗಿವೆ ಎಂದು ಶರಣರು ನಿರೂಪಿಸಿದರು. ಅದನ್ನೇ ಚಾಮರಸ ಹೀಗೆ ಹೇಳಿದ್ದಾನೆ.
“ಕಾಯದೊಳು ಗುರು ಲಿಂಗ ಜಂಗಮ
ದಾಯತವನರಿಯಲ್ಕೆ ಸುಲಭೋ
ಪಾಯದಿಂದಿದಿರಿಟ್ಟು ಬಾಹ್ಯಸ್ಥಲಕೆ ಕುರುಹಾಗಿ |
ದಾಯದೋರಿ ಸಮಸ್ತ ಭಕ್ತ ನಿ
ಕಾಯವನು ಪಾವನವ ಮಾಡಿದ
ರಾಯ ಪೂರ್ವಾಚಾರ್ಯ ಸಂಗನಬಸವ ಶರಣಾರ್ಥಿ|| ಚಾಮರಸ ( ಪ್ರಭು ಲಿಂಗ ಲೀಲೆ )”
ಶರೀರದಲ್ಲಿಯೇ ಇರುವ ಗುರು ಲಿಂಗ ಜಂಗಮ ತತ್ವವವನ್ನು ವಿಸ್ತಾರಗೊಳಿಸಿ ಆಚರಿಸುವ ಸಲುವಾಗಿ, ಸುಲಭ ಸಾಧನವೆಂಬ ಇಷ್ಟಲಿಂಗ (ಕುರುಹು) ವನ್ನು ಪರಿಕಲ್ಪಿಸಿಕೊಟ್ಟು, ಸಮಸ್ತ ಜನವರ್ಗವನ್ನು ಪಾವನ ಮಾಡಿದವನು ಬಸವಣ್ಣ. ಸನಾತನದಲ್ಲಿ ಗುರು ಸರ್ವ ಶ್ರೇಷ್ಠ ಅವನಿಂದಲೇ ಮುಕ್ತಿ ದಾರಿ ತೋರುವ ನಿಜ ಗುರು ಹರನಿಗಿಂತಲೂ ಶ್ರೇಷ್ಠ ಇಂತಹ ಅನೇಕ ಕಲ್ಪನೆಗಳು ಬಸವಣ್ಣನವರು ಕಿತ್ತೊಗೆದು ,ದೀಪದಿಂದ ದೀಪ ಹಚ್ಚುವ ಪರಿಕಲ್ಪನೆ ಅಥವಾ ಗುರು ತನ್ನ ಕಾರ್ಯ ನಿರ್ವಹಿಸಿ ತಾನು ಶಿಷ್ಯನಲ್ಲಿ ಒಂದಾಗಿ ತಾನು ಗುರು ಆತ ಶಿಷ್ಯ ಎಂಬ ಬೇರೆ ಭಾವವನ್ನು ಸಂಪೂರ್ಣ ಕಳೆದು ಕೊಳ್ಳುತ್ತಾನೆ.
ಶರಣರು ತಾನು ಮತ್ತು ಶಿವ ಒಂದು ಎಂದು ಸಾಧಿಸಿದ ಮೊದಲ ಪುರುಷರು.ಉಭಯ ಭಾವವನ್ನು ಎಲ್ಲಿಯೂ ಪ್ರತಿಪಾದಿಸದೆ ಅಂತಹ ಸಂದೇಹ ಗೊಂದಲಗಳನ್ನು ಕಿತ್ತು ಹಾಕಿದರು. ಮನುಷ್ಯ ತಾನು ತನ್ನ ಸುತ್ತಲಿನ ಜೀವ ಜಾಲದ ಚೈತನ್ಯವನ್ನು ಚಿತ್ಕಳೆಯನ್ನು ನಿರಾಕಾರದ ಶಿವನ ಪರಿಕಲ್ಪನೆಯನ್ನು ಸಾಕಾರ ಗೊಳಿಸಿ, ಮತ್ತೆ ನಿರಾಕಾರದ ನಿರುಪಾಧಿಕ ತತ್ವದ ಆಧ್ಯಾತ್ಮಿಕ ಪಯಣಕ್ಕೆ ಕರೆದೊಯ್ಯುವುದೇ ಶರಣ ಮಾರ್ಗ.
ಪಂಚಾಚಾರ
ಸದಾಚಾರ ,ಶಿವಾಚಾರ, ಲಿಂಗಾಚಾರ, ಗಣಾಚಾರ, ಭೃತ್ಯಾಚಾರ -ಇವುಗಳನ್ನು ಕಟ್ಟು ನಿಟ್ಟಾಗಿ ಪಾಲಿಸಲು ಭಕ್ತರಿಗೆ ನೀತಿ ಸಂಹಿತೆಯನ್ನು ಬಸವಣ್ಣ ಮತ್ತು ಇತರ ಶರಣರು ರೂಪಿಸಿದರು. ಇವುಗಳ ವಿಸ್ತೃತ ಚರ್ಚೆಗೆ ಹೋಗದೆ ಭಕ್ತನಾದವನು ಈ ಎಲ್ಲಾ ಅಂಶಗಳನ್ನು ಪಾಲಿಸಿ ತಾನು ಅನನ್ಯತೆಯನ್ನು ಕಾಪಾಡಿಕೊಂಡು ತನ್ನಲ್ಲಿಯೇ ದೈವತ್ವವನ್ನು ಅಥವಾ ತಾನೇ ಲಿಂಗ ಸ್ವರೂಪಿಯಾಗಬೇಕೆನ್ನುವುದು ಶರಣರ ಪರಿಕಲ್ಪನೆ.
ಷಟಸ್ಥಲಗಳು
ಕಲ್ಯಾಣ ನಾಡಿನ ಅದರಲ್ಲೂ ಬಸವಣ್ಣನವರು ಜಗತ್ತಿಗೆ ನೀಡಿದ ವಿಶೇಷ ಕೊಡುಗೆ ಎಂದರೆ ಷಟಸ್ಥಲಗಳು.
ಭಕ್ತ -ಮಹೇಶ -ಪ್ರಸಾದಿ-ಪ್ರಾಣಲಿಂಗಿ -ಶರಣ- ಐಕ್ಯ ಸ್ಥಲ. ಒಬ್ಬ ಪರಿಪೂರ್ಣ ಭಕ್ತನ ಅಂತರಂಗದ ವಿಕಾಸ ಸ್ಥಿತಿ ,ಆಧ್ಯಾತ್ಮಿಕ ಬದುಕಿನ ಉನ್ನತ ಸ್ಥಾನಕ್ಕೊಯ್ಯುವ ಮತ್ತು ಶರಣ ಸತ್ಯ ಪಥದಲ್ಲಿ ಭಕ್ತನ ಶಕ್ತಿಯನ್ನು ಕೇಂದ್ರೀಕರಿಸುವ ಅದರಲ್ಲಿಯೇ ತನ್ನನ್ನು ಕಾಣುವ ಸುಂದರ ಉದಾತ ಭಾವಗಳ ಅನುಭವವೇ ಷಟಸ್ಥಲ.
ಕರ್ನಾಟಕದ ಮಣ್ಣಿನಲ್ಲಿ ಹುಟ್ಟಿ ಜಗತ್ತಿನ ಸರ್ವ ಶ್ರೇಷ್ಠ ದಾರ್ಶನಿಕರ ಸಾಲಿನಲ್ಲಿ ನಿಂತ ಅಪ್ರತಿಮ ಹೋರಾಟಗಾರ, ಕ್ರಾಂತಿ ಪುರುಷ ಸಮತೆಯ ಶಿಲ್ಪಿ, ಜಗತ್ತಿನ ಮೊದಲ ಸಂಸತ್ತನ್ನು ಸ್ಥಾಪಿಸದ ಮೇಧಾವಿ ಬಸವಣ್ಣ ಆಶಯಿಸಿದ್ದು ವ್ಯಕ್ತಿ ಸ್ವಾವಲಂಭಿಯಾಗಿ ತನ್ನ ದುಡಿಮೆಯ ಮೇಲೆ ತಾನು ಬದುಕಿ ಇನ್ನುಳಿದವರಿಗೂ ಬದುಕಿಸಿ ಪ್ರೀತಿ ಮಮತೆ ಸಮಾನತೆಯಿಂದ ಬದಕನು ಹಸನಾಗಿಸಬೇಕೆಂದು.
ಬಸವಣ್ಣನವರ ವಚನ ಚಳುವಳಿ ಸಾರ್ವತ್ರಿಕ ಮತ್ತು ಸರ್ವಕಾಲಿಕವಾಗಿವೆ.

ಲಿಂಗಾಯತ ಧರ್ಮವು ಯಾವುದು?

ಲಿಂಗಾಯತ ಧರ್ಮವು ಮಠಗಳ ಸಂಸ್ಕೃತಿಯದ್ದಲ್ಲ IT HAS REJECTED MONARCHY. ಅದು ಮಹಾ ಮನೆಯ ಸಂಸ್ಕೃತಿ.
ಲಿಂಗಾಯತ ಧರ್ಮವು ಬ್ರಹ್ಮಚರ್ಯೆ ವಿರೋಧಿಸುತ್ತದೆ. ಅದು ಪ್ರಾಪಂಚಿಕ ಸಾಂಸಾರಿಕ ತತ್ವವನ್ನು ಬೋಧಿಸುತ್ತದೆ. ಇಂದ್ರಿಯ ನಿಗ್ರಹ ಮಹಾಪಾಪ.
ಲಿಂಗಾಯತ ಧರ್ಮವು ಬಾಹ್ಯದಲ್ಲಿ ದೇವರನ್ನು ಕಾಣುವುದಿಲ್ಲ. ತನ್ನ ಅಂತರೊಳಗೆ ದೇವರನ್ನು ಕಾಣುವುದು. ಮಾನವ ಮಹದೇವನಾಗುವದು.
ಲಿಂಗಾಯತ ಧರ್ಮವು ದಾನ ವಿರೋಧಿಸುತ್ತುದೆ, ಆದರೆ ದಾಸೋಹವನ್ನು ಪ್ರೋತ್ಸಾಹಿಸುತ್ತದೆ.
ಲಿಂಗಾಯತ ಧರ್ಮವು ವೇದ ಶಾಸ್ತ್ರ ಆಗಮ ವಿರೋಧಿಸುತ್ತದೆ. ಆದರೆ ವಚನಗಳೇ ಶಾಸನವೆನ್ನುತ್ತದೆ. ವಚನಗಳ ಬದುಕಿನ ಅನುಭವ ಚಿಂತನ.
ಲಿಂಗಾಯತ ಧರ್ಮವು ಮಾಟ ಮಂತ್ರ ಮೂಢ ನಂಬಿಕೆ ಖಂಡಿಸುತ್ತದೆ. ವೈಜ್ಞಾನಿಕತೆ ವೈಚಾರಿಕತೆ ಬೆಳೆಸುತ್ತದೆ. ತರ್ಕವನ್ನು ನಂಬುತ್ತದೆ.
ಲಿಂಗಾಯತ ಧರ್ಮವು ಪಂಚಾಂಗ ಮುಹೂರ್ತ ಘಳಿಗೆ ಒಪ್ಪುವದಿಲ್ಲ. ಸರ್ವಕಾಲ ಸುಮಂಗಲ ನಾಳೆ ಬರುವುದು ನಮಗಿಂದೇ ಬರಲೆನ್ನುವ ದಿಟ್ಟ ಧ್ಯೇಯ.
ಲಿಂಗಾಯತ ಧರ್ಮದಲ್ಲಿ ಗುಲಾಮಗಿರಿ ದಾಸ್ಯತ್ವವಿಲ್ಲ, ಭಕ್ತನಲ್ಲಿ ಸ್ವಾಭಿಮಾನ ಸ್ವತಂತ್ರತೆಯಿದೆ. ಹಸಿ ದುಡಿದರೆ ತನಗುಂಟು ತನ್ನ ಪ್ರಮಥರಿಗುಂಟು.
ಲಿಂಗಾಯತ ಧರ್ಮವು ಆಡಂಬರ ಮೆರವಣಿಗೆ ಒಪ್ಪುವದಿಲ್ಲ. ಸರಳ ಸತ್ಯ ಶುದ್ಧ ಮೌಲ್ಯಯುತ ತತ್ವಗಳ ಆಚರಣೆ.
ಲಿಂಗಾಯತ ಧರ್ಮವು ಸ್ಥಾವರ ಮೂರ್ತಿ ವಿರೋಧಿಸುತ್ತದೆ. ಲಿಂಗಯೋಗ ನಿರಾಕಾರ ನಿರುಪಾದಿತ ಲಿಂಗ ತತ್ವವನ್ನು ಒಪ್ಪುತ್ತದೆ.
ಲಿಂಗಾಯತ ಧರ್ಮವು ಜಡ ವಿರೋಧಿ, ಪ್ರಕೃರ್ತಿದತ್ತ ನಿಸರ್ಗ ಜಂಗಮಪ್ರೇಮಿ ಚೈತನ್ಯದಾಯಕ ಕ್ರಿಯಾಶೀಲತೆಯಲ್ಲಿ ಭಕ್ತ ಆನಂದ.
ಲಿಂಗಾಯತ ಧರ್ಮವು ಪ್ರಾಣಿ ಬಲಿ, ಸುಲಿಗೆ, ಶೋಷಣೆ ಖಂಡಿಸುತ್ತದೆ. ಕಾಯಕ ದಾಸೋಹ ಕಡ್ಡಾಯ ಸಕಲ ಜೀವಿಗಳನ್ನು ಪ್ರೀತಿಸುವ ಸಿದ್ಧಾಂತವಾಗಿದೆ.
ಲಿಂಗಾಯತ ಧರ್ಮವು ಸೂತಕ ವಿರೋಧಿಸುತ್ತದೆ, ಹುಟ್ಟು ಸಾವು ಸಹಜ ಕ್ರಿಯೆಗಳ ಧರ್ಮ.
ಲಿಂಗಾಯತ ಧರ್ಮವು ಜಗತ್ತಿನಲ್ಲಿ ಸಾಂಸ್ಥಿಕರಣ ವಿರೋಧಿಸಿದ ಏಕ ಮೇವ ಧರ್ಮ. ಚರ್ಚು, ಗುಡಿ, ಮಠ, ಆಶ್ರಮ, ಬಸದಿ, ಮಸೀದೆ, ಗುರುದ್ವಾರ, ಬಸದಿಗಳಿಲ್ಲದ ಮುಕ್ತ ಸಮಾಜವನ್ನು ಕಟ್ಟಿದ ಶರಣರು ಜಗತ್ತಿನ ಸಮತೆಯ ಶಾಂತಿಯ ರಾಯಭಾರಿಗಳು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಗ್ರಾಪಂಗಳಿಗೆ ಮೂಲಸೌಲಭ್ಯಗಳನ್ನು ಒದಗಿಸಿ ಆಡಳಿತ ಬಲಪಡಿಸಲು ಕ್ರಮ

ಮಾ.08 ರಂದು ಕಬ್ಬು ನುರಿಸುವ ಹಂಗಾಮ ಮುಕ್ತಾಯ ; ರೈತರಿಗೆ ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಕಾರ್ಖಾನೆಯ ಪ್ರಕಟಣೆ

ಜೇವೂರ ಗ್ರಾಮದ ಹಠಯೋಗಿ ಶ್ರೀ ರೇವಣಸಿದ್ಧೇಶ್ವರ ಮಹಾಸ್ವಾಮಿಗಳ ಪುಣ್ಯಾರಾಧನೆ .

ಅನ್ನದಾತರ ಸಮೃದ್ಧಿಯಲ್ಲಿ ನಮಗೆ ಸಂತೃಪ್ತಿ ಇದೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಗ್ರಾಪಂಗಳಿಗೆ ಮೂಲಸೌಲಭ್ಯಗಳನ್ನು ಒದಗಿಸಿ ಆಡಳಿತ ಬಲಪಡಿಸಲು ಕ್ರಮ
    In (ರಾಜ್ಯ ) ಜಿಲ್ಲೆ
  • ಮಾ.08 ರಂದು ಕಬ್ಬು ನುರಿಸುವ ಹಂಗಾಮ ಮುಕ್ತಾಯ ; ರೈತರಿಗೆ ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಕಾರ್ಖಾನೆಯ ಪ್ರಕಟಣೆ
    In (ರಾಜ್ಯ ) ಜಿಲ್ಲೆ
  • ಜೇವೂರ ಗ್ರಾಮದ ಹಠಯೋಗಿ ಶ್ರೀ ರೇವಣಸಿದ್ಧೇಶ್ವರ ಮಹಾಸ್ವಾಮಿಗಳ ಪುಣ್ಯಾರಾಧನೆ .
    In (ರಾಜ್ಯ ) ಜಿಲ್ಲೆ
  • ಅನ್ನದಾತರ ಸಮೃದ್ಧಿಯಲ್ಲಿ ನಮಗೆ ಸಂತೃಪ್ತಿ ಇದೆ
    In (ರಾಜ್ಯ ) ಜಿಲ್ಲೆ
  • ಸರ್ಕಾರದಿಂದ ಮೈಸೂರು ಜಿಲ್ಲೆಗೆ 5 ಕೋಟಿ 19 ಲಕ್ಷ ಅನುದಾನ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿಯಲ್ಲಿ ಭಾವೈಕ್ಯತಾ ದಿನಾಚರಣೆ…
    In (ರಾಜ್ಯ ) ಜಿಲ್ಲೆ
  • ಮಾ.೯ರಂದು ಭೀಮ ಗಾಯನ ಕಾರ್ಯಕ್ರಮ ಯಶಸ್ವಿಗೆ ಕೈಜೋಡಿಸಿ
    In (ರಾಜ್ಯ ) ಜಿಲ್ಲೆ
  • ಮಾ.೯ರಂದು ಪ್ರಧಾನ ಮಂತ್ರಿ ರಾಷ್ಟ್ರೀಯ ಶಿಶುಕ್ಷು ಮೇಳ
    In (ರಾಜ್ಯ ) ಜಿಲ್ಲೆ
  • ಹೋಳಿ ಹಬ್ಬ ಆಚರಣೆ: ವಿಶೇಷ ದಂಡಾಧಿಕಾರಿಗಳ ನೇಮಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ಬೇಡಿಕೆಗಳ ಈಡೇರಿಕೆಗೆ ಮಾ.೧೧ ರಿಂದ ೧೫ವರೆಗೆ ಮುಷ್ಕರಕ್ಕೆ ನಿರ್ಧಾರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.