ವಿಜಯಪುರ: ಜಿಲ್ಲಾಡಳಿತ, ಜಿಲ್ಲಾಪಂಚಾಯತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಆದಿ ಶ್ರೀ ಶಂಕರಾಚಾರ್ಯರ ಜಯಂತಿಯನ್ನು ರಾಜ್ಯ ವಿಧಾನಸಭಾ ಚುನಾವಾಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸರಳವಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಅವರು ಆದಿ ಶ್ರೀ ಶಂಕರಾಚಾರ್ಯ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ,ಆದಿ ಶಂಕರಾಚಾರ್ಯರು ಸಮಾಜದ ಸುಧಾರಣೆಗಾಗಿ ದೇಶಾದ್ಯಂತ ಸಂಚರಿಸಿ, ಭಾರತ ಸಂಸ್ಕೃತಿಯನ್ನು ಎತ್ತಿಹಿಡಿದು, ಭಾರತೀಯ ಸಂಸ್ಕೃತಿ ಬೆಳವಣಿಗೆಗೆ ಕಾರಣರೆನಿಸಿಕೊಂಡರು ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಬಿ. ನಾಗರಾಜ್, ಸೇರಿದಂತೆ ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment