ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಅಭಿಮತ
ಉದಯರಶ್ಮಿ ದಿನಪತ್ರಿಕೆ
ಹುಬ್ಬಳ್ಳಿ: ರೋಗಿಗಳ ಸೇವೆಯಲ್ಲಿ ಕೀಮ್ಸ್ ವೈದ್ಯರ ಪಾತ್ರ ಅನನ್ಯವಾಗಿದ್ದು. ವಿಶೇಷವಾಗಿ ಮಕ್ಕಳ ಚಿಕಿತ್ಸಾ ವಿಭಾಗವನ್ನು ಅತ್ಯಾಧುನಿಕ ಉಪಕರಣಗಳೊಂದಿಗೆ ಮಕ್ಕಳ ಆರೋಗ್ಯ ಸೇವೆಯಲ್ಲಿ ನಿರತರಾಗಿರುವ ಇಲ್ಲಿಯ ವೈದ್ಯರು ಆಸ್ಪತ್ರೆಯ ಸಮಸ್ತ ಸಿಬ್ಬಂದಿ ವರ್ಗ ನೀಡುತ್ತಿರುವ ಗುಣಮಟ್ಟದ ವೈದ್ಯಕೀಯ ಸೇವೆ ಈ ಭಾಗದ ಮಕ್ಕಳಿಗೆ ಮತ್ತು ರೋಗಿಗಳಿಗೆ ವರದಾನವಾಗಿದೆ ಎಂದು ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ ಹೇಳಿದರು.
ಶುಕ್ರವಾರ ಅವರು ಪ್ರತಿಷ್ಠಿತ ಹುಬ್ಬಳ್ಳಿಯ ಕೀಮ್ಸ್ ವೈದ್ಯಕೀಯ ಮಹಾವಿದ್ಯಾಲಯದ ಮಕ್ಕಳ ಚಿಕಿತ್ಸಾ ಘಟಕ, ಅಪೌಷ್ಟಿಕ ಮಕ್ಕಳ ಪುನರ್ವಸತಿ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿರುವ ವ್ಯವಸ್ಥೆಯನ್ನು ಪರಿಶೀಲಿಸಿದ ಅವರು ಉಪಸ್ಥಿತರಿದ್ದ ವೈದ್ಯರ ಮತ್ತು ಸಿಬ್ಬಂದಿ ವರ್ಗಕ್ಕೆ ಅಗತ್ಯ ಸೂಚನೆಗಳನ್ನು ನೀಡಿದರು.
ಕರ್ನಾಟಕ ವೈದ್ಯಕೀಯ ಮಹಾವಿದ್ಯಾಲಯದ ನಿರ್ದೇಶಕರಾದ ಡಾ ಎಸ್ ಎಫ್ ಕಮ್ಮಾರ, ಧಾರವಾಡ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಶ್ರೀಮತಿ ನೀತಾ ವಾಡ್ಕರ ಕೀಮ್ಸ್ನ ವಿವಿಧ ವಿಭಾಗಗಳ ವೈದ್ಯಾಧಿಕಾರಿಗಳು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

