ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ವಿಶ್ವ ಮಧುಮೇಹ ದಿನದ ಅಂಗವಾಗಿ ನಗರದ ಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ನವೆಂಬರ್ 11 ಸೋಮವಾರದಿಂದ ನವೆಂಬರ್ 16 ಶನಿವಾರದವರೆಗೆ
ಪಾದರೋಗದ ಉಚಿತ ತಪಾಸಣೆ ಹಾಗೂ ಚಿಕಿತ್ಸೆ ಸಪ್ತಾಹ ಶಿಬಿರ
ನಡೆಯಲಿದೆ.
ನವೆಂಬರ್ 14 ರಂದು ವಿಶ್ವ ಮಧುಮೇಹ ದಿನದ ಅಂಗವಾಗಿ ಬಿ.ಎಲ್.ಡಿ.ಇ ಆಸ್ಪತ್ರೆಯ ಶಸ್ತ್ರಚಿಕಿತ್ಸೆ ವಿಭಾಗ ಮತ್ತು ವಿಜಯಪುರ ಜಿಲ್ಲಾ ಶಸ್ತ್ರಚಿಕಿತ್ಸಕರ ಸಂಘದ ಸಹಯೋಗದಲ್ಲಿ ಈ ಶಿಬಿರ ಆಯೋಜಿಸಲಾಗಿದೆ. ಆಸ್ಪತ್ರೆಯ ಶಸ್ತ್ರಚಿಕಿತ್ಸೆ ಓ.ಪಿ.ಡಿ ನಂ.10. ರಲ್ಲಿ ಈ ಶಿಬಿರ ನಡೆಯಲಿದೆ. ಈ ಶಿಬಿರದಲ್ಲಿ ತಪಾಸಣೆ, ಚಿಕಿತ್ಸೆ ಹಾಗೂ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಆರೋಗ್ಯ ಮಾಹಿತಿ ನೀಡಲಾಗುವುದು. ಅಲ್ಲದೇ, ರಕ್ತ ಮತ್ತು ಮೂತ್ರ ತಪಾಸಣೆ, ಬಯೋತಿಸಿಯೋ ಮೀಟರ: ಅಂಗಾಂಗಗಳ ಕಂಪನ ಜ್ಞಾನ, ಮೋನೋಫಿಲಾಮೆಂಟ್: ಸ್ಪರ್ಷದೋಷ, ಹ್ಯಾರಿಸ್ ಮ್ಯಾಟ್: ಒತ್ತಡ ಅಂಕಗಳನ್ನು ತಪಾಸಣೆ ಮಾಡಲಾಗುವದು. ಅಗತ್ಯವಿರುವ ಮಧುಮೇಹಿಗಳು ಉಚಿತ ತಪಾಸಣೆ ಶಿಬಿರದ ಪ್ರಯೋಜನ ಪಡೆಯಬೇಕು ಎಂದು ಶಿಬಿರದ ಸಂಚಾಲಕ ಮತ್ತು ಶಸ್ತ್ರಚಿಕಿತ್ಸೆ ವಿಭಾಗದ ಮುಖ್ಯಸ್ಥ ಡಾ. ಮಂಜುನಾಥ ಕೋಟೆಣ್ಣವರ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
