Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನಕಲಿ ಪತ್ರಕರ್ತರ ಮೇಲೆ ಕ್ರಮಕ್ಕೆ ಕೆಯುಡಬ್ಲೂಜೆ ಆಗ್ರಹ

ಐದಾರು ತಿಂಗಳಿಂದ ಸಾಮಾನ್ಯ ಸಭೆ ಮಾಡದ ನಾಲತವಾಡ ಪಪಂ

ದೂರಾದ ದಂಪತಿಗಳನ್ನು ಬೆಸೆದ ಲೋಕ್ ಅದಾಲತ್

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಕ್ಕಳ ಬುದ್ದಿಮತ್ತೆ ಚುರುಕಿಗೆ ರಸಪ್ರಶ್ನೆ ಪೂರಕ :ಜಾಲೋಜಿ
(ರಾಜ್ಯ ) ಜಿಲ್ಲೆ

ಮಕ್ಕಳ ಬುದ್ದಿಮತ್ತೆ ಚುರುಕಿಗೆ ರಸಪ್ರಶ್ನೆ ಪೂರಕ :ಜಾಲೋಜಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಎಸ್ಸೆಸ್ಸೆಲ್ಸಿ ಮಕ್ಕಳಿಗೆ ಪಠ್ಯಯಾಧಾರಿತ ರಸಪ್ರಶ್ನೆ ಕಾರ್ಯಕ್ರಮ | ಹರುಷದಿಂದ ಮಕ್ಕಳು ಭಾಗಿ | ಹಳದಿ, ಕೆಂಪು ತಂಡಕ್ಕೆ ಪ್ರಶಸ್ತಿ

ಉದಯರಶ್ಮಿ ದಿನಪತ್ರಿಕೆ

ಚಿಕ್ಕಪಡಸಲಗಿ: ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ವೃದ್ಧಿಗೊಸ್ಕರ ಗದುಗಿನ ತೋಂಟದಾರ್ಯ ವಿದ್ಯಾಪೀಠ ಸಂಸ್ಥೆಯ ಇಲ್ಲಿನ ಶಿವಶರಣ ಹರಳಯ್ಯ ಸ್ಮಾರಕ ಪ್ರೌಢಶಾಲಾ ಎಸ್ಸೆಸ್ಸೆಲ್ಸಿ ಮಕ್ಕಳಿಗಾಗಿ ಶುಕ್ರವಾರ ಪಠ್ಯಾಧಾರಿತ ವಿಷಯಗಳ ಕುರಿತು ರಸಪ್ರಶ್ನೆ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಮಧ್ಯಾಹ್ನದ ಅವಧಿಯಲ್ಲಿ ಹಮ್ಮಿಕೊಂಡಿದ್ದ ಕನ್ನಡ, ಇಂಗ್ಲೀಷ್, ಹಿಂದಿ, ವಿಜ್ಞಾನ, ಗಣಿತ,ಸಮಾಜ ವಿಜ್ಞಾನ ಈ ಎಲ್ಲ ಆರು ವಿಷಯವನ್ನು ಒಳಗೊಂಡ ರಸಪ್ರಶ್ನೆ ಕಾರ್ಯಕ್ರಮದಲ್ಲಿ ಮಕ್ಕಳು ಅತ್ಯಂತ ಉತ್ಸುಕರಾಗಿ ಪಾಲ್ಗೊಂಡಿದ್ದರು. ಕೇಳಲಾದ ಪ್ರಶ್ನೆಗಳಿಗೆ ಥಟ್ಟನೆ ಉತ್ತರ ನೀಡುತ್ತಾ ಪರಸ್ಪರ ಖುಷಿ,ಸಂಭ್ರಮ ಹಂಚಿಕೊಂಡರು. ಲವಲವಿಕೆಯ ಅಲೆಯಲ್ಲಿ ಮಿನುಗಿದರು.
ಬಾಲಕರ ವಿಭಾಗದ ರಸಪ್ರಶ್ನೆ ಕಾರ್ಯಕ್ರಮದಲ್ಲಿ ಸಂಗಮೇಶ ಹಿಪ್ಪರಗಿ ನೇತೃತ್ವದ ಹಳದಿ ತಂಡ 50 ಅಂಕ ಪಡೆದು ಪ್ರಥಮ ಸ್ಥಾನ ಪಡೆಯಿತು. ಆಕಾಶ ಬಡಿಗೇರ ನೇತೃತ್ವದ ಹಸಿರು ತಂಡ 45 ಅಂಕದೊಂದಿಗೆ ದ್ವೀತಿಯ ಸ್ಥಾನ ಪಡೆದರೆ ರಾಹುಲ ರಾಯಪ್ಪಗೋಳ ನಾಯಕತ್ವದ ಕೆಂಪು ತಂಡ 25 ಅಂಕ ಪಡೆದು ತೃತೀಯ ಸ್ಥಾನ ಗಳಿಸಿತು.
ಅದರಂತೆ ಬಾಲಕಿಯರ ವಿಭಾಗದಲ್ಲಿ ಐಶ್ವರ್ಯ ಬಜಂತ್ರಿ ನೇತೃತ್ವದ ಕೆಂಪು ತಂಡ ಅತ್ಯಾಧಿಕ ಪ್ರಶ್ನೆಗಳಿಗೆ ಸಮರ್ಪಕ ಉತ್ತರವನ್ನು ನೀಡಿ ಗೆಲುವು ಸಾಧಿಸಿತು. ಈ ತಂಡ 85 ಅಂಕ ಪಡೆಯುವ ಮೂಲಕ ಪ್ರಥಮ ಸ್ಥಾನದ ಪ್ರಾಬಲ್ಯ ಮೆರೆಯಿತು. ಗಾಯತ್ರಿ ಮರೆಗುದ್ದಿ ನೇತೃತ್ವದ ಹಸಿರು ತಂಡ 70 ಅಂಕ ಸಂಪಾದಿಸಿ ದ್ವೀತಿಯ ಸ್ಥಾನ ಗಳಿಸಿತು. ಬೌರಮ್ಮ ಕಲ್ಯಾಣಿ ನೇತೃತ್ವದಲ್ಲಿ ನೀಲಿ ತಂಡ 65 ಅಂಕ ಗಳಿಸಿದ ತೃತೀಯ ಸ್ಥಾನಕ್ಕೆ ತೃಪ್ತಿಪಟ್ಟಿತ್ತು. ವಿಜಯಿ ತಂಡಗಳಿಗೆ ಪ್ರಶಸ್ತಿ ಪತ್ರಗಳನ್ನು ನೀಡಿ ಪ್ರೋತ್ಸಾಹಿಸಲಾಯಿತು.
ಪ್ರಭಾರ ಮುಖ್ಯೋಪಾಧ್ಯಾಯ ಬಸವರಾಜ ಜಾಲೋಜಿ ಮಾರ್ಗದರ್ಶನದಲ್ಲಿ ರಸಪ್ರಶ್ನೆ ಕಾರ್ಯಕ್ರಮ ಅಚ್ಚುಕಟ್ಟಾಗಿ ಆಯೋಜಿಸಲಾಗಿತ್ತು.
ಈ ವೇಳೆ ಅವರು ಮಾತನಾಡಿ, ರಸಪ್ರಶ್ನೆ ಕಾರ್ಯಕ್ರಮ ಮಕ್ಕಳ ಬುದ್ಧಿ ಮತ್ತೆ ಚುರುಕಿಗೆ ಸಹಕಾರಿಯಾಗಿದೆ. ಜ್ಞಾನ ಸಂಗ್ರಹಕ್ಕೆ ಪೂರಕವಾಗಿದೆ. ಮಿಂಚಿನ ವೇಗದಲ್ಲಿ ಪ್ರಶ್ನೆಗಳಿಗೆ ಉತ್ತರಿಸುವ ಕೌಶಲ್ಯ, ದಿಟ್ಟ ಸಾಮಥ್ರ್ಯ ವೃದ್ಧಿಸುತ್ತದೆ. ಸ್ಪಧಾ೯ತ್ಮಕ ಯುಗದಲ್ಲಿಂದು ರಸಪ್ರಶ್ನೆದಂಥ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಮಕ್ಕಳು ಭಾಗವಹಿಸಬೇಕು. ಇದರಿಂದ ತ್ವರಿತವಾಗಿ ಭಾವಾಭಿವ್ಯಕ್ತಗೊಳಿಸುವ ಮನೋಸ್ಥೈರ್ಯದ ಬಲವನ್ನು ನಿಮ್ಮ ಮಸ್ತಕದಲ್ಲಿ ಹೊಂದುವುದರ ಮೂಲಕ ಶೈಕ್ಷಣಿಕ ಜೀವನ ಚೈತ್ರದ ಪಥದಲ್ಲಿ ರಾರಾಜಿಸಬೇಕು. ಉತ್ತಮ ನಾಗರಿಕ ಚರಿತೆಯ ವ್ಯಕ್ತಿತ್ವವನ್ನು ಸಂಪಾದಿಸಿಕೊಳ್ಳಲು ಮುಂದಾಗಬೇಕು ಎಂದು ಸಲಹೆ ನೀಡಿದರು.
ಶಿಕ್ಷಕ ಲೋಹಿತ ಮಿಜಿ೯, ಈರಪ್ಪ ದೇಸಾಯಿ, ಶ್ರೀಶೈಲ ಹುಣಶಿಕಟ್ಟಿ, ಶಿಕ್ಷಕಿ ಸಹನಾ ಕಲ್ಯಾಣಿ (ಹತ್ತಳ್ಳಿ) ರಸಪ್ರಶ್ನೆ ಕಾರ್ಯಕ್ರಮ ನಿರೂಪಿಸಿದರು. ಹಿರಿಯ ಮಾರ್ಗದಶಿ೯ ಬಸವರಾಜ ಅನಂತಪೂರ, ಗುರುಮಾತೆ ಕವಿತಾ ಅಂಬಿ.ಪ್ರಮೀಳಾ ತೇಲಸಂಗ ಇತರರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನಕಲಿ ಪತ್ರಕರ್ತರ ಮೇಲೆ ಕ್ರಮಕ್ಕೆ ಕೆಯುಡಬ್ಲೂಜೆ ಆಗ್ರಹ

ಐದಾರು ತಿಂಗಳಿಂದ ಸಾಮಾನ್ಯ ಸಭೆ ಮಾಡದ ನಾಲತವಾಡ ಪಪಂ

ದೂರಾದ ದಂಪತಿಗಳನ್ನು ಬೆಸೆದ ಲೋಕ್ ಅದಾಲತ್

ಆಷಾಢ ಏಕಾದಶಿ ದಿಂಡಿಯಾತ್ರೆ, ಪಂಢರಾಪುರಕ್ಕೆ ಪಾದಯಾತ್ರೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನಕಲಿ ಪತ್ರಕರ್ತರ ಮೇಲೆ ಕ್ರಮಕ್ಕೆ ಕೆಯುಡಬ್ಲೂಜೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಐದಾರು ತಿಂಗಳಿಂದ ಸಾಮಾನ್ಯ ಸಭೆ ಮಾಡದ ನಾಲತವಾಡ ಪಪಂ
    In (ರಾಜ್ಯ ) ಜಿಲ್ಲೆ
  • ದೂರಾದ ದಂಪತಿಗಳನ್ನು ಬೆಸೆದ ಲೋಕ್ ಅದಾಲತ್
    In (ರಾಜ್ಯ ) ಜಿಲ್ಲೆ
  • ಆಷಾಢ ಏಕಾದಶಿ ದಿಂಡಿಯಾತ್ರೆ, ಪಂಢರಾಪುರಕ್ಕೆ ಪಾದಯಾತ್ರೆ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ ತಾಲ್ಲೂಕು ಬರಪೀಡಿತ ಪ್ರದೇಶವೆಂದು ಘೋಷಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಪ್ರಕರಣ ಶೀಘ್ರ ಇತ್ಯರ್ಥಪಡಿಸುವಲ್ಲಿ ಲೋಕ್ ಅದಾಲತ್ ಪಾತ್ರ ಅನನ್ಯ
    In (ರಾಜ್ಯ ) ಜಿಲ್ಲೆ
  • ಮಹಿಳಾ ಘಟಕಗಳನ್ನು ಸ್ಥಾಪಿಸಿ ಜೆಡಿಎಸ್ ಬಲವರ್ಧನೆಗೆ ಶ್ರಮಿಸಿ
    In (ರಾಜ್ಯ ) ಜಿಲ್ಲೆ
  • ತುಬಚಿ-ಬಬಲೇಶ್ವರ ಏತ ನೀರಾವರಿಯಿಂದ ನೀರು ಹರಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ವಿಶ್ವ ಜನಸಂಖ್ಯಾ-ಡೆಂಗೀ ಮಾಸಾಚರಣೆ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಕೃಷ್ಣೆಗೆ ಇಳಿದು ರೈತರ ವಿನೂತನ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.