ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಮೌಲಾನಾ ಅಜಾದ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ಮೌಲಾನಾ ಅಜಾದ ಅವರ ಜನ್ಮ ದಿನದ ಪ್ರಯುಕ್ತ ‘ರಾಷ್ಟ್ರೀಯ ಶಿಕ್ಷಣ ದಿನ’ ಕಾರ್ಯಕ್ರಮ ಇದೇ ದಿ.೧೧ ರಂದು ಮಧ್ಯಾಹ್ನ ೩.೦೦ ಗಂಟೆಗೆ ವಿವಿಯ ಡಾ.ಬಿ.ಆರ್. ಅಂಬೇಡ್ಕರ್ ಸಭಾಭವನದಲ್ಲಿ ಜರುಗಲಿದೆ.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯ ಶಿಕ್ಷಣ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಪ್ರೊ. ಸುರೇಶ ಸಮ್ಮಸಗಿ ಭಾಗವಹಿಸಲಿದ್ದು, ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ.ಎಚ್.ಎಂ.ಚಂದ್ರಶೇಖರ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಿಳಾ ವಿವಿಯ ಕುಲಪತಿ ಪ್ರೊ.ಬಿ.ಕೆ ತುಳಸಿಮಾಲ ವಹಿಸಲಿದ್ದಾರೆ ಎಂದು ಮೌಲಾನಾ ಅಜಾದ ಅಧ್ಯಯನ ಕೇಂದ್ರದ ಸಂಯೋಜಕ ಡಾ. ಗುಲಾಬ ರಾಠೋಡ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
