Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನೆನಪುಗಳ ಮಳಿಗೆಯಲಿ ಇನ್ನಾರಿಲ್ಲ ನಿನ್ನ ಹೊರತು

ಸೆ.೬ರಂದು ಮಾಂಗಲ್ಯ ಭವನದಲ್ಲಿ ಗುರುಸ್ಮರಣೆ ಕಾರ್ಯಕ್ರಮ

ಬರಗಾಲ ಘೋಷಣೆಗೆ ಆಗ್ರಹಿಸಿ ಯಡ್ರಾಮಿ ಬಂದ್!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಾಂಸ್ಕ್ರತಿಕ ಚಟುವಟಿಕೆ ಶಿಕ್ಷಣದ ಮುಖ್ಯ ಅಂಗ :ಟಿ.ಮಲ್ಲೇಶ್
(ರಾಜ್ಯ ) ಜಿಲ್ಲೆ

ಸಾಂಸ್ಕ್ರತಿಕ ಚಟುವಟಿಕೆ ಶಿಕ್ಷಣದ ಮುಖ್ಯ ಅಂಗ :ಟಿ.ಮಲ್ಲೇಶ್

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಬಸವನಬಾಗೇವಾಡಿ: ಕ್ರೀಡೆ, ಸಾಂಸ್ಕ್ರತಿಕ ಚಟುವಟಿಕೆಗಳು ಶಿಕ್ಷಣದ ಪ್ರಮುಖ ಅಂಗವಾಗಿವೆ. ವಿದ್ಯಾರ್ಥಿಗಳು ತಮ್ಮ ಪಠ್ಯ ಚಟುವಟಿಕೆಗಳ ಜೊತೆಯಲ್ಲಿ ಕ್ರೀಡೆ, ಸಾಂಸ್ಕ್ರತಿಕ ಚಟುವಟಿಕೆಗಳಲ್ಲಿಯೂ ಭಾಗವಹಿಸುವಂತಾಗಬೇಕೆಂದು ವಿಜಯಪುರ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಟಿ.ಮಲ್ಲೇಶ್ ಹೇಳಿದರು.
ಪಟ್ಟಣದ ಬಿಎಲ್ಡಿಇ ಸಂಸ್ಥೆಯ ಬಸವೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಮಹಾವಿದ್ಯಾಲಯದ ಶೈಕ್ಷಣಿಕ ವರ್ಷದ ಕ್ರೀಡಾ ಹಾಗೂ ಸಾಂಸ್ಕ್ರತಿಕ ಚಟುವಟಿಕೆಗಳ ಉದ್ಘಾಟನೆ ಹಾಗೂ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪಠ್ಯ ಶಿಕ್ಷಣ, ಕ್ರೀಡೆ ಹಾಗೂ ಕಲೆ ಮತ್ತು ಸಂಸ್ಕ್ರತಿ ವಿಭಾಗಗಳು ಶಿಕ್ಷಣದ ಅವಿಭಾಜ್ಯ ಅಂಗವಾಗಿವೆ ಎಂಬುವದನ್ನು ಪೋಷಕರು, ವಿದ್ಯಾರ್ಥಿಗಳು ಅರಿತುಕೊಳ್ಳಬೇಕು. ಶೈಕ್ಷಣಿಕವಾಗಿ ಬೆಳವಣಿಗೆಯಾಗುವ ಜೊತೆಗೆ ಕ್ರೀಡೆ, ಸಾಂಸ್ಕ್ರತಿಕವಾಗಿ ವಿದ್ಯಾರ್ಥಿಗಳು ಬೆಳವಣಿಗೆಯಾಗಲು ಈ ವಿಷಯಗಳಲ್ಲಿಯೂ ವಿದ್ಯಾರ್ಥಿಗಳು ಆಸಕ್ತಿ ಬೆಳೆಸಿಕೊಳ್ಳಬೇಕು. ಇದಕ್ಕೆ ಪೋಷಕರ ಪ್ರೋತ್ಸಾಹ ಅಗತ್ಯವಿದೆ. ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಹೊರಹಾಕುವಂತಾದರೆ ಅದು ದೇಶದ ಆಸ್ತಿಯಾಗುತ್ತದೆ ಎಂದರು.
ಮುಖ್ಯ ಅತಿಥಿ ಸ್ಥಾನ ವಹಿಸಿದ್ದ ವಿಜಯಪುರದ ಎ.ಎಸ್.ಪಿ.ವಾಣಿಜ್ಯ ಮಹಾವಿದ್ಯಾಲಯದ ಪ್ರಾಚಾರ್ಯ ಬಿ.ಎಸ್.ಬೆಳಗಲಿ ಮಾತನಾಡಿ, ಮಹಾವಿದ್ಯಾಲಯಗಳು ದೇಶದ ಭವಿಷ್ಯ ನಿರ್ಮಿಸುವ ಶಕ್ತಿ ಕೇಂದ್ರಗಳಾಗಿವೆ. ನಾವೆಲ್ಲರೂ ಇದರ ಭಾಗವಾಗಿ ನಮ್ಮ ಸಾಮರ್ಥ್ಯ, ಕೌಶಲ್ಯಗಳನ್ನು ವ್ಯಕ್ತಪಡಿಸಿ ಉತ್ತಮ ವ್ಯಕ್ತಿತ್ವವನ್ನು ಕಾಲೇಜು ಹಂತದಲ್ಲಿಯೇ ರೂಪಿಸಿಕೊಳ್ಳಬೇಕು. ಜಗತ್ತಿನ ಅನೇಕ ಸಾಧಕರ ವಿದ್ಯಾರ್ಹತೆಯನ್ನು ಗಮನಿಸಿದರೆ ಕಡಿಮೆ ವಿದ್ಯಾರ್ಹತೆ ಹೊಂದಿದ್ದರೂ ಅವರು ಮಾಡಿರುವ ಸಾಧನೆ ಅಪ್ರತಿಮವಾಗಿದೆ. ನಾವು ಕೇವಲ ಸಂಬಳಕ್ಕಾಗಿ ದುಡಿಯುವ ವ್ಯಕ್ತಿಯಾಗದೇ ಸಂಬಳ ಕೊಡುವ ಉದ್ದಮೆದಾರರಾಗಬೇಕೆಂದರು.
ಸಾನಿಧ್ಯ ವಹಿಸಿದ್ದ ವಿರಕ್ತಮಠದ ಸಿದ್ದಲಿಂಗ ಸ್ವಾಮೀಜಿ ಮಾತನಾಡಿ, ವಿದ್ಯಾರ್ಥಿಗಳು ನೈತಿಕತೆ, ಮೌಲ್ಯಗಳನ್ನು ಅಳವಡಿಸಿಕೊಂಡು ಮುನ್ನಡೆಯೆಬೇಕು. ಯಾರೂ ಸಮಯಕ್ಕೆ ಮಹತ್ವ ನೀಡುತ್ತಾರೋ ಅವರಿಗೆ ಮಹತ್ವ ನೀಡುವ ಸಮಯ ಬರುತ್ತದೆ. ವಿದ್ಯಾರ್ಥಿಗಳು ಸಾಧಕರಾಗಿ ದೇಶ ಹೆಮ್ಮೆ ಪಡುವಂತೆ ಜೀವನ ನಡೆಸಬೇಕೆಂದರು.
ಅಧ್ಯಕ್ಷತೆ ವಹಿಸಿದ್ದ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಎ.ವ್ಹಿ.ಸೂರ್ಯವಂಶಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಐಕ್ಯೂಎಸಿ ಸಂಯೋಜಕ ಪ್ರೊ.ದಿಲೀಪಕುಮಾರ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಬಸವರಾಜ ನಾಯಕೋಡಿ, ಸಾಂಸ್ಕ್ರತಿಕ ಚಟುವಟಿಕೆಗಳ ಕಾರ್ಯಾಧ್ಯಕ್ಷ ಡಾ.ಬಿ.ಎಂ.ಸಾಲವಾಡಗಿ, ದೈಹಿಕ ನಿರ್ದೇಶಕ ವಿ.ಎನ್.ರಜಪೂತ, ಎಸ್.ಜೆ.ಸೂರ್ಯವಂಶಿ, ಪಿ.ಎಸ್.ನಾಟೀಕಾರ, ಪಿ.ಎಸ್.ಹೊರಕೇರಿ, ಎಂ.ಆರ್.ಮಮದಾಪೂರ, ಆರ್.ಎನ್.ರಾಠೋಡ, ಆರ್.ಎಂ.ಮುಜಾವರ, ಜಯರಾಮರೆಡ್ಡಿ ಇತರರು ಇದ್ದರು. ಗೀತಾ ಬಾಗೇವಾಡಿ ಸ್ವಾಗತ ಗೀತೆ ಹಾಡಿದರು. ಎಂ.ಕೆ.ಯಾದವ ಸ್ವಾಗತಿಸಿದರು. ಪ್ರೀತಿ ಚವ್ಹಾಣ, ರೂಪಾ ಅಂಬಳನೂರ ನಿರೂಪಿಸಿದರು. ಚಂದ್ರಶೇಖರ ರೆಡ್ಡಿ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನೆನಪುಗಳ ಮಳಿಗೆಯಲಿ ಇನ್ನಾರಿಲ್ಲ ನಿನ್ನ ಹೊರತು

ಸೆ.೬ರಂದು ಮಾಂಗಲ್ಯ ಭವನದಲ್ಲಿ ಗುರುಸ್ಮರಣೆ ಕಾರ್ಯಕ್ರಮ

ಬರಗಾಲ ಘೋಷಣೆಗೆ ಆಗ್ರಹಿಸಿ ಯಡ್ರಾಮಿ ಬಂದ್!

ಕೃಷ್ಣ-ವಾದಿರಾಜ ಮಠದಲ್ಲಿ ಧಾನ್ಯ ಪೂಜೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನೆನಪುಗಳ ಮಳಿಗೆಯಲಿ ಇನ್ನಾರಿಲ್ಲ ನಿನ್ನ ಹೊರತು
    In ವಿಶೇಷ ಲೇಖನ
  • ಸೆ.೬ರಂದು ಮಾಂಗಲ್ಯ ಭವನದಲ್ಲಿ ಗುರುಸ್ಮರಣೆ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಬರಗಾಲ ಘೋಷಣೆಗೆ ಆಗ್ರಹಿಸಿ ಯಡ್ರಾಮಿ ಬಂದ್!
    In (ರಾಜ್ಯ ) ಜಿಲ್ಲೆ
  • ಕೃಷ್ಣ-ವಾದಿರಾಜ ಮಠದಲ್ಲಿ ಧಾನ್ಯ ಪೂಜೆ
    In (ರಾಜ್ಯ ) ಜಿಲ್ಲೆ
  • ಸಾಧನೆಗೆ ಬಿಂದುವಿನಷ್ಟಿರುವ ಬಡತನ ಅಡ್ಡಿಯಾಗದಿರಲಿ :ಡಾ.ಜ್ಯೋತಿ
    In (ರಾಜ್ಯ ) ಜಿಲ್ಲೆ
  • ಸೆ.6 ರಂದು ಮಹಿಳೆಯರಿಗಾಗಿ ಪ್ರೋಮೋ ರನ್
    In (ರಾಜ್ಯ ) ಜಿಲ್ಲೆ
  • ಶ್ರೀ ಬಿ.ಎಂ.ಪಾಟೀಲ ಶಾಲೆಯಲ್ಲಿ ಕೃಷ್ಣ ಜನ್ಮಾಷ್ಟಮಿ
    In (ರಾಜ್ಯ ) ಜಿಲ್ಲೆ
  • ಹಿರೇಮನಿ ದಂಪತಿ ಸಮಾಜಮುಖಿ ಕಾರ್ಯಕ್ಕೆ ಶ್ಲಾಘನೆ
    In (ರಾಜ್ಯ ) ಜಿಲ್ಲೆ
  • ತಾಲೂಕಾಡಳಿತದ ವೈಫಲ್ಯ ಖಂಡಿಸಿ ಡಿಎಸ್ಸೆಸ್ ಅರೆಬೆತ್ತಲೆ ಮೆರವಣಿಗೆ
    In (ರಾಜ್ಯ ) ಜಿಲ್ಲೆ
  • ಬಿಜೆಪಿ ರೈತಮೋರ್ಚಾ ಧರಣಿ ಸತ್ಯಾಗ್ರಹ ಅಂತ್ಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.