ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆಯ ವಾರ್ಡ್ ಸಂಖ್ಯೆ 29ಕ್ಕೆ ಬೈ ನವೆಂಬರ್ 23 ರಂದು ಬೈ ಎಲೆಕ್ಷನ್ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಸಚಿವ ಎಂ. ಬಿ. ಪಾಟೀಲ ಅವರು ಶುಕ್ರವಾರ ಕಾಂಗ್ರೆಸ್ ಅಭ್ಯರ್ಥಿ ಬಾಬು ಏಳಕುಂಟೆ ಅವರಿಗೆ ಕಾಂಗ್ರೆಸ್ ಪಕ್ಷದ ಬಿ. ಫಾರಂ ನೀಡಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಲೋಣಿ, ಮಾಜಿ ಶಾಸಕ ಪ್ರೊ. ರಾಜು ಆಲಗೂಗರ, ಕಾಂಗ್ರೆಸ್ ಮುಖಂಡ ಅಬ್ದುಲ್ ಹಮೀದ್ ಮುಶ್ರೀಫ್, ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಡಾ. ಗಂಗಾಧರ ಸಂಬಣ್ಣಿ ಮುಂತಾದವರು ಉಪಸ್ಥಿತರಿದ್ದರು.

