ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಮಹಾನಗರ ಪಾಲಿಕೆ ವತಿಯಿಂದ ಡೇ-ನಲ್ಮ ಪ್ರಧಾನಮಂತ್ರಿ ಆತ್ಮ ನಿರ್ಭರ ನಿಧಿ ಯೋಜನೆಯಡಿ ಬ್ಯಾಂಕುಗಳಿಂದ ಹೊಸದಾಗಿ ಸಾಲ-ಸೌಲಭ್ಯಕ್ಕಾಗಿ ಬೀದಿ ಬದಿ ವ್ಯಾಪಾರಸ್ಥರಿಂದ ಅರ್ಜಿ ಆಹ್ವಾನಿಸಲಾಗಿದೆ.
ಸಾಲ-ಸೌಲಭ್ಯ ಪಡೆಯಲಿಚ್ಛಿಸುವ ಅರ್ಹ ಬೀದಿ ಬದಿ ವ್ಯಾಪಾರಸ್ಥರು ಆಧಾರ ಕಾರ್ಡ, ಬ್ಯಾಂಕ್ ಪಾಸ್ ಬುಕ್, ರೇಷನ್ ಕಾರ್ಡ ಮತ್ತು ಭಾವಚಿತ್ರದೊಂದಿಗೆ ಮಹಾನಗರ ಪಾಲಿಕೆ ಡೇ-ನಲ್ಮ ವಿಭಾಗಕ್ಕೆ ದಿನಾಂಕ : ೩೦-೧೧-೨೦೨೪ರೊಳಗಾಗಿ ಅರ್ಜಿ ಸಲ್ಲಿಸಿ, ಯೋಜನೆಯ ಸದುಪಯೋಗ ಪಡೆದುಕೊಳ್ಳಬಹುದಾಗಿದೆ ಎಂದು ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
