Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನಕಲಿ ಪತ್ರಕರ್ತರ ಮೇಲೆ ಕ್ರಮಕ್ಕೆ ಕೆಯುಡಬ್ಲೂಜೆ ಆಗ್ರಹ

ಐದಾರು ತಿಂಗಳಿಂದ ಸಾಮಾನ್ಯ ಸಭೆ ಮಾಡದ ನಾಲತವಾಡ ಪಪಂ

ದೂರಾದ ದಂಪತಿಗಳನ್ನು ಬೆಸೆದ ಲೋಕ್ ಅದಾಲತ್

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪಂಢರಪುರದತ್ತ ಸಹಸ್ರಾರು ಭಕ್ತರ ಪಾದಯಾತ್ರೆ
(ರಾಜ್ಯ ) ಜಿಲ್ಲೆ

ಪಂಢರಪುರದತ್ತ ಸಹಸ್ರಾರು ಭಕ್ತರ ಪಾದಯಾತ್ರೆ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ತಲೆಯ ಮೇಲೆ ತುಳಸಿ | ಕೈಯಲ್ಲಿ ತಾಳ ತಂಬೂರಿ | ಮನದಲ್ಲಿ ವಿಠಲ ಸ್ಮರಣೆ

ಉದಯರಶ್ಮಿ ದಿನಪತ್ರಿಕೆ

ವರದಿ: ಸಿದ್ರಾಮ ಮಾಳಿ
ಚಡಚಣ: ತಾಳ ಹಾಕುತ್ತಾ, ತಂಬೂರಿ ಬಾರಿಸುತ್ತಾ, ವಿಠ್ಠಲನ ಭಜಿಸುತ್ತಾ, ಹಣೆಯ ಮೇಲೆ ಅಷ್ಟಗಂಧ, ಕೈಯಲ್ಲಿ ವಿಠ್ಠಲನ ಧ್ವಜ, ತಲೆಯ ಮೇಲೆ ತುಳಸಿ ಹೊತ್ತು ಪ್ರಮುಖ ಯಾತ್ರಾ ಸ್ಥಳ ಪಂಢರಪುರಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿರುವ ಭಕ್ತರ ದಂಡನ್ನು ಈಗ ಕರ್ನಾಟಕ-ಮಹಾರಾಷ್ಟçದ ಗಡಿಯಲ್ಲಿ ಕಾಣಬಹುದಾಗಿದೆ.
ಪ್ರತಿವರ್ಷ ಕಾರ್ತಿಕ ಏಕಾದಶಿ ಬಂತೆಂದರೆ ಸಾಕು. ಮಹಾರಾಷ್ಟ್ರ, ಕರ್ನಾಟಕ, ಆಂಧ್ರಪ್ರದೇಶ ಮತ್ತು ತೆಲಂಗಾಣ ಪ್ರಾಂತಗಳಿಂದ ಲಕ್ಷಾಂತರ ಯಾತ್ರಾರ್ಥಿಗಳು ವಿಠಲನ ಕಾಣಲು ಪಂಢರಪುರದತ್ತ ಹೆಜ್ಜೆ ಹಾಕುವುದು ಸಂಪ್ರದಾಯ.
ನೂರಾರು ಕಿ.ಮೀ. ದೂರವನ್ನು ಬರಿಗಾಲಲ್ಲೇ ನಡೆದು ಸಾಗುವ ಭಕ್ತರ ಸಾಹಸ ಅಚ್ಚರಿ ಮೂಡಿಸುವಂತಹದು. ಹೆಣ್ಣು, ಗಂಡು, ಹಿರಿಯ, ಕಿರಿಯ, ಬಡವ, ಶ್ರೀಮಂತ ಎಂಬ ಬೇಧಬಾವವಿಲ್ಲದೇ ಊರಿಗೆ ಊರೇ ಒಂದಾಗಿ ವಿಠಲನ ದರ್ಶನಕ್ಕೆ ತೆರಳವುದು ಪರಂಪರಾಗತ ರೂಢಿಯಾಗಿದೆ.
ಸುಖಃ, ಶಾಂತಿ, ನೆಮ್ಮದಿ, ಆರೋಗ್ಯ, ಆಯುಷ್ಯ, ಸಿರಿತನ ಬಯಸಿ ಹರಕೆ ಹೊತ್ತ ಭಕ್ತರು ವಿಠಲ-ರುಕ್ಮಿಣಿಯ ಸನ್ನಿಧಿಗೆ ಹತ್ತಾರು ವರ್ಷಗಳಿಂದ ಬಿಡದೇ ತೆರಳುವುದು ವಿಶೇಷ. ಆಧುನಿಕತೆಯ ಭರಾಟೆ ನಡೆವೆಯೂ ವಿಠಲನ ಬಳಿಗೆ ನಡೆದು ಹೋಗುವವರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದೆಯೇ ಹೊರತು, ಕಡಿಮೆಯಾಗಿಲ್ಲ.
ಪಂಢರಪುರಕ್ಕೆ ಪಾದಯಾತ್ರೆ ಮೂಲಕ ತೆರಳುವ ಯಾತ್ರಾರ್ಥಿಗಳಿಗೆ ದಾರಿ ಉದ್ದಕ್ಕೂ ಉಚಿತ ಪ್ರಸಾದದ ವ್ಯವಸ್ಥೆಯನ್ನು ದಾನಿಗಳು, ವಿಠಲನಭಕ್ತರು ಮಾಡಿ, ತಾವೇ ಸ್ವತಃ ಅಡುಗೆ ತಯಾರಿಸಿ ಉಣಬಡಿಸುವುದು ವಿಶೇಷ.
ಅಂತೆಯೇ, ಈಗಾಗಲೇ ಪಂಢರಪುರದತ್ತ ತೆರಳುವ ಭಕ್ತರು ಕಾರ್ತಿಕ ಏಕಾದಶಿಯಂದು (ನ.೧೨) ನಡೆಯಲಿರುವ ವಿಶೇಷ ಪೂಜಾ ಕಾರ್ಯದಲ್ಲಿ ಪಾಲ್ಗೊಳ್ಳುವ ಮುನ್ನಾ ಚಂದ್ರಭಾಗ ನದಿ(ಭೀಮಾ)ಯಲ್ಲಿ ಪುಣ್ಯ ಸ್ನಾನ ಮಾಡಿ, ವಿಶೇಷ ಪೂಜೆ ಸಲ್ಲಿಸಿ, ಹಣತೆಯನ್ನು ತೇಲಿ ಬಿಡುತ್ತಾರೆ. ಬಳಿಕ ದಿನವಿಡಿ ಸರದಿಯಲ್ಲಿ ನಿಂತು ವಿಠಲ-ರುಕ್ಮಿಣಿಯ ದರ್ಶನ ಪಡೆದು, ಪುನೀತರಾಗಲಿದ್ದಾರೆ.
ಭಿಮಾ ನದಿಯ ತಟದಲ್ಲಿರುವ ಪ್ರಾಚೀನ ತೀರ್ಥಕ್ಷೇತ್ರವಾದ ಪಂಢರಪುರವನ್ನು ‘ಭೂವೈಕುಂಠ’ವೆಂದು ಭಕ್ತಿಯಿಂದ ಕರೆಯಲಾಗುತ್ತದೆ. ವಿಠ್ಠಲ-ರುಕ್ಮಿಣಿ ದೇವಾಲಯ ದಕ್ಷಿಣ ಭಾರತದಲ್ಲೇ ಅತ್ಯಂತ ಪ್ರಸಿದ್ಧವಾದ ದೇವಾಲಯವಾಗಿದ್ದು, ವಿಠಲ ಮತ್ತು ರುಕ್ಮಿಣಿಯರ ಆಕರ್ಷಕ ಮೂರ್ತಿಗಳು ಭಕ್ತರ ಕಣ್ಮನ ಸೆಳೆಯುತ್ತವೆ.
ಭಕ್ತಿ ಸಂಪ್ರದಾಯದ ಆದ್ಯಪೀಠ ಎನಿಸಿರುವ ಪಂಢರಪುರವು ಮಹಾರಾಷ್ಟ್ರದ ಏಕದೇವತಾವಾದಿ ವಾರಕಾರಿ ಪಂಥ ಮತ್ತು ಕರ್ನಾಟಕದ ಹರಿದಾಸ ಪಂಥಗಳ ಕೇಂದ್ರಬಿಂದುವಾಗಿದೆ.
ಜಾತಿ, ಮತ ಬೇಧವಿಲ್ಲದೇ ಭಕ್ತಜನ ಇಲ್ಲಿ ಸೇರುತ್ತಾರೆ. ಮರಾಠಿ, ಕನ್ನಡ, ತೆಲಗು ಸೇರಿದಂತೆ ಹಲವು ಭಾಷೆಗಳ ಭಕ್ತರ ಸಂಗಮ, ಸಮನ್ವಯ ಕ್ಷೇತ್ರವಾಗಿ ಪಂಢರಪುರ ರಾರಾಜಿಸುತ್ತಿದೆ. ದಾರಿ ಉದ್ದಕ್ಕೂ ದಾನಿಗಳಿಂದ ಉಚಿತ ಪ್ರಸಾದ ಭಕ್ತರಿಂದಲೇ ಅಡುಗೆ ತಯಾರಿ ಪಾದಯಾತ್ರಿಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಳವಾಗುತ್ತಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನಕಲಿ ಪತ್ರಕರ್ತರ ಮೇಲೆ ಕ್ರಮಕ್ಕೆ ಕೆಯುಡಬ್ಲೂಜೆ ಆಗ್ರಹ

ಐದಾರು ತಿಂಗಳಿಂದ ಸಾಮಾನ್ಯ ಸಭೆ ಮಾಡದ ನಾಲತವಾಡ ಪಪಂ

ದೂರಾದ ದಂಪತಿಗಳನ್ನು ಬೆಸೆದ ಲೋಕ್ ಅದಾಲತ್

ಆಷಾಢ ಏಕಾದಶಿ ದಿಂಡಿಯಾತ್ರೆ, ಪಂಢರಾಪುರಕ್ಕೆ ಪಾದಯಾತ್ರೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನಕಲಿ ಪತ್ರಕರ್ತರ ಮೇಲೆ ಕ್ರಮಕ್ಕೆ ಕೆಯುಡಬ್ಲೂಜೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಐದಾರು ತಿಂಗಳಿಂದ ಸಾಮಾನ್ಯ ಸಭೆ ಮಾಡದ ನಾಲತವಾಡ ಪಪಂ
    In (ರಾಜ್ಯ ) ಜಿಲ್ಲೆ
  • ದೂರಾದ ದಂಪತಿಗಳನ್ನು ಬೆಸೆದ ಲೋಕ್ ಅದಾಲತ್
    In (ರಾಜ್ಯ ) ಜಿಲ್ಲೆ
  • ಆಷಾಢ ಏಕಾದಶಿ ದಿಂಡಿಯಾತ್ರೆ, ಪಂಢರಾಪುರಕ್ಕೆ ಪಾದಯಾತ್ರೆ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ ತಾಲ್ಲೂಕು ಬರಪೀಡಿತ ಪ್ರದೇಶವೆಂದು ಘೋಷಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಪ್ರಕರಣ ಶೀಘ್ರ ಇತ್ಯರ್ಥಪಡಿಸುವಲ್ಲಿ ಲೋಕ್ ಅದಾಲತ್ ಪಾತ್ರ ಅನನ್ಯ
    In (ರಾಜ್ಯ ) ಜಿಲ್ಲೆ
  • ಮಹಿಳಾ ಘಟಕಗಳನ್ನು ಸ್ಥಾಪಿಸಿ ಜೆಡಿಎಸ್ ಬಲವರ್ಧನೆಗೆ ಶ್ರಮಿಸಿ
    In (ರಾಜ್ಯ ) ಜಿಲ್ಲೆ
  • ತುಬಚಿ-ಬಬಲೇಶ್ವರ ಏತ ನೀರಾವರಿಯಿಂದ ನೀರು ಹರಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ವಿಶ್ವ ಜನಸಂಖ್ಯಾ-ಡೆಂಗೀ ಮಾಸಾಚರಣೆ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಕೃಷ್ಣೆಗೆ ಇಳಿದು ರೈತರ ವಿನೂತನ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.