ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘವು ೬೯ನೆಯ ಕರ್ನಾಟಕ ರಾಜ್ಯೋತ್ಸವ ಸಂಭ್ರಮದ ಅಂಗವಾಗಿ ಶುಕ್ರವಾರ ಹಮ್ಮಿಕೊಂಡ ಧರೆಗೆ ದೊಡ್ಡವರು ವಿಶೇಷ ಕಾರ್ಯಕ್ರಮದಲ್ಲಿ ವಿಜಯಪುರ ಜಿಲ್ಲೆಯ ಸಿಂದಗಿಯ ಹಿರಿಯ ಮಕ್ಕಳ ಸಾಹಿತಿ ಹ.ಮ. ಪೂಜಾರ ಅವರನ್ನು ಧರೆಗೆ ದೊಡ್ಡವರು ಎಂದು ಗುರುತಿಸಿ ಸತ್ಕರಿಸಲಾಯಿತು.
ಮಕ್ಕಳ ಸಾಹಿತಿಗಳಾದ ಶಂಕರ ಹಲಗತ್ತಿ, ಶಾಂತಿ ನಾಯಕ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಫ.ಗು.ಸಿದ್ದಾಪೂರ, ಎಸ್.ಎಸ್.ಸಾತಿಹಾಳ ಸೇರಿದಂತೆ ಅನೇಕರು ವೇದಿಕೆಯ ಮೇಲೆ ಉಪಸ್ಥಿತರಿದ್ದರು.

