ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ಪಟ್ಟಣದ ಹಿರಿಯ ಜೀವಿ, ಶ್ರೀಪದ್ಮರಾಜ ವಿದ್ಯಾವರ್ಧಕ ಸಂಸ್ಥೆ ಸಾರಂಗಮಢದ ಸಂಸ್ಥಾಪಕ ನಿರ್ದೇಶಕರು, ಭೂದಾನಿಗಳು ಹಾಗೂ ದೈಹಿಕ ಮಹಾವಿದ್ಯಾಲಯದ ನಿವೃತ್ತ ಪ್ರಾಚಾರ್ಯ ರೇವಣಸಿದ್ದಪದಪ ಬೂದಿಹಾಳ ನಂ.೦೯ರಂದು ದೈವಾದೀನರಾದ ಪ್ರಯುಕ್ತ ಪಟ್ಟಣದ ಶ್ರೀ ಪದ್ಮರಾಜ ಮಹಿಳಾ ಮಹಾವಿದ್ಯಾಲಯದ ಆವರಣದಲ್ಲಿ ಮೃತರ ಆತ್ಮಕ್ಕೆ ಶಾಂತಿ ಹಾಗೂ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸಲಾಯಿತು.
ಈ ವೇಳೆ ಮಾಜಿ ವಿಧಾನ ಪರಿಷತ್ ಸದಸ್ಯ ಅರುಣ ಶಹಾಪೂರ, ಸಾರಂಗಮಠದ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು, ಸಂಸ್ಥೆಯ ಆಡಳಿತಾಧಿಕಾರಿ ಡಾ.ಬಿ.ಜಿ.ಮಠ, ವಿಶ್ವನಾಥ ನಂದಿಕೋಲ, ಶಿವಾನಂದ ರೋಡಗಿ, ಪ್ರಾಚಾರ್ಯರಾದ ಎಮ್.ಎಸ್.ಹೈಯಾಳಕರ, ಭೀಮನಗೌಡ ಸಿಂಗನಳ್ಳಿ, ಎಸ್.ಎಮ್.ಪೂಜಾರಿ, ಸೇರಿದಂತೆ ಮಹಾವಿದ್ಯಾಲಯದ ಬೋಧಕ-ಬೋಧಕೇತರ ಸಿಬ್ಬಂದ್ದಿಗಳು ಹಾಗೂ ವಿದ್ಯಾರ್ಥಿಗಳು ಸಂತಾಪ ಸೂಚಿಸಿದರು.

