Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ

ಮಹಿಳೆಯರಿಂದ ನಂಜಿಕೆ ತಿನಿಸು ತಯಾರಿಕೆ ಈಗ ಬಲು ಜೋರು

ಜಾನುವಾರುಗಳ ಉಚಿತ ತಪಾಸಣೆ ಹಾಗೂ ಚಿಕಿತ್ಸೆ ಶಿಬಿರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಶಕ್ತ ಭಾರತ ನಿರ್ಮಾಣಕ್ಕೆ ಪರಿಪೂರ್ಣ ವ್ಯಕ್ತಿತ್ವದ ಮಕ್ಕಳು ಅಗತ್ಯ
(ರಾಜ್ಯ ) ಜಿಲ್ಲೆ

ಸಶಕ್ತ ಭಾರತ ನಿರ್ಮಾಣಕ್ಕೆ ಪರಿಪೂರ್ಣ ವ್ಯಕ್ತಿತ್ವದ ಮಕ್ಕಳು ಅಗತ್ಯ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಅಭಿಮತ

ಉದಯರಶ್ಮಿ ದಿನಪತ್ರಿಕೆ

ಧಾರವಾಡ: ಮಗು ಇದ್ದ ಮನೆಯಲ್ಲಿ ಸದಾ ನಗು ಇರುತ್ತದೆ. ಸಶಕ್ತವಾದ ಭಾರತ ದೇಶ ನಿರ್ಮಿಸಲು ಪರಿಪೂರ್ಣ ವ್ಯಕ್ತಿತ್ವದ ಮಕ್ಕಳನ್ನು ರೂಪಿಸುವ ಅಗತ್ಯವಿದೆ ಎಂದು ಕರ್ನಾಟಕ ರಾಜ್ಯ ಬಾಲ ವಿಕಾಸ ಅಕಾಡಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಅವರು ಹೇಳಿದರು.
ಶುಕ್ರವಾರ ಸಂಜೆ ನಗರದ ಬಾಲಭವನ ಆವರಣದಲ್ಲಿ ಕರ್ನಾಟಕ ರಾಜ್ಯ ಬಾಲಭವನ ಸೊಸೈಟಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಬಾಲಭವನದ ಸಂಯುಕ್ತ ಆಶ್ರಯದಲ್ಲಿ, ಮಕ್ಕಳ ದಿನಾಚರಣೆ ಕಾರ್ಯಕ್ರಮ ಅಂಗವಾಗಿ ಮಕ್ಕಳಿಗಾಗಿ ಆಯೋಜಿಸಲಾಗಿದ್ದ ವಿವಿಧ ಸ್ಪರ್ಧೆಗಳ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಬಾಲ್ಯಾವಸ್ಥೆಯು ಜೀವನದ ಮುಖ್ಯ ಘಟ್ಟವಾದ್ದರಿಂದ ಮಕ್ಕಳು ಸ್ಪರ್ಧೆಗಳಲ್ಲಿ ಭಾಗವಹಿಸುವಿಕೆ ತುಂಬಾ ಮುಖ್ಯ ಹಾಗೂ ಯಾವ ಮನೆಯಲ್ಲಿ ಮಗು ಇರುತ್ತದೋ ಆ ಮನೆಯಲ್ಲಿ ಸದಾ ನಗು ಇರುತ್ತದೆ ಎಂದು ಅವರು ಹೇಳಿದರು.
ಜೀವನದಲ್ಲಿ ಮುಂದೆ ಬರಬೇಕಾದರೆ ಆತ್ಮವಿಶ್ವಾಸ ಹಾಗೂ ಧೈರ್ಯದಿಂದ ಮುಂದೆ ಸಾಗಬೇಕು. ನಮ್ಮ ಜೊತೆಯಲ್ಲಿರುವವರೆಲ್ಲರೂ ಚೆನ್ನಾಗಿರಬೇಕೆಂದು ಬಯಸಬೇಕು. ಅರಮನೆಯಲ್ಲಿದ್ದರೂ ನೆರಮನೆ ಚೆನ್ನಾಗಿರಬೇಕು. ನನ್ನ ಸುತ್ತಮುತ್ತಲಿರುವವರ ಒಳಿತನ್ನು ಬಯಸುವ ಹೃದಯವಂತ ಮಕ್ಕಳು ನಮ್ಮವರಾಗಬೇಕು ಎಂದು ಅವರು ಹೇಳಿದರು.
ನಾವೆಲ್ಲ ಭಾರತ ಮಾತೆಯ ಮಕ್ಕಳು ಆ ಸದ್ಭಾವನೆಯಿಂದ ಯಾವುದೇ ಭೇದ ಭಾವ ಇಲ್ಲದೇ ಬಾಳಬೇಕು. ಕಷ್ಟದಲ್ಲಿರುವವರಿಗೆ ಸಹಾಯ ಮಾಡುವ ಮನೋಭಾವನೆಯನ್ನು ಮಕ್ಕಳಲ್ಲಿ ಬೆಳೆಸಬೇಕು ಎಂದು ಸಂಗಮೇಶ ಬಬಲೇಶ್ವರ ತಿಳಿಸಿದರು.
ಮಕ್ಕಳ ಸಾಹಿತಿ ಹಾಗೂ ಕರ್ನಾಟಕ ಬಾಲವಿಕಾಸ ಅಕಾಡೆಮಿ ಮಾಜಿ ಅಧ್ಯಕ್ಷ ಶಂಕರ ಹಲಗತ್ತಿ ಮಾತನಾಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೆಶಕಿ ಡಾ. ಎಚ್.ಎಚ್.ಕುಕನೂರ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿ ಡಾ. ಕಮಲಾ ಬೈಲೂರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಕಾಂಚನಾ ಅಮಠೆ ಹಾಗೂ ಎಲ್ಲ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

” ಮಕ್ಕಳಲ್ಲಿರುವ ಪ್ರತಿಭೆಗಳನ್ನು ಗುರುತಿಸಲು ಇದೊಂದು ಉತ್ತಮ ವೇದಿಕೆ. ಇಂತಹ ಅವಕಾಶಗಳನ್ನು ಮಕ್ಕಳು ಸದ್ಬಳಕೆ ಮಾಡಿಕೊಳ್ಳಬೇಕು ಹಾಗೂ ವಿದ್ಯಾಕಾಶಿ ಎನಿಸಿರುವ ಧಾರವಾಡ ಜಿಲ್ಲೆಯು ಸಾಂಸ್ಕೃತಿಕ ಕ್ಷೇತ್ರದಲ್ಲಿ ರಾಜ್ಯ ಮಟ್ಟದಲ್ಲಿ ಪ್ರಶಸ್ತಿ ಪಡೆಯಬೇಕು.”

-ಸ್ವರೂಪ ಟಿ.ಕೆ
ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಧಾರವಾಡ

ಸೃಜನಾತ್ಮಕ ಸ್ಪರ್ಧೆಗಳ ಆಯೋಜನೆ

ಮಕ್ಕಳ ದಿನಾಚರಣೆ ಕಾರ್ಯಕ್ರಮದ ಅಂಗವಾಗಿ ಮಕ್ಕಳಿಗೆ ಜಿಲ್ಲಾ ಮಟ್ಟದಲ್ಲಿ ಸೃಜನಾತ್ಮಕ ಪ್ರದರ್ಶನ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಸ್ಪರ್ಧೆಯಲ್ಲಿ 09 ರಿಂದ 16 ವರ್ಷದ ಸುಮಾರು 185 ಮಕ್ಕಳು ಭಾಗವಹಿಸಿದ್ದರು.
ವಾದ್ಯ ಸಂಗೀತ, ತಬಲಾ, ಮೃದಂಗ, ಕೀಬೋರ್ಡ, ಕೊಳಲು, ಡೊಳ್ಳು ಮತ್ತು ನಗಾರಿ ಸ್ಫರ್ಧೆಗಳಿಗೆ ನೃತ್ಯ ಶಿಕ್ಷಕ ಸಯೈದ್ ಎ.ಎಮ್ ಹಾಗೂ ಗಾಯತ್ರಿ ದೇಶಪಾಂಡೆ ಮತ್ತು ಚಿತ್ರಕಲಾ ಸ್ಪರ್ಧೆಗೆ ಚಿತ್ರಕಲೆ ಶಿಕ್ಷಕ ವಿಜಯಕುಮಾರ ಗಾಯಕವಾಡ ಹಾಗೂ ವಿಜ್ಞಾನದಲ್ಲಿ ಸೃಜನಾತ್ಮಕ ಆವಿಷ್ಕಾರ ಸ್ಪರ್ಧೆಗೆ ಐ.ಜಿ ಉದಮೇಶಿ ಅವರು ತೀರ್ಪುಗಾರರಾಗಿದ್ದರು.

ಸ್ಪರ್ಧೆಗಳಲ್ಲಿ ವಿಜೇತ ಮಕ್ಕಳ ವಿವರ

ಜಾನಪದ ನೃತ್ಯ ವಿಭಾಗದಲ್ಲಿ ಪ್ರೀತಿ ಗೌಡರ, ಕರ್ನಾಟಕ ಶಾಸ್ತ್ರೀಯ ಸಂಗೀತ ವಿಭಾಗದಲ್ಲಿ ಸ್ಮೃತಿ ಮಠದ, ವಾದ್ಯ ಸಂಗೀತ ವಿಭಾಗದಲ್ಲಿ ನಮದೇವ ಕನಕೂರ ಹಾಗೂ ಸಂಜು ಹೊನ್ನಾಪುರ, ನೂತನ ಆವಿಷ್ಕಾರದ ವಿಜ್ಞಾನ ವಿಭಾಗದಲ್ಲಿ ಸಮರ್ಥಗೌಡ ಗಿರಿಪ್ಪಗೌಡ ಹಾಗೂ ಸ್ವಾತಿ ಅರಳಿ, ಚಿತ್ರಕಲೆ ವಿಭಾಗದಲ್ಲಿ ಸಾನ್ವಿ ಯರಗೊಪ್ಪ ಮತ್ತು ಶಿವಾಷಿ ರೇವಣಕರ ಅವರು ಜಿಲ್ಲಾ ಮಟ್ಟದ ಸ್ಪರ್ಧೆಗಳಲ್ಲಿ ಆಯ್ಕೆ ಆಗಿದ್ದು, ಇವರು ಮುಂದಿನ ದಿನಗಳಲ್ಲಿ ಆಯೋಜಿಸುವ ರಾಜ್ಯಮಟ್ಟದ ಮಕ್ಕಳ ಸ್ಪರ್ಧೆಯಲ್ಲಿ ಭಾಗವಹಿಸುತ್ತಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ

ಮಹಿಳೆಯರಿಂದ ನಂಜಿಕೆ ತಿನಿಸು ತಯಾರಿಕೆ ಈಗ ಬಲು ಜೋರು

ಜಾನುವಾರುಗಳ ಉಚಿತ ತಪಾಸಣೆ ಹಾಗೂ ಚಿಕಿತ್ಸೆ ಶಿಬಿರ

ದುಡಿದು ತಿನ್ನದವರು ಗಂಡಸರಲ್ಲ :ದಿಂಗಾಲೇಶ್ವರ ಶ್ರೀ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ
    In ವಿಶೇಷ ಲೇಖನ
  • ಮಹಿಳೆಯರಿಂದ ನಂಜಿಕೆ ತಿನಿಸು ತಯಾರಿಕೆ ಈಗ ಬಲು ಜೋರು
    In (ರಾಜ್ಯ ) ಜಿಲ್ಲೆ
  • ಜಾನುವಾರುಗಳ ಉಚಿತ ತಪಾಸಣೆ ಹಾಗೂ ಚಿಕಿತ್ಸೆ ಶಿಬಿರ
    In (ರಾಜ್ಯ ) ಜಿಲ್ಲೆ
  • ದುಡಿದು ತಿನ್ನದವರು ಗಂಡಸರಲ್ಲ :ದಿಂಗಾಲೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಅಂತರಂಗದ ಅರಿವು ಜಾಗೃತಗೊಳಿಸುವ ಪ್ರಕ್ರಿಯೆ ಲಿಂಗದೀಕ್ಷೆ
    In (ರಾಜ್ಯ ) ಜಿಲ್ಲೆ
  • ಡಾ.ಅಂಬೇಡ್ಕರ್ ಜಯಂತಿಯಲ್ಲಿ ಅಧಿಕಾರಿಗಳು ಕಡ್ಡಾಯವಾಗಿ ಪಾಲ್ಗೊಳ್ಳಿ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ ಮಡಿವಾಳ ಮಾಚಿದೇವರ ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಅಲ್ಪ ಸಂಖ್ಯಾತರ ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ಮಾ.೩೦ರಂದು ಭಗವಾನ್ ಶ್ರೀ ಮಹಾವೀರ ಜಯಂತಿ
    In (ರಾಜ್ಯ ) ಜಿಲ್ಲೆ
  • ಎಇಇ ಮೇಲೆ ಶಿಸ್ತುಕ್ರಮಕ್ಕೆ ದಲಿತ ಸ್ವರಾಜ್ಯ ಸೇನೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.