ಉದಯರಶ್ಮಿ ದಿನಪತ್ರಿಕೆ
ಮುದ್ದೇಬಿಹಾಳ: ಪಟ್ಟಣದ ಹುಡ್ಕೋ ಬಡಾವಣೆಯಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಸರಕಾರಿ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯಕ್ಕೆ ಇಲ್ಲಿನ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶರಾದ ರವೀಂದ್ರಕುಮಾರ ಕಟ್ಟಿಮನಿ ಮತ್ತು ಕಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶರಾದ ಸಂಪತ್ತಕುಮಾರ ಭೇಟಿ ನೀಡಿ ಪರಿಶೀಲಿಸಿದರು.
ವಸತಿ ನಿಲಯದ ಆಡಳಿತದ ಬಗ್ಗೆ ವಿದ್ಯಾರ್ಥಿನಿಯರಿಗೆ ವಿಚಾರಿಸಿದ ಉಭಯ ನ್ಯಾಯಾಧೀಶರು ಯಾವತ್ತೂ ಕೋಣೆಗಳನ್ನು ಸ್ವಚ್ಛವಾಟ್ಟುಕೊಳ್ಳುವಂತೆ, ವಿದ್ಯಾಭ್ಯಾಸದಲ್ಲಿ ಹೆಚ್ಚಿನ ಕಾಳಜಿ ಮತ್ತು ಸಮಯ ಕಳೆಯುವಂತೆ ಸಲಹೆ ನೀಡಿದರು. ಅಡುಗೆ ಕೋಣೆ ಸೇರಿದಂತೆ ಹಲವು ಕೋಣೆಗಳಲ್ಲಿ ಖುದ್ದು ತಿರುಗಾಡಿ ವ್ಯವಸ್ಥೆಯ ಬಗ್ಗೆ ಪರಿಶೀಲಿಸಿದರು. ಕುಡಿಯುವ ನೀರಿನ ಶುದ್ಧತೆ ಅಡುಗೆ ಶುಚಿತ್ವ ಕುರಿತ ಮಾಹಿತಿ ಪಡೆದು ವಿದ್ಯಾರ್ಥಿಗಳಿಗೆ ಸಿಗಬೇಕಾದ ಎಲ್ಲ ಸೌಲಭ್ಯಗಳನ್ನು ಸರಿಯಾಗಿ ತಲುಪಿಸುವಂತೆ ವಾರ್ಡನ್ ಗೆ ಸೂಚಿಸಿದರು.
ಈ ವೇಳೆ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಣಿ ಬಿ.ಜಿ.ಮಠ, ವಾರ್ಡನ್ ಎಸ್.ಆರ್.ಬಿರಾದಾರ, ತಹಶೀಲ್ದಾರ ಕಚೇರಿಯ ಶಿರಸ್ತೇದಾರ ಎಂ.ಎ.ಬಾಗೇವಾಡಿ, ತಾಲೂಕು ಪಂಚಾಯತ ನ ನಿರ್ಮಲಾ ತೋಟದ, ನ್ಯಾಯವಾದಿಗಳ ಸಂಘದ ಪ್ರ.ಕಾರ್ಯದರ್ಶಿ ಪಿ.ಬಿ.ಗೌಡರ, ನ್ಯಾಯಾಲಯದ ಸಿಬ್ಬಂದಿಗಳಾದ ಅರವಿಂದ ಕುಂಬಾರ, ಮಹಾಂತೇಶ ಹಚರೆಡ್ಡಿ ಸೇರಿದಂತೆ ಮತ್ತೀತರರು ಇದ್ದರು.

