*ಉದಯರಶ್ಮಿ ದಿನಪತ್ರಿಕೆ*
ವಿಜಯಪುರ: ಇಂಡಿಯಾ ಫೋಸ್ಟ ಫೇಮೆಂಟ್ ಬ್ಯಾಂಕ್, ಪಿಂಚಣಿ ಮತ್ತು ಪಿಂಚಣಿದಾರರ ಕಲ್ಯಾಣ ಇಲಾಖೆ ಹಾಗೂ ರಾಷ್ಟ್ರೀಯ ಮಾಹಿತಿ ಕೇಂದ್ರ ಇವರ ಸಹಯೋಗದೊಂದಿಗೆ ಕೇಂದ್ರ ಮತ್ತು ರಾಜ್ಯ ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯ ಪಿಂಚಣಿದಾರರು ಜೀವಿತ ಪ್ರಮಾಣ ಪತ್ರ ಸಲ್ಲಿಸುವ ಸಮಯದಲ್ಲಿ ಎದುರಿಸುತ್ತಿರುವ ತೊಂದರೆಗಳನ್ನು ತಪ್ಪಿಸಲು ಭಾರತೀಯ ಅಂಚೆ ಇಲಾಖೆ ಅಡಿಯಲ್ಲಿ ಪಿಂಚಣಿದಾರರಿಗೆ ಡಿಜಿಟಲ್ ಲೈಫ್ ಪ್ರಮಾಣ ಪತ್ರ ವಿತರಿಸುವ ವಿಶೇಷ ಅಭಿಯಾನ ಜಿಲ್ಲೆಯಲ್ಲಿ ನವೆಂಬರ್ ೩೦ರವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ವಿಜಯಪುರ ಅಂಚೆ ಇಲಾಖೆ ಅಧೀಕ್ಷಕರು ತಿಳಿಸಿದ್ದಾರೆ.
ಪಿಂಚಣಿದಾರರ ಅನುಕೂಲಕ್ಕಾಗಿ ಫೋಸ್ಟ್ಮ್ಯಾನ್ ಅವರು ಅವರ ಮನೆ ಬಾಗಿಲಿಗೆ ತೆರಳಿ ಆಧಾರ್ ಮತ್ತು ಪಿಂಚಣಿ ವಿವರಗಳನ್ನು ಬಳಸಿಕೊಂಡು ಡಿಜಿಟಲ್ ಜೀವಿತ ಪ್ರಮಾಣ ಪತ್ರ ನೀಡಲು ಕ್ರಮವಹಿಸಲಾಗುತ್ತಿದೆ. ಪಿಂಚಣೆದಾರರು ತಮ್ಮ ಹತ್ತಿರದ ಅಂಚೆ ಕಚೇರಿಗೆ ಭೇಟಿ ನೀಡಿ ಅಥವಾ ತಮ್ಮ ವ್ಯಾಪ್ತಿಯ ಪೋಸ್ಟಮನ್ ಅವರನ್ನು ಸಂಪರ್ಕಿಸಿ ಮನೆಯಲ್ಲಿಯೇ ಕುಳಿತು ಅಗತ್ಯ ದಾಖಲೆ ನೀಡಿ, ತಮ್ಮ ಜೀವಿತ ಪ್ರಮಾಣ ಪತ್ರ ಪಡೆದುಕೊಳ್ಳಬಹುದಾಗಿದೆ.
ಜಿಲ್ಲೆಯಲ್ಲಿ ಈಗಾಗಲೇ ವಿವಿಧೆಡೆ ಶಿಬಿರ ಯಶಸ್ವಿಯಾಗಿ ನಡೆದಿದ್ದು, ನವೆಂಬರ್ ೧೬ ರಂದು ಸಿಂದಗಿ ಉಪ ಅಂಚೆ ಕಚೇರಿ ಮತ್ತು ನವೆಂಬರ್ ೨೫ರಂದು ಇಂಡಿ ಉಪ ಅಂಚೆ ಕಚೇರಿ ವ್ಯಾಪ್ತಿಯಲ್ಲಿ ಏರ್ಪಡಿಸಲಾಗಿದ್ದು, ಪಿಂಚಣೆದಾರರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
