ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ೨೦೨೪-೨೫ನೆಯ ಶೈಕ್ಷಣಿಕ ಸಾಲಿನ ಸ್ನಾತಕೋತ್ತರ ಪದವಿ (ಎಂಎ), ವ್ಯಾಲ್ಯು ಆಡೆಡ್ ಡಿಪ್ಲೋಮಾ ಹಾಗೂ ವ್ಯಾಲ್ಯು ಆಡೆಡ್ ಅಡ್ವಾನ್ಸ್ ಡಿಪ್ಲೋಮಾ ಮತ್ತು ಗ್ರಾಫಿಕ್ ಡಿಸೈನಿಂಗ್ ಸರ್ಟಿಫಿಕೇಟ್ ಕೋರ್ಸ್ಗಳ ಪ್ರಥಮ ವರ್ಷದ ಉಳಿಕೆ ಸೀಟುಗಳ ಪ್ರವೇಶಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಯುಯುಸಿಎಂಎಸ್ ತಂತ್ರ‍್ರಾಂಶದ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.
ಪತ್ರಿಕೋದ್ಯಮ ವಿಭಾಗದ ಎಂಎ ಕೋರ್ಸ್ನ ಉಳಿಕೆ ಸೀಟುಗಳಿಗೆ ಪ್ರವೇಶ ಪಡೆಯಲು ಈಗಾಗಲೇ ಯುಯುಸಿಎಂಎಸ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ ಇಲ್ಲಿಯ ವರೆಗೆ ಪ್ರವೇಶ ಪಡೆಯದೇ ಇರುವವರು ಮತ್ತು ಈಗಾಗಲೇ ಅರ್ಜಿ ಸಲ್ಲಿಸದೇ ಇರುವವರು ಸಹ ಅರ್ಜಿ ಸಲ್ಲಿಸಲು ನವೆಂಬರ್ ೧೫ ಕೊನೆಯ ದಿನವಾಗಿದ್ದು ಯುಯುಸಿಎಂಎಸ್ https://uucms.karnataka.gov.in/Login/Index ತಂತ್ರಾಂಶದಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಿದ ನಂತರ ನೇರವಾಗಿ ಪತ್ರಿಕೋದ್ಯಮ ವಿಭಾಗಕ್ಕೆ ಭೇಟಿ ನೀಡಿ ಪ್ರವೇಶ ಪಡೆಯಬಹುದಾಗಿದೆ ಎಂದು ವಿವಿ ಪ್ರಕಟಣೆ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ೯೬೧೧೪೮೮೨೦೫ ಮೊಬೈಲ್ ಸಂಖ್ಯೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

