ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ಪಟ್ಟಣದ ವಿದ್ಯಾನಗರದಲ್ಲಿರುವ ಇಷ್ಟಲಿಂಗ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ ಸಿಂದಗಿಯ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಮಂಜೂರಾದ ೧ಲಕ್ಷದ ೫೦ಸಾವಿರ ರೂ.ಅನುದಾನದ ಡಿಡಿಯನ್ನು ಜಿಲ್ಲಾ ನಿರ್ದೇಶಕ ಸಂತೋಷಕುಮಾರ್ ರೈ ಇಷ್ಟಲಿಂಗ ಸ್ವಾಮಿ ದೇವಸ್ಥಾನದ ಸಮಿತಿ ಸದಸ್ಯರಿಗೆ ವಿತರಣೆ ಮಾಡಿದರು.
ಈ ವೇಳೆ ಕ್ಷೇತ್ರ ಯೋಜನಾಧಿಕಾರಿ ಕೃಷ್ಣಮೂರ್ತಿ, ಮೇಲ್ವಿಚಾರಕ ಸಿದ್ದಪ್ಪ ಚುಳುಕಿ ಸೇರಿದಂತೆ ದೇವಸ್ಥಾನ ಸಮಿತಿಯ ಸದಸ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

