ಉದಯರಶ್ಮಿ ದಿನಪತ್ರಿಕೆ
ಚಡಚಣ: ತಾಲೂಕಿನ ಧೂಳಖೇಡ ಗ್ರಾಮದ ಶ್ರೀ ಗುರು ಚಂದ್ರಶೇಖರ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವದ ಕವನ ಪದ್ಯವಾಚನ ಸ್ಪರ್ಧೆಯಲ್ಲಿ ಓಂ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ವಿಠೋಬಾ ಕರಂಡೆ ತಾಲೂಕು ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಹಾಗೂ ಧಾರ್ಮಿಕ ಪಠನದಲ್ಲಿ ಆಸಾದುಲ್ಲಾ ಖಾಟಿಕ ದ್ವಿತೀಯ ಸ್ಥಾನ ಪಡೆದಿದ್ದಾನೆ ಎಂದು ಮುಖ್ಯ ಶಿಕ್ಷಕ ಸುರೇಶ ಜಂತಿ ತಿಳಿಸಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಓಂ ಶಿಕ್ಷಣ ಸಂಸ್ಥೆಯ ಸಂಸ್ಥೆಯ ಅಧ್ಯಕ್ಷ ಎಸ್ ಎಸ್ ಹಾವಿನಾಳ, ಆಡಳಿತ ಮಂಡಳಿ ಹಾಗೂ ಶಾಲಾ ಸಿಬ್ಬಂದಿ ಹರ್ಷ ವ್ಯಕ್ತಪಡಿಸಿದ್ದಾರೆ.

