Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಾ.29ರಿಂದ ಕೊಲ್ಹಾರದಲ್ಲಿ ವಿಶೇಷ ಪ್ರಶಿಕ್ಷಣ ವರ್ಗ

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 28, 2026

ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪಂಚಾಯಿತಿ & ಸ್ಥಳೀಯ ಸಂಸ್ಥೆಗಳ ಸದಸ್ಯರ ಸಮಸ್ಯೆಗಳಿಗೆ ಧ್ವನಿಯಾಗುವೆ
(ರಾಜ್ಯ ) ಜಿಲ್ಲೆ

ಪಂಚಾಯಿತಿ & ಸ್ಥಳೀಯ ಸಂಸ್ಥೆಗಳ ಸದಸ್ಯರ ಸಮಸ್ಯೆಗಳಿಗೆ ಧ್ವನಿಯಾಗುವೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು ಸದಸ್ಯರ ಆಡಳಿತಾತ್ಮಕ ಅಹವಾಲು ಸ್ವೀಕಾರ ಸಭೆಗೆ ಚಾಲನೆ ನೀಡಿದ ಎಂಎಲ್ಸಿ ಸುನೀಲಗೌಡ ಪಾಟೀಲ ಭರವಸೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಪಂಚಾಯಿತಿ ಮತ್ತು ಸ್ಥಳೀಯ ಸಂಸ್ಥೆಗಳ ಸದಸ್ಯರ ಸಮಸ್ಯೆಗಳನ್ನು ಆಲಿಸಿ ಮುಂಬರುವ ಬೆಳಗಾವಿ ಅಧಿವೇಶನದಲ್ಲಿ ಪರಿಹಾರ ಒದಗಿಸಲು ನಿಮ್ಮ ಧ್ವನಿಯಾಗಿ ಸರಕಾರದ ಗಮನ ಸೆಳೆಯುವುದಾಗಿ ಎಂದು ವಿಧಾನ ಪರಿಷತ್ ಶಾಸಕ ಸುನೀಲಗೌಡ ಪಾಟೀಲ ಹೇಳಿದ್ದಾರೆ.
ಬುಧವಾರ ನಗರದಲ್ಲಿ ನಡೆದ ವಿಜಯಪುರ ತಾಲೂಕಿನಲ್ಲಿ ಬರುವ ನಾಗಠಾಣ ಮತಕ್ಷೇತ್ರ ವ್ಯಾಪ್ತಿಯ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರ ಆಡಳಿತಾತ್ಮಕ ಅಹವಾಲು ಸ್ವೀಕಾರ ಸಭೆಗೆ ಚಾಲನೆ ನೀಡಿ ಅವರು ಮಾತನಾಡಿದರು.
ಬೇರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳ ಗೌರವಧನ ಕಡಿಮೆಯಿದ್ದು, ಈ ಸಮಸ್ಯೆಯ ಕುರಿತು ಹೋರಾಟ ನಡೆಸಿದ ಪರಿಣಾಮ ಗೌರವಧನವನ್ನು ಸ್ವಲ್ಪ ಹೆಚ್ಚಿಸಲಾಗಿದೆ. ಸ್ಥಳೀಯ ಸಂಸ್ಥೆಗಳ ಸದಸ್ಯರಿಗೆ ಪಿಂಚಣಿ, ಉಚಿತ ಬಸ್ ಪಾಸ್ ಮತ್ತು ಟೋಲ್ ಗಳಲ್ಲಿ ಶುಲ್ಕದಿಂದ ವಿನಾಯಿತಿ ನೀಡಲು ಕೂಡ ಸರಕಾರದ ಗಮನ ಸೆಳೆಯುತ್ತೇನೆ. ಜಲಜೀವನ ಮಿಷನ್ ಯೋಜನೆಯಲ್ಲಿ ಗ್ರಾ. ಪಂ. ಪಾಲಿನ ವಂತಿಗೆಯನ್ನು ಸರಕಾರವೇ ಭರ್ತಿ ಮಾಡಬೇಕು ಎಂದು ಹೋರಾಟ ನಡೆಸಿದ್ದು ಫಲ ನೀಡಿದ್ದು, ಸರಕಾರ ಸ್ಪಂದಿಸಿದೆ. ಈ ವಂತಿಗೆ ಹಣವನ್ನು ಗ್ರಾ. ಪಂ. ಗಳು ಸ್ಥಳೀಯ ಅಭಿವೃದ್ಧಿ ಕಾರ್ಯಗಳಿಗೆ ಬಳಸಬಹುದಾಗಿದೆ ಎಂದು ಅವರು ಹೇಳಿದರು.
ಗ್ರಾ.ಪಂ. ಗಳಿಗೆ ನಾನಾ ವಸತಿ ಯೋಜನೆಗಳಡಿ ಮನೆ ಮಂಜೂರು ಮಾಡಿಸಲು ಹೋರಾಟ ಮಾಡಿದ ಪರಿಣಾಮ ಈಗ ಮನೆಗಳು ಲಭ್ಯವಾಗಿವೆ. ಈಗ ನಾನಾ ಗ್ರಾ. ಪಂ. ಗಳಲ್ಲಿ ನಾನಾ ಕಾರಣಗಳಿಂದ ಬ್ಲಾಕ್ ಆಗಿರುವ ಮನೆಗಳ ಮಾಹಿತಿ ನೀಡಿದರೆ ಸ್ಥಳೀಯ ಮತ್ತು ಸರಕಾರದ ಮಟ್ಟದಲ್ಲಿ ಗಮನ ಸೆಳೆದು ಪರಿಹರಿಸುತ್ತೇನೆ. ವಿಧಾನ ಪರಿಷತ ಶಾಸಕರಿಗೆ ಸಿಗುವ ಅನುದಾನ ಕಡಿಮೆಯಿದ್ದು, ಈ ಅನುದಾನವನ್ನು ವಿಜಯಪುರ ಮತ್ತು ಬಾಗಲಕೋಟೆ ಎರಡೂ ಜಿಲ್ಲೆಗಳ ಎಲ್ಲ 15 ವಿಧಾನ ಸಭೆ ವ್ಯಾಪ್ತಿಯ ಅಭಿವೃದ್ಧಿ ಕಾರ್ಯಗಳಿಗೆ ಹಂಚಿಕೆ ಮಾಡಲಾಗುತ್ತಿದೆ. ವರ್ಷದಲ್ಲಿ ಒಂದು ಬಾರಿ ವಿಧಾನ ಸಭೆ ಕ್ಷೇತ್ರವಾರ ಆಡಳಿತಾತ್ಮಕ ಅಹವಾಲು ಸ್ವೀಕಾರ ಸಭೆ ನಡೆಸಿ ಪರಿಹಾರ ಒದಗಿಸಲು ಪ್ರಯತ್ನಿಸುತ್ತಿದ್ದೇನೆ. ಹಲವು ಸಮಸ್ಯೆಗಳಿಗೆ ಆಯಾ ಕ್ಷೇತ್ರದ ಶಾಸಕರೊಂದಿಗೆ ಚರ್ಚಿಸಿ ಪರಿಹಾರ ಒದಗಿಸುತ್ತಿದ್ದೇನೆ. ಈ ಸಭೆಯ ಜೊತೆಗೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆಯನ್ನೂ ನಡೆಸಿ ಅವರ ಅಹವಾಲನ್ನೂ ಕೂಡ ಆಲಿಸುತ್ತಿದ್ದೇನೆ. ಪಿಡಿಓಗಳ ಸಮಸ್ಯೆಗಳಿಗೂ ಸ್ಪಂದಿಸುವ ಕೆಲಸ ನಡೆದಿದೆ. ಒಟ್ಟಾರೆ ನಿಮ್ಮೆಲ್ಲರ ಧ್ವನಿಯಾಗಿ ಸರಕಾರದಲ್ಲಿ ಕೆಲಸ ಮಾಡುತ್ತಿದ್ದೇನೆ ಎಂದು ಅವರು ಹೇಳಿದರು.
ವಿಜಯಪುರ- ಬಾಗಲಕೋಟೆ- ಬೆಂಗಳೂರು ಹೊಸದಾಗಿ ವಂದೇ ಭಾರತ ರೈಲು ಮತ್ತು ಮುಂಬಯಿ- ಸೋಲಾಪುರ ವಂದೇ ಭಾರತ ರೈಲು ಸೇವೆ ಪ್ರಾರಂಭಿಸುವುದು ಕಾರ್ಯಸಾಧುವಲ್ಲ ಎಂದು ಕೇಂದ್ರ ರೇಲ್ವೆ ಇಲಾಖೆ ಸ್ಪಷ್ಟಪಡಿಸಿದೆ. ಈಗಲಾದರೂ ವಿಜಯಪುರ ಮತ್ತು ಬಾಗಲಕೋಟೆ ಸಂಸದರು ವಂದೇ ಭಾರತ ರೈಲು ಸೇವೆ ಪ್ರಾರಂಭಿಸಿದರೆ ಅವರಿಗೆ ಸಾರ್ವಜನಿಕರ ಪರವಾಗಿ ನಾಗರಿಕ ಸನ್ಮಾನ ಮಾಡುತ್ತೇನೆ ಎಂದು ಸುನೀಲಗೌಡ ಪಾಟೀಲ ಹೇಳಿದರು.
ವಿಜಯಪುರ ತಾ. ಪಂ. ಕಾರ್ಯ ನಿರ್ವಾಹಣಾಧಿಕಾರಿ ಬಾಬು ರಾಠೋಡ ಪ್ರಾಸ್ತಾವಿಕವಾಗಿ ಮಾತನಾಡಿದರು.
ಕನ್ನೂರ ಗ್ರಾ. ಪಂ. ಸದಸ್ಯ ಎಂ. ಎಚ್ ಪಠಾಣ, ಐನಾಪುರ ಗ್ರಾ. ಪಂ. ಸದಸ್ಯೆ ಜಯಶ್ರೀ ಜಾಧವ ತಮ್ಮ ಅಭಿಪ್ರಾಯ ಹಂಚಿಕೊಂಡರು.
ತಾ.ಪಂ. ಸಹಾಯಕ ನಿರ್ದೇಶಕ ಬಾಬು ಉಮದಿ ಸ್ವಾಗತಿಸಿದರು. ಮಲ್ಲಿಕಾರ್ಜುನ ಜಾಬಗೊಂಡ ನಿರೂಪಿಸಿದರು. ಪಿಡಿಓ ಎಸ್. ಆರ್. ಕಟ್ಟಿ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಾ.29ರಿಂದ ಕೊಲ್ಹಾರದಲ್ಲಿ ವಿಶೇಷ ಪ್ರಶಿಕ್ಷಣ ವರ್ಗ

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 28, 2026

ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ

ಮಹಿಳೆಯರಿಂದ ನಂಜಿಕೆ ತಿನಿಸು ತಯಾರಿಕೆ ಈಗ ಬಲು ಜೋರು

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಾ.29ರಿಂದ ಕೊಲ್ಹಾರದಲ್ಲಿ ವಿಶೇಷ ಪ್ರಶಿಕ್ಷಣ ವರ್ಗ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 28, 2026
    In ದಿನಪತ್ರಿಕೆ
  • ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ
    In ವಿಶೇಷ ಲೇಖನ
  • ಮಹಿಳೆಯರಿಂದ ನಂಜಿಕೆ ತಿನಿಸು ತಯಾರಿಕೆ ಈಗ ಬಲು ಜೋರು
    In (ರಾಜ್ಯ ) ಜಿಲ್ಲೆ
  • ಜಾನುವಾರುಗಳ ಉಚಿತ ತಪಾಸಣೆ ಹಾಗೂ ಚಿಕಿತ್ಸೆ ಶಿಬಿರ
    In (ರಾಜ್ಯ ) ಜಿಲ್ಲೆ
  • ದುಡಿದು ತಿನ್ನದವರು ಗಂಡಸರಲ್ಲ :ದಿಂಗಾಲೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಅಂತರಂಗದ ಅರಿವು ಜಾಗೃತಗೊಳಿಸುವ ಪ್ರಕ್ರಿಯೆ ಲಿಂಗದೀಕ್ಷೆ
    In (ರಾಜ್ಯ ) ಜಿಲ್ಲೆ
  • ಡಾ.ಅಂಬೇಡ್ಕರ್ ಜಯಂತಿಯಲ್ಲಿ ಅಧಿಕಾರಿಗಳು ಕಡ್ಡಾಯವಾಗಿ ಪಾಲ್ಗೊಳ್ಳಿ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ ಮಡಿವಾಳ ಮಾಚಿದೇವರ ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಅಲ್ಪ ಸಂಖ್ಯಾತರ ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.