Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಾ.29ರಿಂದ ಕೊಲ್ಹಾರದಲ್ಲಿ ವಿಶೇಷ ಪ್ರಶಿಕ್ಷಣ ವರ್ಗ

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 28, 2026

ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಡಿ.೧೦ ರಂದು ವಿಧಾನಸೌಧ ಮುತ್ತಿಗೆ :ಜಯಮೃತ್ಯುಂಜಯ ಶ್ರೀ
(ರಾಜ್ಯ ) ಜಿಲ್ಲೆ

ಡಿ.೧೦ ರಂದು ವಿಧಾನಸೌಧ ಮುತ್ತಿಗೆ :ಜಯಮೃತ್ಯುಂಜಯ ಶ್ರೀ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಇಂಡಿ: ಬೆಳಗಾವಿಯಲ್ಲಿ ಡಿ.೧೦ ರಂದು ನಡೆಯುವ ವಿಧಾನಸಭೆ ಅಧಿವೇಶನದಲ್ಲಿ ಪಂಚಮಸಾಲಿ ಸಮಾಜಕ್ಕೆ ೨ ಎ ಸೇರ್ಪಡೆ ಆಗ್ರಹಿಸಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದೆಂದು ಪಂಚಮಸಾಲಿ ಸಮಾಜದ ಜಗದ್ಗುರು ಜಯಮೃತ್ಯುಂಜಯ ಶ್ರೀಗಳು ಹೇಳಿದರು.
ಪಟ್ಟಣದ ಅಕ್ಕಮಹಾದೇವಿ ಸಹಕಾರ ಸೌಹಾರ್ಧದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಅತೀ ಹೆಚ್ಚು ದಿನಗಳ ಕಾಲ ಪಂಚಮಸಾಲಿ ಸಮಾಜ ೨ ಎ ಸೇರ್ಪಡೆ ಆಗ್ರಹಿಸಿ ಹೋರಾಟ ನಡೆದಿದೆ.
ಪಂಚಮಸಾಲಿ ಸಮಾಜದ ಬೇಡಿಕೆ ದೇಶದ ಗಮನ ಸೆಳೆದಿದೆ. ೨೦೨೧ ರಿಂದ ಹೋರಾಟ ನಡೆದಿದೆ. ಆದರೂ ಈವರೆಗೆ ಬೇಡಿಕೆ ಈಡೇರಿಲ್ಲ. ಇಲ್ಲಿಯವರೆಗೂ ಸ್ಪಂದಿಸಿಲ್ಲ. ಕಳೆದ ಬಾರಿ ಬಿಜೆಪಿ ಸರಕಾರವಿದ್ದಾಗ ಪಂಚಮಸಾಲಿ ಸಮಾಜವನ್ನು ೨ ಎ ಸೇರ್ಪಡೆ ಬದಲಾಗಿ ೨ಡಿ ಮಾಡಿದರು. ಅದು ಬೇಕಾಗಿಲ್ಲ, ಹೀಗಾಗಿ ೨ ಎ ಸೇರ್ಪಡೆಗೆ ಹೋರಾಟ ಮುಂದು ವರೆದಿದೆ.
ಮತ್ತೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಾಗ ಮಾತುಕತೆಗೆ ಕರೆದಿಲ್ಲ. ವಿಧಾನಸಭೆಯಲ್ಲಿ ಚರ್ಚೆ ನಡೆದಿಲ್ಲ, ಹೀಗಾಗಿ ರಾಜ್ಯದ ವಕೀಲರು ಬೆಳಗಾಂವಿಯಲ್ಲಿ ಬೃಹತ್ ಪ್ರತಿಭಟನೆ ಮಾಡಿ ಗಮನ ಸೆಳೆದಿದ್ದರು ಎಂದರು.
ರಾಜ್ಯ ಸರಕಾರ ಪಂಚಮಸಾಲಿ ೨ ಎ ಕೇಂದ್ರಕ್ಕೆ ಶಿಫಾರಸು ಮಾಡಿ ಕಳುಹಿಸಬೇಕು. ವಿಳಂಬವಾಗುತ್ತಿದ್ದು ಸರಕಾರದ ಗಮನ ಸೆಳೆಯಲು ಡಿ. ೧೦ ರಂದು ವಿಧಾನಸೌಧ ಮುತ್ತಿಗೆ ಹಾಕಲು ನಿರ್ಧರಿಸಿದೆ. ಅಂದು ಅಂದಾಜು ಐದು ಸಾವಿರ ಟ್ರ್ಯಾಕ್ಟರಗಳು ಮತ್ತು ಸಾವಿರಾರು ಕಾರ್ಯಕರ್ತರು ಸೇರಿ ವಿಧಾನಸೌಧಕ್ಕೆ ಮುತ್ತಿಗೆ ಹಾಕುವ ಕಾರ್ಯಕ್ರಮವಿದೆ. ವಕೀಲರ ಸಂಘದ ಮುಂದಾಳತ್ವದಲ್ಲಿ ನಡೆಯುವ ಈ ಪ್ರತಿಭಟನೆಗೆ ವಿಜಯಪುರ ಜಿಲ್ಲೆಯ ಪ್ರತಿ ಹಳ್ಳಿಯಿಂದ ಕನಿಷ್ಠ ಐದು ಟ್ರ್ಯಾಕ್ಟರ ತರಬೇಕು. ಇಲ್ಲವೆ ವಾಹನಗಳನ್ನು ತರಬೇಕು ಎಂದರು.
ಈಗಾಗಲೇ ವಿಜಯಪುರ ಜಿಲ್ಲೆಯ ಎಲ್ಲ ತಾಲೂಕುಗಳ ವಕೀಲರ ಸಂಘ ತನ್ನ ಬೆಂಬಲ ಸೂಚಿಸಿದ್ದು ಈ ಕುರಿತು ಬೆಳಗಾಂವ, ವಿಜಯಪುರ, ಬಾಗಲಕೋಟ ಸೇರಿದಂತೆ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಪೂರ್ವ ಭಾವಿ ಸಭೆ ನಡೆಸಲಾಗುವದು ಎಂದರು.
ಈಗಾಗಲೇ ದಾವಣಗೆರೆಯ ರಾಜ್ಯ ಪಂಚಮಸಾಲಿ ಹೋರಾಟದ ಯುವ ಘಟಕದ ಉಪಾಧ್ಯಕ್ಷ ಅಜಯಕುಮಾರರವರು ಹೋರಾಟಕ್ಕೆ ದಾವಣಗೆರೆಯಿಂದ ಒಂದು ಸಾವಿರ ಟ್ರ್ಯಾಕ್ಟರ ಬರಲಿದ್ದು ಅದಕ್ಕೆ ಎಣ್ಣೆಯ ಖರ್ಚನ್ನು ತಾವೇ ನೀಡುವದಾಗಿ ತಿಳಿಸಿದ್ದಾರೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಇಂಡಿ ಪಂಚಮಸಾಲಿ ಸಮಾಜದ ಅಧ್ಯಕ್ಷ ವಿ.ಎಚ್.ಬಿರಾದಾರ, ನ್ಯಾಯವಾದಿ ಎಸ್.ಆರ್.ಬಿರಾದಾರ, ನ್ಯಾಯವಾದಿ ಡಿ.ಜಿ. ಜೋತಗೊಂಡ, ಮಂಜುನಾಥ ಕಾಮಗೊಂಡ, ಶರಣು ಬಂಡಿ, ಉಮೇಶ ಬಳಬಟ್ಟಿ,ಜೆ.ಬಿ.ಬೆನೂರ, ಶಿವಾನಂದ ಚಾಳಿಕಾರ , ವಿ.ಪಿ.ಪಾಟೀಲ,ಜಿ.ಎಸ್.ಪಾಟೀಲ ಮತ್ತಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಾ.29ರಿಂದ ಕೊಲ್ಹಾರದಲ್ಲಿ ವಿಶೇಷ ಪ್ರಶಿಕ್ಷಣ ವರ್ಗ

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 28, 2026

ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ

ಮಹಿಳೆಯರಿಂದ ನಂಜಿಕೆ ತಿನಿಸು ತಯಾರಿಕೆ ಈಗ ಬಲು ಜೋರು

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಾ.29ರಿಂದ ಕೊಲ್ಹಾರದಲ್ಲಿ ವಿಶೇಷ ಪ್ರಶಿಕ್ಷಣ ವರ್ಗ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 28, 2026
    In ದಿನಪತ್ರಿಕೆ
  • ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ
    In ವಿಶೇಷ ಲೇಖನ
  • ಮಹಿಳೆಯರಿಂದ ನಂಜಿಕೆ ತಿನಿಸು ತಯಾರಿಕೆ ಈಗ ಬಲು ಜೋರು
    In (ರಾಜ್ಯ ) ಜಿಲ್ಲೆ
  • ಜಾನುವಾರುಗಳ ಉಚಿತ ತಪಾಸಣೆ ಹಾಗೂ ಚಿಕಿತ್ಸೆ ಶಿಬಿರ
    In (ರಾಜ್ಯ ) ಜಿಲ್ಲೆ
  • ದುಡಿದು ತಿನ್ನದವರು ಗಂಡಸರಲ್ಲ :ದಿಂಗಾಲೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಅಂತರಂಗದ ಅರಿವು ಜಾಗೃತಗೊಳಿಸುವ ಪ್ರಕ್ರಿಯೆ ಲಿಂಗದೀಕ್ಷೆ
    In (ರಾಜ್ಯ ) ಜಿಲ್ಲೆ
  • ಡಾ.ಅಂಬೇಡ್ಕರ್ ಜಯಂತಿಯಲ್ಲಿ ಅಧಿಕಾರಿಗಳು ಕಡ್ಡಾಯವಾಗಿ ಪಾಲ್ಗೊಳ್ಳಿ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ ಮಡಿವಾಳ ಮಾಚಿದೇವರ ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಅಲ್ಪ ಸಂಖ್ಯಾತರ ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.