Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಾ.29ರಿಂದ ಕೊಲ್ಹಾರದಲ್ಲಿ ವಿಶೇಷ ಪ್ರಶಿಕ್ಷಣ ವರ್ಗ

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 28, 2026

ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮತಕ್ಷೇತ್ರದ ಕ್ರೀಡಾಪಟುಗಳಿಗೆ ಆರ್ಥಿಕ ನೆರವು :ಸಚಿವ ಶಿವಾನಂದ
(ರಾಜ್ಯ ) ಜಿಲ್ಲೆ

ಮತಕ್ಷೇತ್ರದ ಕ್ರೀಡಾಪಟುಗಳಿಗೆ ಆರ್ಥಿಕ ನೆರವು :ಸಚಿವ ಶಿವಾನಂದ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಬೇನಾಳ ಗ್ರಾಮಸ್ಥರ ಸನ್ಮಾನ

ಉದಯರಶ್ಮಿ ದಿನಪತ್ರಿಕೆ

ಆಲಮಟ್ಟಿ: ಹಳ್ಳಿಯ ಬಾಲಕಿಯರು ಖೋಖೋ ಕ್ರೀಡೆಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುವುದು ಸಂತಸಕರ, ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಮತಕ್ಷೇತ್ರದ ಎಲ್ಲಾ ಕ್ರೀಡಾಪಟುಗಳಿಗೂ ಆರ್ಥಿಕ ನೆರವಿನ ಜತೆ ಅವರಿಗೆ ಎಲ್ಲಾ ರೀತಿಯ ಕ್ರೀಡಾಸಾಮಗ್ರಿ ಒದಗಿಸುವುದಾಗಿ ಸಕ್ಕರೆ, ಜವಳಿ ಮತ್ತು ಎಪಿಎಂಸಿ ಸಚಿವ ಶಿವಾನಂದ ಪಾಟೀಲ ಹೇಳಿದರು.
ಸಮೀಪದ ಬೇನಾಳ ಆರ್.ಎಸ್. ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ರಾತ್ರಿ ಅಲ್ಲಿಯ ಪ್ರಾಥಮಿಕ ಶಾಲಾ ಬಾಲಕಿಯರ ತಂಡ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಕ್ಕೆ ಗ್ರಾಮಸ್ಥರು ಏರ್ಪಡಿಸಿದ್ದ ಸನ್ಮಾನ ಸಮಾರಂಭದಲ್ಲಿ ಕ್ರೀಡಾಪಟುಗಳನ್ನು ಸನ್ಮಾನಿಸಿ ಮಾತನಾಡಿದರು.
ರಾಜ್ಯ ಮಟ್ಟದ ಖೋಖೋ ಕ್ರೀಡೆಯನ್ನು ನಮ್ಮ ಬಸವನಾಡಿನಲ್ಲಿ ಯಶಸ್ವಿಯಾಗಿ ಸಂಘಟಿಸಿದ ಶಿಕ್ಷಕರ ಸಂಘದ ರಾಜ್ಯ ಘಟಕದ ಪ್ರಧಾನಕಾರ್ಯದರ್ಶಿ ಚಂದ್ರಶೇಖರ ನುಗ್ಗಲಿ ಅದಕ್ಕಾಗಿ ತಮ್ಮೆಲ್ಲಾ ಶಕ್ತಿ, ಪ್ರತಿಭೆಯನ್ನು ಪಣಕ್ಕೆ ಹಚ್ಚಿ ಸಂಯೋಜಿಸಿದ್ದಾರೆ. ಅವರ ಈ ಕಾರ್ಯ ಪ್ರಶಂಸನಾರ್ಯ ಎಂದರು. ಖೋಖೋ ಕ್ರೀಡಾಳುಗಳಿಗೆ ಮಾರ್ಗದರ್ಶನ ನೀಡಿದ ಶಿಕ್ಷಕ ಎನ್.ಬಿ. ದಾಸರ ಕಾರ್ಯವೂ ಶ್ಲಾಘನೀಯ ಎಂದರು.
ಸಂಘಟಕ ಚಂದ್ರಶೇಖರ ನುಗ್ಗಲಿ ಅವರ ಕಾರ್ಯವೈಖರಿಯನ್ನು ಸಚಿವರು ಮುಕ್ತಕಂಠದಿಂದ ಶ್ಲಾಘಿಸಿದರು. ಶಿಗ್ಗಾವಿ ಉಪಚುನಾವಣೆ ಹಿನ್ನಲೆಯಲ್ಲಿ ಕ್ರೀಡಾಕೂಟಕ್ಕೆ ಬಾರದ್ದಕ್ಕೆ ಸಂಘಟಕರಲ್ಲಿ ಸಚಿವರು ಕ್ಷಮೆ ಕೋರಿದರು.
ಇದೇ ಸಂದರ್ಭದಲ್ಲಿ ಬೇನಾಳ ಗ್ರಾಮಸ್ಥರೂ ಕೂಡಾ ಸಂಗ್ರಹಿಸಿದ್ದ ಒಂದು ಲಕ್ಷ ರೂ ಕೊಕ್ಕೊ ಸಂಘಟಕ ಚಂದ್ರಶೇಖರ ನುಗ್ಗಲಿ ಅವರಿಗೆ ನೀಡಿದರು.
ರಾಜ್ಯ ಮಟ್ಟದ ಖೋಖೋ ಸಂಘಟಕ ಹಾಗೂ ಶಿಕ್ಷಕರ ಸಂಘದ ರಾಜ್ಯ ಘಟಕದ ಪ್ರಧಾನಕಾರ್ಯದರ್ಶಿ ಚಂದ್ರಶೇಖರ ನುಗ್ಗಲಿ ಮಾತನಾಡಿ, ಬರಗಾಲದಲ್ಲಿಯೇ ಬಿತ್ತಿ ಬೆಳೆಯುವ ಬೇನಾಳ ಗ್ರಾಮಸ್ಥರ ಒತ್ತಾಸೆಯ ಮೇರೆಗೆ ರಾಜ್ಯ ಮಟ್ಟದ ಕೊಕ್ಕೊ ಸಂಘಟಿಸಲಾಗಿದೆ ಎಂದರು. ಪ್ರವಾಸಿ ತಾಣವಾಗಿರುವ ಆಲಮಟ್ಟಿಯಲ್ಲಿ ಪ್ರವಾಸಿಗರು ಸೇರಿ ಪ್ರತಿಯೊಂದಕ್ಕೂ ವಾಸ್ತವ್ಯಕ್ಕೆ ತೊಂದರೆಯಾಗಿದ್ದು, ಯಾತ್ರಿ ನಿವಾಸ ನಿರ್ಮಿಸಿ ಎಂದು ಅವರು ಸಚಿವರಲ್ಲಿ ಮನವಿ ಮಾಡಿದರು.
ಜಗತ್ತಿನಲ್ಲಿಯೇ ಕಬ್ಬಿಗೆ ಅತಿ ಹೆಚ್ಚು ಬೆಲೆ ನೀಡುತ್ತಿರುವ ರಾಷ್ಟ್ರಗಳಲ್ಲಿ ಭಾರತ ಪ್ರಥಮ ಸ್ಥಾನದಲ್ಲಿದೆ, ಸದ್ಯ ರಾಜ್ಯದಲ್ಲಿ 80 ಸಕ್ಕರೆ ಕಾರ್ಖಾನೆಗಳು ಕಬ್ಬು ನುರಿಸುತ್ತಿವೆ.
ಕಬ್ಬು ಹಾಗೂ ಮೆಕ್ಕೆಜೋಳಕ್ಕೆ ಮುಂದಿನ 10 ವರ್ಷಗಳವರೆಗೂ ಬೆಲೆ ಹೆಚ್ಚಿರುತ್ತದೆ, ಹೀಗಾಗಿ ಈ ಎರಡು ಬೆಳೆ ಬೆಳೆಯುವ ಕಡೆ ರೈತರು ಆದ್ಯತೆ ನೀಡಬೇಕು ಎಂದರು. ಈ ಬಾರಿ ಮೆಕ್ಕೆಜೋಳ ಕ್ವಿಂಟಲ್ ಗೆ 3200 ರೂ ದರವಿದೆ ಎಂದರು.
ಬಿಇಓ ವಸಂತ ರಾಠೋಡ, ಗ್ರಾಮ ಪಂಚಾಯ್ತಿ ಅಧ್ಯಕ್ಷ ರಮೇಶ ವಂದಾಲ, ಯುವ ಮುಖಂಡ ಸಂಗಮೇಶ ಬಳಿಗಾರ, ಎಸ್ಡಿಎಂಸಿ ಅಧ್ಯಕ್ಷ ಮುನ್ನಾ ಬೆಣ್ಣಿ, ಸುನಿಲ ನಾಯಕ, ಎಸ್.ಎಚ್. ಬಿರಾದಾರ, ಬಿ.ಎಚ್. ಗಣಿ, ಹನುಮಂತಪ್ಪ ಇಲ್ಯಾಳ, ಮಹೇಶ ಗಾಳಪ್ಪಗೋಳ, ಬಸವರಾಜ ಹಂಚಲಿ ಮತ್ತೀತರರು ಇದ್ದರು.

1 ಲಕ್ಷ ರೂ ಘೋಷಿಸಿದ ಸಚಿವರು

ಬಸವನಾಡಿನಲ್ಲಿ ಪ್ರಥಮ ಬಾರಿಗೆ ರಾಜ್ಯ ಮಟ್ಟದ ಕೊಕ್ಕೊ ಕ್ರೀಡಾಕೂಟ ಅತ್ಯಂತ ಯಶಸ್ವಿಯಾಗಿ ಏರ್ಪಡಿಸಿದ ಸಂಘಟಕರಿಗೆ 1,00,001 ರೂ ವೈಯಕ್ತಿಕ ದೇಣಿಗೆ ನೀಡುವುದಾಗಿ ಹಾಗೂ ಡಿಸಿಸಿ ಬ್ಯಾಂಕ್ ವತಿಯಿಂದಲೂ ಪ್ರತ್ಯೇಕ ಸಹಾಯ ಧನವನ್ನು ಒದಗಿಸುವುದಾಗಿ ಸಚಿವ ಶಿವಾನಂದ ಪಾಟೀಲ ಘೋಷಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಾ.29ರಿಂದ ಕೊಲ್ಹಾರದಲ್ಲಿ ವಿಶೇಷ ಪ್ರಶಿಕ್ಷಣ ವರ್ಗ

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 28, 2026

ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ

ಮಹಿಳೆಯರಿಂದ ನಂಜಿಕೆ ತಿನಿಸು ತಯಾರಿಕೆ ಈಗ ಬಲು ಜೋರು

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಾ.29ರಿಂದ ಕೊಲ್ಹಾರದಲ್ಲಿ ವಿಶೇಷ ಪ್ರಶಿಕ್ಷಣ ವರ್ಗ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 28, 2026
    In ದಿನಪತ್ರಿಕೆ
  • ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ
    In ವಿಶೇಷ ಲೇಖನ
  • ಮಹಿಳೆಯರಿಂದ ನಂಜಿಕೆ ತಿನಿಸು ತಯಾರಿಕೆ ಈಗ ಬಲು ಜೋರು
    In (ರಾಜ್ಯ ) ಜಿಲ್ಲೆ
  • ಜಾನುವಾರುಗಳ ಉಚಿತ ತಪಾಸಣೆ ಹಾಗೂ ಚಿಕಿತ್ಸೆ ಶಿಬಿರ
    In (ರಾಜ್ಯ ) ಜಿಲ್ಲೆ
  • ದುಡಿದು ತಿನ್ನದವರು ಗಂಡಸರಲ್ಲ :ದಿಂಗಾಲೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಅಂತರಂಗದ ಅರಿವು ಜಾಗೃತಗೊಳಿಸುವ ಪ್ರಕ್ರಿಯೆ ಲಿಂಗದೀಕ್ಷೆ
    In (ರಾಜ್ಯ ) ಜಿಲ್ಲೆ
  • ಡಾ.ಅಂಬೇಡ್ಕರ್ ಜಯಂತಿಯಲ್ಲಿ ಅಧಿಕಾರಿಗಳು ಕಡ್ಡಾಯವಾಗಿ ಪಾಲ್ಗೊಳ್ಳಿ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ ಮಡಿವಾಳ ಮಾಚಿದೇವರ ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಅಲ್ಪ ಸಂಖ್ಯಾತರ ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.