ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಗರದ ಕನಕದಾಸ ವೃತ್ತದಲ್ಲಿ ಸೋಮವಾರ ಸಂತ ಕನಕದಾಸರ ಜಯಂತ್ಯುತ್ಸವ ಅಂಗವಾಗಿ ದಾಸ ಮಾಣಿಕ್ಯ, ಸಮಾನತೆಯ ಹರಿಕಾರ, ಹರಿಗೆ ಒಲಿದ ಶತಾಯು, ಸಂತ ಶ್ರೇಷ್ಠ ಶ್ರೀ ಕನಕದಾಸ ರವರ ಪುತ್ಥಳಿಗೆ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿರ್ದೇಶಕರಾದ ರಾಮನಗೌಡ ಬ.ಪಾಟೀಲ ಯತ್ನಾಳ ರವರು ಮಾಲಾರ್ಪಣೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.
ಮಹಾನಗರ ಪಾಲಿಕೆ ಸದಸ್ಯರು, ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು, ಅಭಿಮಾನಿಗಳು ಉಪಸ್ಥಿತರಿದ್ದರು.

