ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಬಿ. ಎಂ.ಪಾಟೀಲ ಪಬ್ಲಿಕ್ ಶಾಲೆಯಲ್ಲಿ ಭಕ್ತ ಕನಕದಾಸರ ಜಯಂತಿಯನ್ನು ಆಚರಿಸಲಾಯಿತು.
ಕಾರ್ಯಕ್ರಮದ ಅಂಗವಾಗಿ ಶಾಲೆಯ ಪ್ರಾಚಾರ್ಯ ಡಾ. ಸೈಜು ನಾಯರ ಮತ್ತು ಶಾಲಾ ಆಡಳಿತಾಧಿಕಾರಿ ದೀಪಾ ಜಂಬೂರೆ ಕನಕದಾಸರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.
10ನೇ ತರಗತಿ ವಿದ್ಯಾರ್ಥಿಗಳು ಕನಕದಾಸರ ಕೀರ್ತನೆಗಳನ್ನು ಹಾಡಿದರು.
ಈ ಸಂದರ್ಭದಲ್ಲಿ ಶಾಲೆಯ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

