ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ದಾಸ ಶ್ರೇಷ್ಟ ಕನಕದಾಸ ಜಯಂತಿಯನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ.ಆರ್.ಎಂ.ಮಿರ್ದೆ ಮಾತನಾಡಿ, ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವಲ್ಲಿ ಕನಕದಾಸ ಪಾತ್ರ ಅನನ್ಯವಾಗಿದೆ. ಅವರ ವಿಚಾರಧಾರೆಗಳನ್ನು ನಮ್ಮಲ್ಲಿ ಅಳವಡಿಸಿಕೊಳ್ಳುವುದು ಅವಶ್ಯಕವೆಂದು ಹೇಳಿದರು.
ಈ ವೇಳೆಯಲ್ಲಿ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ.ಉಷದೇವಿ.ಹಿರೇಮಠ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ೧೫ ನೇ ಶತಮಾನದಲ್ಲಿನ ಶ್ರೇಷ್ಟ ದಾಸ, ದಾರ್ಶನಿಕ ಕನಕದಾಸರು ತಮ್ಮ ಕೀರ್ತನೆಗಳ ಮೂಲಕ ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದಿದ ಮಹಾನ್ ಚೇತನರಾಗಿದ್ದಾರೆ. ದಾಸರು ತಮ್ಮ ಕೀರ್ತನೆ ಮೂಲಕ ಸಮಾಜದಲ್ಲಿನ ಅಸಮಾನತೆ, ಭಕ್ತಿ ಪಂಥ ಮತ್ತು ತಮ್ಮ ಕೀರ್ತನೆಗಳ ಮೂಲಕ ಕನ್ನಡ ದಾಸ ಸಾಹಿತ್ಯವನ್ನು ಶ್ರೀಮಂತಗೊಳಿಸಿದ ವ್ಯಕ್ತಿ ಅದು ದಾಸರು ಎಂದು ಹೇಳಿದರು.
ಈ ವೇಳೆಯಲ್ಲಿ ಮಹಾವಿದ್ಯಾಲಯದ ಬೋಧಕರು ಭಕ್ತಿ ಗೀತೆಗಳನ್ನು ಹಾಡಿ ಭಕ್ತಿ ಮರೆದರು.
ಈ ಸಂದರ್ಭದಲ್ಲಿ ಉಪ ಪ್ರಾಚಾರ್ಯ ಡ್ರಾ.ಅನಿಲ್ ನಾಯಕ, ಪಿಯುಸಿ ಪ್ರಾಚಾರ್ಯ ಪ್ರೊ.ಸಿ.ಬಿ.ಪಾಟೀಲ, ಐಕ್ಯೂಎಸಿ ನಿರ್ದೆಶಕ ಡಾ.ಪಿ.ಎಸ್.ಪಾಟೀಲ, ಸಾಂಸ್ಕೃತಿಕ ವಿಭಾಗದ ಕಾರ್ಯಾಧ್ಯಕ್ಷ ಡಾ.ಶ್ರೀನಿವಾಸ ದೊಡ್ಡಮನಿ, ದೈಹಿಕ ನಿರ್ದೇಶಕ ಎಸ್ ಕೆ ಪಾಟೀಲ ಸೇರಿದಂತೆ ಮಹಾವಿದ್ಯಾಲಯದ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.

