Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಾ.29ರಿಂದ ಕೊಲ್ಹಾರದಲ್ಲಿ ವಿಶೇಷ ಪ್ರಶಿಕ್ಷಣ ವರ್ಗ

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 28, 2026

ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವೃಕ್ಷೋಥಾನ್ ಹೆರಿಟೇಜ್ ರನ್: ಭರದಿಂದ ಸಾಗಿದ ನೋಂದಣಿ ಕಾರ್ಯ
(ರಾಜ್ಯ ) ಜಿಲ್ಲೆ

ವೃಕ್ಷೋಥಾನ್ ಹೆರಿಟೇಜ್ ರನ್: ಭರದಿಂದ ಸಾಗಿದ ನೋಂದಣಿ ಕಾರ್ಯ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನಗರದಲ್ಲಿ ಡಿಸೆಂಬರ್ 22 ರಂದು ನಡೆಯಲಿರುವ ವೃಕ್ಷೋಥಾನ್ ಹೆರಿಟೇಜ್ ರನ್-2024ಕ್ಕೆ ನೋಂದಣಿ ಕಾರ್ಯ ಭರದಿಂದ ಸಾಗಿದ್ದು, ಹಿರಿಯ ನಾಗರಿಕರೂ ಕೂಡ ನೋಂದಣಿ ಮಾಡಿಸುವ ಮೂಲಕ ಇತರರಿಗೆ ಸ್ಪೂರ್ತಿಯಾಗಿದ್ದಾರೆ.
ಉಡುಪಿ ಕಟಪಾಡಿಯವರಾದ ಮತ್ತು ಹಾಲಿ ಪಂಚಕಲ್ ನಿವಾಸಿಯಾಗಿರುವ 73 ವರ್ಷದ ಸುಲತಾ ಕಾಮತ ಈ ಬಾರಿಯೂ ವೃಕ್ಷೋಥಾನ್ ಹೆರಿಟೇಜ್ ರನ್ ನಲ್ಲಿ ಪಾಲ್ಗೊಳ್ಳುತ್ತಿದ್ದು ಗಮನ ಸೆಳೆದಿದ್ದಾರೆ.
ಕಳೆದ 30 ವರ್ಷದಿಂದ ದೇಶ ವಿದೇಶಗಳ ನಾನಾ ಭಾಗಗಳಲ್ಲಿ ನಡೆದ ಮ್ಯಾರಾಥಾನ್ ಗಳಲ್ಲಿ ಪಾಲ್ಗೋಂಡಿರುವ ಸುಲತಾ ಕಾಮತ, ತಿಂಗಳಲ್ಲಿ ಕನಿಷ್ಠ ಮೂರ್ನಾಲ್ಕು ಮ್ಯಾರಾಥಾನ್ ಗಳಲ್ಲಿ ಓಡುವ ಮೂಲಕ ಮ್ಯಾರಾಥಾನ್ ಪಟುಗಳಲ್ಲಿ ಮನೆಮಾತಾಗಿದ್ದಾರೆ. ಈವರೆಗೆ ಸುಮಾರು 1200ಕ್ಕೂ ಹೆಚ್ಚು ಚಿನ್ನ, ಬೆಳ್ಳಿ, ರಜತ ಪದಕಗಳನ್ನೂ ಜಯಿಸಿರುವ ಇವರು ವಿಜಯಪುರ ವೃಕ್ಷೋಥಾನ್ ನಲ್ಲಿ ಭಾಗವಹಿಸುತ್ತಿರುವುದು ಹೆಮ್ಮೆಯ ವಿಷಯವಾಗಿದೆ.
73ನೇ ಇಳಿ ವಯಸ್ಸಿನಲ್ಲಿಯೂ ಸ್ವಾವಲಂಬಿ ಬದುಕು ಸಾಗಿಸುತ್ತಿರುವ ಅವರು, ತಮ್ಮೂರಿನಲ್ಲಿ ನೀರಿನ ವ್ಯಾಪಾರ ಮಾಡುತ್ತ ಕ್ಯಾನ್ ಗಳನ್ನೂ ಎತ್ತಿ ವಾಹನದಲ್ಲಿ ಹಾಕುತ್ತ ಆರೋಗ್ಯವನ್ನು ಸದೃಢವಾಗಿಸಿಕೊಂಡಿದ್ದಾರೆ.
ಇವರು ಭಾರತವಷ್ಟೇ ಅಲ್ಲ, ಸಿಂಗಪೂರ, ಮಲೇಷ್ಯಾ ಸೇರಿದಂತೆ ಇತರ ದೇಶಗಳಲ್ಲಿಯೂ ನಡೆದ ಮ್ಯಾರಾಥಾನ್ ಗಳಲ್ಲಿ ಪಾಲ್ಗೋಂಡು ಭೇಷ್ ಎನಿಸಿಕೊಂಡಿದ್ದಾರೆ. ಕಾಲೇಜು ದಿನಗಳಿಂದಲೇ ಓಡುವ ಹವ್ಯಾಸ ರೂಢಿ ಮಾಡಿಕೊಂಡಿರುವ ಇವರು 2006 ರಿಂದ ಮ್ಯಾರಾಥಾನ್ ಗಳಲ್ಲಿ ಪಾಲ್ಗೊಳ್ಳುವ ಮೂಲಕ ಇತರರಿಗೆ ಪ್ರೇರಣೆಯಾಗಿದ್ದಾರೆ. ಬಿ. ಎ ಪದವಿಧರೆಯಾಗಿರುವ ಸುಲತಾ ಕಾಮತ ಅಡುಗೆ ಮಾಡುವುದರಲ್ಲಿ, ನಾಟಕ, ಯಕ್ಷಗಾನ, ಹೂವು, ಗೊಂಬೆ ತಯಾರಿಕೆ, ಕುಶಲಕಲೆ, ಸ್ಕ್ರೀನ್ ಪ್ರಿಂಟಿಂಗ್ ಮಾಡುತ್ತ ಸಾಕು ಪ್ರಾಣಿಗಳನ್ನು ಸಾಕುತ್ತಿದ್ದಾರೆ.
2006 ರಿಂದ ಈವರೆಗೆ ದೇಶದಲ್ಲಿ ನಡೆದ ಬಹುತೇಕ ಎಲ್ಲ 21 ಕಿ. ಮೀ. ಹಾಫ್ ಮ್ಯಾರಾಥಾನ್ ಗಳಲ್ಲಿ ಪಾಲ್ಗೋಳ್ಳುತ್ತಿದ್ದಾರೆ. ರಾಜ್ಯ, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಪಾಲ್ಗೋಂಡಿದ್ದಾರೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತ 23 ಬಾರಿ ಪ್ರತಿನಿಧಿಸಿ ಹಲವಾರು ಬಾರಿ ಪದಕ ಗೆದ್ದಿದ್ದಾರೆ. 2022ರಲ್ಲಿ ಉಡುಪಿಯಲ್ಲಿ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪಡೆದಿದ್ದಾರೆ. 2023ರಲ್ಲಿ ನೇಪಾಳದಲ್ಲಿ ನಡೆದ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾ ಕೂಟದಲ್ಲಿ 10 ಕಿ. ಮೀ. ಮತ್ತು 5 ಕಿ. ಮೀ. ಎರಡೂ ಓಟಗಳಲ್ಲಿ ಚಿನ್ನದ ಪದಕ 5 ಕಿ. ಮೀ. ವಾಕಿಂಗ್ ನಲ್ಲಿ ಚಿನ್ನದ ಪದಕ ಗೆದ್ದು ಬೀಗಿದ್ದಾರೆ.
2023ರಲ್ಲಿ ನಾಸಿಕ್ ನಲ್ಲಿ ನಡೆದ ರಾಷ್ಟ್ರ ಮಟ್ಟದ ಕ್ರೀಡಾ ಕೂಟ ದಲ್ಲಿ 5 ಕಿ. ಮೀ. ವಾಕಿಂಗ್ ನಲ್ಲಿ ಬೆಳ್ಳಿ, 10 ಕಿ. ಮೀ. ಓಟದಲ್ಲಿ ಚಿನ್ನ ಹಾಗೂ 5 ಕಿ. ಮೀ. ಓಟದಲ್ಲಿ ಚಿನ್ನದ ಪದಕ ಜಯಿಸಿದ್ದಾರೆ. ದಕ್ಷಿಣ ಭಾರತದ ಪ್ರಥಮ ಮಾಸ್ಟರ್ಸ್ ಅಥ್ಲೇಟಿಕ್ ಓಪನ್ ಚಾಂಪಿಯನಶಿಪ್ ನಲ್ಲಿ5 ಕಿ. ಮೀ. ಮತ್ತು 10 ಕಿ. ಮೀ. ಎರಡೂ ಓಟಗಳಲ್ಲಿ ಚಿನ್ನ ಹಾಗೂ 400 ಮೀ. ಓಟದಲ್ಲಿ ಬೆಳ್ಳಿ ಪದಕ ಗಳಿಸಿದ್ದಾರೆ. ಬೆಂಗಳೂರಿನಲ್ಲಿ ನಡೆದ ಪ್ಯಾನ್ ಇಂಡಿಯಾ ರಾಷ್ಟ್ರ ಮಟ್ಟದ ಕ್ರೀಡಾ ಕೂಟದಲ್ಲಿ 10 ಕಿ. ಮೀ. ಮತ್ತು 5 ಕಿ. ಮೀ. ಓಟದಲ್ಲಿ ಚಿನ್ನ, 5 ಕಿ. ಮೀ. ವಾಕಿಂಗ್ ನಲ್ಲಿ ಚಿನ್ನ ಹಾಗೂ 4×100 ರಿಲೇ ಮತ್ತು 4×400 ರಿಲೇ ಓಟದಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಜಯಿಸಿದ್ದಾರೆ.
ಶಿವಮೊಗ್ಗ ದಲ್ಲಿ ನಡೆದ ರಾಜ್ಯ ಮಟ್ಟದ ಕ್ರೀಡಾ ಕೂಟ ದಲ್ಲಿ 5 ಕಿ. ಮೀ. ವಾಕಿಂಗ್ ನಲ್ಲಿ ಬೆಳ್ಳಿ, 2 ಕಿ. ಮೀ. ಸ್ಟಿಪಲ್ ಚೇಸ್ ನಲ್ಲಿ ಚಿನ್ನ, 400 ಮೀ. ಓಟದಲ್ಲಿ ಚಿನ್ನ ಹಾಗೂ 400×100 ಮೀಟರ್ ರಿಲೆಯಲ್ಲಿ ಚಿನ್ನದ ಪದಕ ಗಳಿಸಿದ್ದಾರೆ. 2023ರಲ್ಲಿ ಫೆಸಿಪಿಕ್ ಮಾಸ್ಟರ್ ಅಥ್ಲೆಟಿಕ್ಸ್ ಸೇರಿದಂತೆ ಇನ್ನೂ ಹಲವಾರು ಮ್ಯಾರಾಥಾನ್ ಗಳಲ್ಲಿ ಅವರು ಚಿನ್ನದ ಪದಕ ಕಳಿಸಿದ್ದಾರೆ. ಪ್ರಶಸ್ತಿ ಮತ್ತು ಟ್ರೋಫಿಗಳು ಇವರಿಗೆ ಲೀಲಾಜಾಲವಾಗಿ ಒಲಿದು ಬರುತ್ತಿರುವುದು ಇವರು ಇಂಥ ಇಳಿ ವಯಸ್ಸಿನಲ್ಲಿಯೂ ಮಾನಸಿಕ ಮತ್ತು ದೈಹಿಕವಾಗಿ ಸದೃಢರಾಗಿರುವುದಕ್ಕೆ ಸಾಕ್ಷಿಯಾಗಿದೆ ಎನ್ನುತ್ತಾರೆ ವೃಕ್ಷೋಥಾನ್ ಹೆರಿಟೇಜ್ ರನ್-2024ರ ನೋಂದಣಿ ಸಮಿತಿಯ ಶೋಭಾ ನರೇನ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಾ.29ರಿಂದ ಕೊಲ್ಹಾರದಲ್ಲಿ ವಿಶೇಷ ಪ್ರಶಿಕ್ಷಣ ವರ್ಗ

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 28, 2026

ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ

ಮಹಿಳೆಯರಿಂದ ನಂಜಿಕೆ ತಿನಿಸು ತಯಾರಿಕೆ ಈಗ ಬಲು ಜೋರು

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಾ.29ರಿಂದ ಕೊಲ್ಹಾರದಲ್ಲಿ ವಿಶೇಷ ಪ್ರಶಿಕ್ಷಣ ವರ್ಗ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 28, 2026
    In ದಿನಪತ್ರಿಕೆ
  • ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ
    In ವಿಶೇಷ ಲೇಖನ
  • ಮಹಿಳೆಯರಿಂದ ನಂಜಿಕೆ ತಿನಿಸು ತಯಾರಿಕೆ ಈಗ ಬಲು ಜೋರು
    In (ರಾಜ್ಯ ) ಜಿಲ್ಲೆ
  • ಜಾನುವಾರುಗಳ ಉಚಿತ ತಪಾಸಣೆ ಹಾಗೂ ಚಿಕಿತ್ಸೆ ಶಿಬಿರ
    In (ರಾಜ್ಯ ) ಜಿಲ್ಲೆ
  • ದುಡಿದು ತಿನ್ನದವರು ಗಂಡಸರಲ್ಲ :ದಿಂಗಾಲೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಅಂತರಂಗದ ಅರಿವು ಜಾಗೃತಗೊಳಿಸುವ ಪ್ರಕ್ರಿಯೆ ಲಿಂಗದೀಕ್ಷೆ
    In (ರಾಜ್ಯ ) ಜಿಲ್ಲೆ
  • ಡಾ.ಅಂಬೇಡ್ಕರ್ ಜಯಂತಿಯಲ್ಲಿ ಅಧಿಕಾರಿಗಳು ಕಡ್ಡಾಯವಾಗಿ ಪಾಲ್ಗೊಳ್ಳಿ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ ಮಡಿವಾಳ ಮಾಚಿದೇವರ ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಅಲ್ಪ ಸಂಖ್ಯಾತರ ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.