ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಪ್ರಸಕ್ತ ೨೦೨೪-೨೫ನೇ ಸಾಲಿನಲ್ಲಿ ನೈಸರ್ಗಿಕ ವಿಕೋಪಗಳಾದ ಪ್ರವಾಹ-ಅತಿವೃಷ್ಟಿಯಿಂದ ವಿಜಯಪುರ ಜಿಲ್ಲೆಯಲ್ಲಿ ಹಿಂಗಾರು ಹಂಗಾಮಿನಲ್ಲಿ ಉಂಟಾದ ಬೆಳ ಹಾನಿ ಪರಿಹಾರವನ್ನು ಪಾವತಿಸಲು ಬೆಳೆ ಹಾನಿಯಾದ ರೈತರ ಪಟ್ಟಿ ಜಿಲ್ಲಾಧಿಕಾರಿಗಳ ಕಚೇರಿ, ಉಪವಿಭಾಗಾಧಿಕಾರಿಗಳ ಕಚೇರಿ, ಆಯಾ ತಹಶೀಲ್ದಾರರು, ಆಯಾ ಗ್ರಾಮ ಪಂಚಾಯತ್ ಮತ್ತು ಎಲ್ಲ ರೈತ ಸಂಪರ್ಕ ಕೇಂದ್ರಗಳಲ್ಲಿ ನವೆಂಬರ್ ೧೯ರಂದು ಪ್ರಕಟಿಸಲಾಗಿದೆ.
ಪ್ರಕಟಿತ ಪಟ್ಟಿಗೆ ಯಾವುದಾದರೂ ಆಕ್ಷೇಪಣೆಗಳಿದ್ದಲ್ಲಿ ಸಂಬಂಧಿಸಿದ ತಹಶೀಲ್ದಾರ-ಕೃಷಿ ತೋಟಗಾರಿಕೆ ಇಲಾಖೆಗಳ ತಾಲೂಕಾ ಕಚೇರಿಗಳಲ್ಲಿ ೦೭ ದಿನಗಳೊಳಗಾಗಿ ದಿ:೨೮-೧೧-೨೦೨೪ರೊಳಗೆ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದ್ದು, ಜಿಲ್ಲೆಯ ಅಂತರ್ಜಾಲ ವಿಳಾಸ https://vijayapura.nic.inದಲ್ಲಿಯೂ ಸಹ ಪರಿಶೀಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
