ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಗರದಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕನಕದಾಸ ಬಡಾವಣೆಯಲ್ಲಿರುವ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯಕ್ಕೆ ೧೫೦ ಸಂಖ್ಯಾಬಲಕ್ಕೆ ಅನುಗುಣವಾಗಿ ಹತ್ತು ವಿದ್ಯಾರ್ಥಿಗಳಿಗೆ ಅಗತ್ಯ ಸೌಕರ್ಯವುಳ್ಳ ಕಟ್ಟಡ ಬಾಡಿಗೆಗಾಗಿ ಅರ್ಜಿ ಆಹ್ವಾನಿಸಿಲಾಗಿದೆ. ವಸತಿ ನಿಲಯಕ್ಕಾಗಿ ಬಾಡಿಗೆ ಕಟ್ಟಡ ಒದಗಿಸಲು ಆಸಕ್ತಿ ಇರುವ ಕಟ್ಟಡ ಮಾಲೀಕರು ದಿನಾಂಕ: ೨೨-೧೧-೨೦೨೪ ರೊಳಗಾಗಿ ತಾಲೂಕ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಡಿ. ದೇವರಾಜ್ ಅರಸು ಭವನ, ಜಿಲ್ಲಾ ಪಂಚಾಯತ್ ಕಚೇರಿ ಹತ್ತಿರ ಕನಕದಾಸ ಬಡಾವಣೆ ಇವರಿಗೆ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ: ೦೮೩೫೨-೨೬೭೯೯೩, ಮೊಬೈಲ್ ೯೬೧೧೫೧೮೪೭೬ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದು ತಾಲೂಕಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
