ಉದಯರಶ್ಮಿ ದಿನಪತ್ರಿಕೆ
ಚಡಚಣ: ಇತ್ತಿಚಗೆ ಸಿಂದಗಿಯಲ್ಲಿ ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಮತ್ತು ಎಚ್.ಜಿ ಕಲಾ,ವಾಣಿಜ್ಯ ಮತ್ತು ವಿಜ್ಞಾನ ಪದವಿ ಪೂರ್ವ ಮಹಾವಿದ್ಯಾಲಯಗಳ ಆಶ್ರಯದಲ್ಲಿ ನಡೆದ ಪದವಿ ಪೂರ್ವ ಮಹಾವಿದ್ಯಾಲಯಗಳ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಚಡಚಣದ ಸಂಗಮೇಶ್ವರ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಪ್ರಥಮ ಸ್ಥಾನವನ್ನು ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ
ಪ್ರಥ್ವಿ ಮುಂಡೇವಾಡಿ ಭಕ್ತಿ ಗೀತೆಯಲ್ಲಿ ಪ್ರಥಮ ಸ್ಥಾನ ಮತ್ತು ಚಿನ್ಮಯ ಸಾಂಗೋಲಿ ಮತ್ತು ಶಿವರಾಜಕುಮಾರ ಬನಪೂರೆ ರಸ ಪ್ರಶ್ನೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಉಪ ನಿರ್ದೇಶಕ ಸಿ.ಕೆ.ಹೊಸಮನಿ, ಸಂಗೇಶ್ವರ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರು, ಪ್ರಾಚಾರ್ಯ ಮನೋಜ ಕಟಗೇರಿ, ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.

