ಉದಯರಶ್ಮಿ ದಿನಪತ್ರಿಕೆ
ವಿಜಾಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಕಂಪ್ಯೂಟರ್ ವಿಜ್ಞಾನ ವಿಭಾಗದಲ್ಲಿ ೨೦೨೪-೨೫ನೇ ಶೈಕ್ಷಣಿಕ ಸಾಲಿನ ಎಂಸಿಎ ಪ್ರವೇಶಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ೨೦೨೪-೨೫ನೇ ಶೈಕ್ಷಣಿಕ ಸಾಲಿನ ಎಂಸಿಎ ಕೋರ್ಸ್ಗೆ ಹಂಚಿಕೆಯಾಗಿ ಕೆಲವೇ ಕೆಲವು ಬಾಕಿ ಉಳಿದ ಸೀಟುಗಳಿಗಾಗಿ ಆಸಕ್ತ ಅಭ್ಯರ್ಥಿಗಳು ಯುಯುಸಿಎಮ್‌ಎಸ್ ತಂತ್ರಾಂಶದ ಅರ್ಜಿ ಸಲ್ಲಿಸಬಹುದಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಿಗದಿಪಡಿಸಿರುವ ಶುಲ್ಕ ಮಾತ್ರ ಪಾವತಿಸಲು ಅವಕಾಶವಿದೆ. ಹೆಚ್ಚಿನ ಮಾಹಿತಿಯನ್ನು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ ವಿಜಯಪುರ ವೆಬಸೈಟ್ ತಿತಿತಿ.ಞsತಿu.ಚಿಛಿ.iಟಿ ಸಂಪರ್ಕಿಸಬಹುದಾಗಿದೆ ಎಂದು ವಿವಿ ಪ್ರಕಟಣೆ ತಿಳಿಸಿದೆ.

