ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಮಹಾನಗರ ಪಾಲಿಕೆಯ ವಾರ್ಡ ನಂ.೨೯ಕ್ಕೆ ನಡೆದ ಉಪ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ಪಕ್ಷದ ಗಿರೀಶ ವಿಜಯಕುಮಾರ ಪಾಟೀಲ ಅವರು ೨೭೫೪ ಮತಗಳನ್ನು ಪಡೆಯುವ ಮೂಲಕ ಆಯ್ಕೆಯಾಗಿದ್ದಾರೆ ಎಂದು ಉಪ ಚುನಾವಣೆ ಚುನಾವಣಾಧಿಕಾರಿ ವಿನಯಕುಮಾರ ಪಾಟೀಲ ಅವರು ತಿಳಿಸಿದ್ದಾರೆ.
ವಾರ್ಡ ನಂ.೨೯ಕ್ಕೆ ನಡೆದ ಉಪ ಚುನಾವಣೆಯಲ್ಲಿ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ್ದ ಭಾಗಪ್ಪ ಏಳಗಂಟಿ ೧೭೬೨ ಮತಗಳನ್ನು ಪಡೆದಿದ್ದು, ೩೮ ನೋಟಾ ಮತಗಳು ಚಲಾವಣೆಯಾಗಿವೆ.

