ಉದಯರಶ್ಮಿ ದಿನಪತ್ರಿಕೆ
ದೇವರಹಿಪ್ಪರಗಿ: ತಾಲ್ಲೂಕು ಆಡಳಿತ, ಪಟ್ಟಣ ಪಂಚಾಯಿತಿ ಹಾಗೂ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಸಂವಿಧಾನ ದಿನಾಚರಣೆ ಜರುಗಿತು.
ಪಟ್ಟಣದ ಅಂಬೇಡ್ಕರ ವೃತ್ತದಲ್ಲಿ ಮಂಗಳವಾರ ತಹಶೀಲ್ದಾರ್ ಪ್ರಕಾಶ ಸಿಂದಗಿ ಸಂವಿಧಾನ ದಿನಾಚರಣೆ ಅಂಗವಾಗಿ ಸಂವಿಧಾನ ಪೀಠಿಕೆ ಓದುವುದರ ಮೂಲಕ ಪ್ರತಿಜ್ಞಾವಿಧಿ ಭೋಧಿಸಿ ಮಾತನಾಡಿದರು. ಜಗತ್ತಿನಲ್ಲಿಯೇ ಅತ್ಯಂತ ಶ್ರೇಷ್ಠವಾದ ಸಂವಿಧಾನ ನಮ್ಮದಾಗಿದೆ. ಪ್ರತಿಯೊಂದು ಅಂಶಗಳು ನಮಗೆ ಮಾದರಿಯಾಗಿವೆ. ಸರ್ಕಾರ ನಡೆಸುವ ಪ್ರತಿಯೊಬ್ಬ ನಾಗರೀಕನಿಗೂ ಅನ್ವಯವಾಗುವ ಹಕ್ಕು ಮತ್ತು ಕರ್ತವ್ಯಗಳ ಕುರಿತು ಸಂವಿಧಾನ ಮಾಹಿತಿ ನೀಡುತ್ತದೆ. ಇಂತಹ ಸಂವಿಧಾನ ರಚನೆ ಮಾಡಿದ ಮಹನೀಯರೆಲ್ಲರಿಗೂ ನಾವು ಕೃತಜ್ಞರಾಗಿರಬೇಕು. ಸಂವಿಧಾನ ರಚನೆಯಲ್ಲಿ ಅಂಬೇಡ್ಕರ ಅವರ ಸೇವೆ ಶ್ಲಾಘನೀಯವಾಗಿದೆ. ಇಂತಹ ಸಂವಿಧಾನವನ್ನು ಸಂರಕ್ಷಣೆ ಮಾಡುವ ಕಾರ್ಯ ನಮ್ಮ ಮೇಲಿದೆ ಎಂದರು.
ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಅಶೋಕ ಹೆಗಡೆ, ಶಿರಸ್ತೇದಾರ ಸುರೇಶ ಮ್ಯಾಕೇರಿ, ಪಟ್ಟಣ ಪಂಚಾಯಿತಿ ಸದಸ್ಯ ಕಾಸುಗೌಡ ಬಿರಾದಾರ(ಜಲಕತ್ತಿ), ಕಿರಿಯ ಆರೋಗ್ಯ ನಿರೀಕ್ಷಕ ಫಿರೋಜ್ ಮುಲ್ಲಾ, ಮುತ್ತುರಾಜ ಹಿರೇಮಠ, ಅಂಬೇಡ್ಕರ್ ಸುಧಾರಣಾ ಸಮೀತಿ ಅಧ್ಯಕ್ಷ ಕಾಶೀನಾಥ ತಳಕೇರಿ, ಬಸವರಾಜ ದೇವಣಗಾಂವ, ಮುನೀರ್ ಅಹ್ಮದ್ ಮಳಖೇಡ, ವೀರೇಶ ಕುದರಿ, ರಾವುತ ತಳಕೇರಿ, ರಾವುತ ಅಗಸರ, ಜಾನು ಗುಡಿಮನಿ, ಅರುಣ ಕೋರವಾರ, ಬಸವರಾಜ ತಳಕೇರಿ ಹಾಗೂ ಪಟ್ಟಣ ಪಂಚಾಯಿತಿ ಸಿಬ್ಬಂದಿ ಇದ್ದರು.

