ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ವಿಶ್ವಾಸ ನಂಬಿಕೆಯೇ ಜೀವಮಾನದ ಸಾಧನೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸಹಕಾರಿ ಕ್ಷೇತ್ರದಲ್ಲಿ ಸಾಧನೆ ಮಾಡಬೇಕು ಎಂದು ಶ್ರೀ ಗಜಾನನ ಸೌಹಾರ್ದ ಬ್ಯಾಂಕಿನ ಸಿಇಒ ಅವಧೂತ ಜೋಶಿ ಹೇಳಿದರು.
ಪಟ್ಟಣದ ರಾಂಪೂರ ಪಿಎ ರಸ್ತೆಯಲ್ಲಿರುವ ಶ್ರೀಸಮರ್ಥ ವಿದ್ಯಾ ವಿಕಾಸ ವಿವಿದೊದ್ದೇಶಗಳ ಸಂಸ್ಥೆಯ ಪ್ರೇರಣಾ ಸಮೂಹ ಶಿಕ್ಷಣ ಸಂಸ್ಥೆಗಳು ಮತ್ತು ವಿದ್ಯಾನಿಕೇತನ ಪ್ರಾಥಮಿಕ ಶಾಲೆಗಳ ಶಿಕ್ಷಕರ ಬಳಗದ ಸಹಯೋಗದಲ್ಲಿ ಬೆಳಗಾವಿಯಲ್ಲಿ ನಡೆದ ೭೧ನೇ ಅಖಿಲ ಭಾರತ ಸಹಕಾರ ಸಪ್ತಾಹದ ನಿಮಿತ್ತ ಸಿಂದಗಿ ನಗರದಲ್ಲಿ ಹ್ಮಮಿಕೊಂಡ ಅಭಿನಂದನಾ ಸಮಾರಂಭದಲ್ಲಿ ಶ್ರೇಷ್ಠ ಸಹಕಾರಿ ರಾಜ್ಯ ಪ್ರಶಸ್ತಿ ಪುರಸ್ಕಾರಕ್ಕೆ ಭಾಜನರಾದ ಆರ್.ಡಿ.ಕುಲಕರ್ಣಿ ಅವರನ್ನು ಸನ್ಮಾನಿಸಿ ಗೌರವಿಸಿ ಮಾತನಾಡಿದರು.
ಶಿಕ್ಷಕ ವೃತ್ತಿಯಿಂದ ಸಹಕಾರ ಕ್ಷೇತ್ರದಲ್ಲಿ ಸಾಧನೆ ಮಾಡಿದ ರೀತಿ ಅಮೋಘ. ವಿದ್ಯಾರ್ಥಿಗಳಲ್ಲಿ ಶಿಸ್ತು ಇದ್ದಲ್ಲಿ ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು ಸಾಧ್ಯ. ಅದರಂತೆ ಸಹಕಾರಿ ಕ್ಷೇತ್ರದಲ್ಲಿ ಯಶಸ್ವಿಯಾದವರು ಎಲ್ಲ ಕ್ಷೇತ್ರದಲ್ಲಿ ಅಭಿವೃದ್ಧಿ ಮಾಡಲು ಸಾಧ್ಯ. ಅದಕ್ಕೆ ನಿದರ್ಶನವೆಂದರೆ ಕುಲಕರ್ಣಿಯವರು ಎಂದರು.
ಕಾರ್ಯಕ್ರಮದಲ್ಲಿ ಪತ್ರಕರ್ತ ಶಾಂತು ಹಿರೇಮಠ, ಸಂಸ್ಥೆಯ ನಿದೇಶಕರಾದ ಪಿ.ಡಿ.ಕುಲಕರ್ಣಿ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ..ಕುಲಕರ್ಣಿ, ಪ್ರಾಥಮಿಕ ಶಾಲೆಯ ಕುಖ್ಯಗುರುಮಾತೆ ಎಂ.ಪಿ.ಬುಕ್ಕಾ, ಪ್ರೇರಣಾ ಪಬ್ಲಿಕ್ ಶಾಲೆಯ ಮುಖ್ಯಗುರುಮಾತೆ ಎಸ್.ಐ.ಅಸ್ಕಿ, ಸತೀಶ್ ಕುಲಕರ್ಣಿ, ಎಸ್.ಎಸ್.ಪಾಟೀಲ, ನಂದಕುಮಾರ್ ಹೊಳ್ಳ, ಆರ್.ಎನ್.ಪಕೀರಪುರ ಸೇರಿದಂತೆ ಶಾಲೆಯ ಬೋಧಕ-ಬೋಧಕೇತರ ಸಿಬ್ಬಂದಿಳು ಹಾಗೂ ವಿದ್ಯಾರ್ಥಿಗಳಿದ್ದರು.

