Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

​ಜು.೧೭ ರಂದು ರಿಯಾಯಿತಿ ದರದಲ್ಲಿ ಮೀನುಮರಿಗಳ ಮಾರಾಟ

ಎಸ್ಐಆರ್ ಸಾಧನೆ: ಬಬಲೇಶ್ವರ ಮತಗಟ್ಟೆಅಧಿಕಾರಿಗಳಿಗೆ ಸನ್ಮಾನ

ತರಬೇತಿಗೆ ಕಾನೂನು ಪದವೀಧರರಿಂದ ಅರ್ಜಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಂವಿಧಾನದ ಬಗ್ಗೆ ಅರಿವು ಮೂಡಿಸುವುದೇ ದಿನಾಚರಣೆಯ ಉದ್ದೇಶ
(ರಾಜ್ಯ ) ಜಿಲ್ಲೆ

ಸಂವಿಧಾನದ ಬಗ್ಗೆ ಅರಿವು ಮೂಡಿಸುವುದೇ ದಿನಾಚರಣೆಯ ಉದ್ದೇಶ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಭಾರತೀಯ ಸಂವಿಧಾನದ ಬಗ್ಗೆ ವಿದ್ಯಾರ್ಥಿಗಳಿಗೆ ಮತ್ತು ಜನರಿಗೆ ಅರಿವು ಮೂಡಿಸುವ ಉದ್ದೇಶವೇ ಸಂವಿಧಾನ ದಿನಾಚರಣೆಯ ಉದ್ದೇಶವಾಗಿದೆ ಎಂದು ಸಿಂದಗಿಯ ಹಿರಿಯ ಸಿವ್ಹಿಲ್ ನ್ಯಾಯಾಧೀಶ ನಾಗೇಶ ಮೋಗೇರ ಹೇಳಿದರು.
ಪಟ್ಟಣದ ಎಚ್.ಜಿ.ಕಾಲೇಜಿನಲ್ಲಿ ಮಂಗಳವಾರ ತಾಲೂಕು ಕಾನೂನು ಸೇವಾ ಸಮಿತಿ ಸಿಂದಗಿ, ವಕೀಲರ ಸಂಘ ಸಿಂದಗಿ ಹಾಗೂ ಎಚ್.ಜಿ.ಪದವಿಪೂರ್ವ ಮಹಾವಿದ್ಯಾಲಯ ಇವುಗಳ ಸಹಯೋಗದಲ್ಲಿ ಹಮ್ಮಿಕೊಂಡ ಭಾರತೀಯ ಸಂವಿಧಾನ ದಿನಾಚರಣೆ ಕುರಿತಾಗಿ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಇಂದು ಭಾರತದ ಸಂವಿಧಾನ ದಿನವಾಗಿದ್ದು, ದೇಶದ ಯುವಜನರಿಗೆ ಸಂವಿಧಾನದ ಮೌಲ್ಯಗಳನ್ನು ತಿಳಿಸುವ ಉದ್ದೇಶದಿಂದ ಈ ದಿನವನ್ನು ಆಚರಿಸಲಾಗುತ್ತದೆ. ಸಂವಿಧಾನ ಶಿಲ್ಪಿ ಡಾ. ಭೀಮರಾವ್ ಅಂಬೇಡ್ಕರ್ ಅವರು ಭಾರತೀಯ ನಾಗರಿಕರಿಗೆ ಸಂಬಂಧಿಸಿದ ಹಕ್ಕುಗಳು ಹಾಗೂ ಕಾನೂನುಗಳನ್ನು ವಿವರಿಸುವ ಕಾನೂನು ದಾಖಲೆಯ ತಯಾರಿಸುವಲ್ಲಿ ಬಹುದೊಡ್ಡ ಪಾತ್ರವನ್ನು ವಹಿಸಿದ್ದಾರೆ. ಅಂಬೇಡ್ಕರ್ ಸೇರಿದಂತೆ ಅಂತಹ ಮಹಾನ್ ವ್ಯಕ್ತಿಗಳ ಶ್ರಮವನ್ನು ಈ ದಿನದಂದು ನಾವೆಲ್ಲ ನೆನಪಿಸಿಕೊಳ್ಳಬೇಕು ಎಂದರು.
ಈ ವೇಳೆ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಎ.ಎ.ಮುಲ್ಲಾ, ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಹರೀಶ ಜಾಧವ ಮಾತನಾಡಿ, ಭಾರತ ಸಂವಿಧಾನ ದಿನವು ಅಪಾರ ಐತಿಹಾಸಿಕ ಹಾಗೂ ಸಾಂಕೇತಿಕ ಮಹತ್ವವನ್ನು ಹೊಂದಿದೆ. ಇದು ಭಾರತೀಯ ಸಂವಿಧಾನ ಅಂಗೀಕಾರವನ್ನು ಗುರುತಿಸುತ್ತದೆ. ಇದು ಭಾರತಕ್ಕೆ ಸ್ವಾತಂತ್ರ‍್ಯ ಸಿಕ್ಕ ನಂತರ ದೇಶ ಇತಿಹಾಸದಲ್ಲಿ ಘಟಿಸಿದ ಮಹತ್ವದ ಹಾಗೂ ಅದ್ಭುತ ಕ್ಷಣವಾಗಿದೆ. ಡಾ. ಬಿ.ಆರ್.ಅಂಬೇಡ್ಕರ್ ಅವರಂತಹ ಮಹಾನ್ ವ್ಯಕ್ತಿಗಳ ನೇತೃತ್ವದ ಸಂವಿಧಾನ ರಚನಾ ಸಭೆಯ ಸದಸ್ಯರ ಅವಿರತ ಪ್ರಯತ್ನಗಳನ್ನು ಈ ದಿನ ನೆನಪಿಸುತ್ತದೆ. ಯುವ ಜನಾಂಗ ಸಂವಿಧಾನದ ಬಗ್ಗೆ ಸಂಪೂರ್ಣ ಅಧ್ಯಯನ ಮಾಡಿಕೊಂಡು ಸಂವಿಧಾನಕ್ಕೆ ನಿತ್ಯ ನಿರಂತರ ಗೌರವ ಕೊಡಬೇಕು ಎಂದರು.
ಈ ಸಂದರ್ಭದಲ್ಲಿ ಎಫ್.ಎ.ಹಾಲಪ್ಪನವರ ಸಂವಿಧಾನ ಕುರಿತು ಉಪನ್ಯಾಸ ನೀಡಿದರು. ಸಿಂದಗಿ ವಕೀಲ ಸಂಘದ ಅಧ್ಯಕ್ಷ ಎಸ್.ಬಿ.ಪಾಟೀಲ, ಸಹಾಯಕ ಸರಕಾರಿ ವಕೀಲ ಆನಂದ ರಾಠೋಡ ಮಾತನಾಡಿದರು.
ಈ ವೇಳೆ ನ್ಯಾಯಾಧೀಶರನ್ನು ಸಂಸ್ಥೆ ಮತ್ತು ಮಹಾವಿದ್ಯಾಲಯದ ಪರವಾಗಿ ಸನ್ಮಾನಿಸಿ ಗೌರವಿಸಲಾಯಿತು. ಸಂಸ್ಥೆಯ ನಿರ್ದೇಶಕ ಶಿವಪ್ಪಗೌಡ ಬಿರಾದಾರ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವೇದಿಕೆ ಮೇಲೆ ಸರ್ಕಾರಿ ವಕೀಲ ಬಿ.ಜಿ.ನೆಲ್ಲಗಿ, ಪ್ರಾಚಾರ್ಯ ಎ.ಆರ್ ಹೆಗ್ಗನದೊಡ್ಡಿ ಇದ್ದರು.
ಉಪನ್ಯಾಸಕಿ ಮುಕ್ತಾಯಕ್ಕಾ ಕತ್ತಿ ಸಂವಿಧಾನದ ಪೀಠಿಕೆಯನ್ನು ಬೋಧಿಸಿದರು. ಕಾರ್ಯಕ್ರಮದಲ್ಲಿ ಡಾ. ಅರವಿಂದ ಮನಗೂಳಿ, ಬಿ.ಎಸ್.ಬಿರಾದಾರ ಎಸ್.ಎ.ಪಾಟೀಲ, ಆರ್.ಬಿ.ಹೊಸಮನಿ, ಎಂ.ಎನ್.ಅಜ್ಜಪ್ಪ, ಎ.ಬಿ.ಪಾಟೀಲ, ಜ್ಯೋತಿ ಚೆನ್ನುರ, ಮುಕ್ತಾಯಕ್ಕ ಕತ್ತಿ ಸೇರಿದಂತೆ ಅನೇಕರು ಇದ್ದರು. ಉಪನ್ಯಾಸಕ ಸಿದ್ದಲಿಂಗ ಕಿಣಗಿ ನಿರೂಪಿಸಿ, ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

​ಜು.೧೭ ರಂದು ರಿಯಾಯಿತಿ ದರದಲ್ಲಿ ಮೀನುಮರಿಗಳ ಮಾರಾಟ

ಎಸ್ಐಆರ್ ಸಾಧನೆ: ಬಬಲೇಶ್ವರ ಮತಗಟ್ಟೆಅಧಿಕಾರಿಗಳಿಗೆ ಸನ್ಮಾನ

ತರಬೇತಿಗೆ ಕಾನೂನು ಪದವೀಧರರಿಂದ ಅರ್ಜಿ

ಎಸ್ಐಆರ್ ಗೆ ಅಡ್ಡಿಪಡಿಸಿದರೆ ಕಾನೂನು ಕ್ರಮ :ಮೆಕ್ಕಳಕಿ ಎಚ್ಚರಿಕೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ​ಜು.೧೭ ರಂದು ರಿಯಾಯಿತಿ ದರದಲ್ಲಿ ಮೀನುಮರಿಗಳ ಮಾರಾಟ
    In (ರಾಜ್ಯ ) ಜಿಲ್ಲೆ
  • ಎಸ್ಐಆರ್ ಸಾಧನೆ: ಬಬಲೇಶ್ವರ ಮತಗಟ್ಟೆಅಧಿಕಾರಿಗಳಿಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
  • ತರಬೇತಿಗೆ ಕಾನೂನು ಪದವೀಧರರಿಂದ ಅರ್ಜಿ
    In (ರಾಜ್ಯ ) ಜಿಲ್ಲೆ
  • ಎಸ್ಐಆರ್ ಗೆ ಅಡ್ಡಿಪಡಿಸಿದರೆ ಕಾನೂನು ಕ್ರಮ :ಮೆಕ್ಕಳಕಿ ಎಚ್ಚರಿಕೆ
    In (ರಾಜ್ಯ ) ಜಿಲ್ಲೆ
  • ೫೬,೨೯,೧೭೧ ರೂ. ದಂಡ ವಿಧಿಸಿದ ಕೋರ್ಟ್
    In (ರಾಜ್ಯ ) ಜಿಲ್ಲೆ
  • ಎಂಎಲ್ಸಿ ಚುನಾವಣೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಿಂದ ಡಿಕೆಶಿ ಗೆ ಸಹಾಯ
    In (ರಾಜ್ಯ ) ಜಿಲ್ಲೆ
  • ಸಚಿವ ಎಂ.ಬಿ.ಪಾಟೀಲ ಹೆಸರು ತಮ್ಮ ಮನೆಗಿಟ್ಟು ಅಭಿಮಾನ ಮೆರೆದ ಕುಟುಂಬ
    In (ರಾಜ್ಯ ) ಜಿಲ್ಲೆ
  • ದೇಶ-ಸಮಾಜ ಕುರಿತ ಚಿಂತನೆಗಳು ಕಡಿಮೆಯಾಗುತ್ತಿರುವುದು ಕಳವಳಕಾರಿ
    In (ರಾಜ್ಯ ) ಜಿಲ್ಲೆ
  • ಗಡಿ ಗುರುತಿಸದೇ ಅಕ್ರಮ ಲೈನ್‌ಔಟ್ :ರೈತರ ಆರೋಪ
    In (ರಾಜ್ಯ ) ಜಿಲ್ಲೆ
  • ಸಂಚಲನ ಮೂಡಿಸಿದ್ದ ಕೆಂಭಾವಿ ಪುರಸಭೆ ಹೈಡ್ರಾಮಾ ಅಂತ್ಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.