Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

೧೩ ದಿನಗಳಲ್ಲಿ ಎಸ್ಐಆರ್ ಕಾರ್ಯ ಪೂರ್ಣಗೊಳಿಸಿದ ಶಿಕ್ಷಕ

ವಿಜಯಪುರ ಜಿಲ್ಲೆಯಲ್ಲಿ ೧೮,೮೮,೬೫೭ ಗಣತಿ ನಮೂನೆ ವಿತರಣೆ

ಅಮೂಲ್ಯ ಜೀವ ಉಳಿಸಲು ರಕ್ತದಾನ ಮಾಡಿ :ದಾವುದ ಕರೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಂವಿಧಾನ ಧರ್ಮ ಪಾಲನೆಗೆ ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ ಕರೆ
(ರಾಜ್ಯ ) ಜಿಲ್ಲೆ

ಸಂವಿಧಾನ ಧರ್ಮ ಪಾಲನೆಗೆ ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ ಕರೆ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಸಂವಿಧಾನ ಒಂದು ಶ್ರೇಷ್ಠ ಧರ್ಮ. ಈ ಸಂವಿಧಾನ ಧರ್ಮವನ್ನು ನಾವೆಲ್ಲರೂ ಶ್ರದ್ಧೆ, ಪ್ರಾಮಾಣಿಕತೆಯಿಂದ ಪಾಲನೆ ಮಾಡಿದಾಗ ಮಾತ್ರ ದೇಶದ ಪ್ರಜಾಪ್ರಭುತ್ವ ಗಟ್ಟಿಯಾಗಿರುತ್ತದೆ ಎಂದು ಮಹಿಳಾ ವಿವಿಯ ಕುಲಪತಿ ಬಿ.ಕೆ.ತುಳಸಿಮಾಲ ಹೇಳಿದರು.
ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಡಾ.ಬಿ.ಆರ್.ಅಂಬೇಡ್ಕರ ಅಧ್ಯಯನ ಕೇಂದ್ರ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಘಟಕದ ವತಿಯಿಂದ ಮಂಗಳವಾರ ಆಯೋಜಿಸಿದ್ದ “ಭಾರತದ ಸಂವಿಧಾನ ದಿನಾಚರಣೆ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸಂವಿಧಾನದಲ್ಲಿರುವ ಪೀಠಿಕೆಯನ್ನು ನಾವು ಸರಿಯಾಗಿ ಗ್ರಹಿಸಿಕೊಂಡಾಗ ಅದು ನಮ್ಮ ವ್ಯಕ್ತಿತ್ವದ ವಿಕಾಸಕ್ಕೆ ಮತ್ತು ದೈನಂದಿನ ಚಟುವಟಿಕೆಗಳಿಗೆ ಮಾರ್ಗಸೂಚಿಯಾಗುತ್ತದೆ. ಸಂವಿಧಾನದ ಆಶಯಗಳು ಹಾಗೂ ಆಶೋತ್ತರಗಳನ್ನು ನಾವು ಹೇಗೆ ಅನುಸರಿಸುತ್ತೇವೆ ಮತ್ತು ಅದನ್ನು ಪಾಲಿಸುತ್ತೇವೆ ಎಂಬುದು ನಮಗೆ ಮುಖ್ಯವಾಗಬೇಕು ಎಂದರು.
ಸಂವಿಧಾನದ ಮೌಲ್ಯಗಳನ್ನು ಕೇವಲ ವಿದ್ಯಾರ್ಥಿಗಳಲ್ಲ, ಶಿಕ್ಷಕರೂ ಪಾಲಿಸಬೇಕು. ಭಾರತೀಯ ಪ್ರಜೆಗಳಾದ ನಾವೆಲ್ಲರೂ ಸಂವಿಧಾನದ ಆದರ್ಶಗಳನ್ನು ಅಳವಡಿಸಿಕೊಂಡು, ಅದರ ಮಾರ್ಗಸೂಚಿಗಳನ್ನು ಜೀವನದಲ್ಲಿ ಪಾಲಿಸುವ ಜವಾಬ್ದಾರಿಯನ್ನು ಹೊತ್ತಿರಬೇಕು. ಇದರಿಂದ ಮಾತ್ರ ನಾವು ಸಮಾನತೆ, ನ್ಯಾಯ ಮತ್ತು ಸ್ವಾತಂತ್ರ‍್ಯದಂತೆ ಸಂವಿಧಾನದಲ್ಲಿ ಹೊಂದಿರುವ ಮೂಲಭೂತ ಮೌಲ್ಯಗಳನ್ನು ಕಾಪಾಡಲು ಮತ್ತು ನಮ್ಮ ದೇಶದ ಪ್ರಜಾಪ್ರಭುತ್ವವನ್ನು ಸಶಕ್ತಗೊಳಿಸಲು ಸಾಧ್ಯವಾಗುತ್ತದೆ ಎಂದರು.
ಕಾರ್ಯಕ್ರಮದಲ್ಲಿ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ ಸಂವಿಧಾನದ ಪೀಠಿಕೆಯನ್ನು ಬೋಧಿಸಿದರು. ಮೌಲ್ಯಮಾಪನ ಕುಲಸಚಿವ ಪ್ರೊ.ಎಚ್.ಎಂ.ಚಂದ್ರಶೇಖರ, ಡಾ.ಬಿ.ಆರ್.ಅಂಬೇಡ್ಕರ್ ಅಧ್ಯಯನ ಕೇಂದ್ರದ ನಿರ್ದೇಶಕ ಡಾ.ಸಂಜೀವಕುಮಾರ ಗಿರಿ ಮತ್ತು ವಿವಿಧ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ಸಂಶೋಧನಾ ವಿದ್ಯಾರ್ಥಿನಿಯರು, ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿನಿಯರು ಭಾಗವಹಿಸಿ ಸಂವಿಧಾನದ ಪ್ರಸ್ತಾವನೆ ಓದಿ ಪ್ರತಿಜ್ಞೆ ಮಾಡುವ ಮೂಲಕ ಸಂವಿಧಾನಕ್ಕೆ ಗೌರವ ಸಲ್ಲಿಸಿದರು.
ಕಾರ್ಯಕ್ರಮವನ್ನು ದೈಹಿಕ ಶಿಕ್ಷಣ ವಿಭಾಗದ ಪ್ರಾಧ್ಯಾಪಕ ಡಾ.ಹನುಮಂತಯ್ಯ ಪೂಜಾರಿ ನಿರೂಪಿಸಿ ವಂದಿಸಿದರು.
ರಾಜ್ಯಶಾಸ್ತ್ರ ವಿಭಾಗ:
ರಾಜ್ಯಶಾಸ್ತç ವಿಭಾಗ ಹಾಗೂ ಎನ್.ಎಸ್.ಎಸ್.ಸ್ನಾತಕ. ಘಟಕದ ವತಿಯಿಂದ ಮಂಗಳವಾರ ಆಯೋಜಿಸಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಸಂವಿಧಾನದ ಪೀಠಿಕೆಯನ್ನು ಬೋಧಿಸಿ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು.
ಕಾರ್ಯಕ್ರಮದಲ್ಲಿ ಮಹಿಳಾ ವಿವಿಯ ಮಹಿಳಾ ಅಧ್ಯಯನ ವಿಭಾಗದ ಮುಖ್ಯಸ್ಥೆ ಪ್ರೊ.ಲಕ್ಷ್ಮೀದೇವಿ ವೈ, ಸಮಾಜಕಾರ್ಯ ಅಧ್ಯಯನ ವಿಭಾಗದ ಸಹ-ಪ್ರಾಧಾಪಕ ಡಾ.ರಮೇಶ, ಎಂ. ಸೋನಕಾಂಬಳೆ, ರಾಜ್ಯಶಾಸ್ತ್ರ ವಿಭಾಗದ ಉಪನ್ಯಾಸಕ ಡಾ.ಯಲ್ಲಪ್ಪ ಕೊಂಬಿನೂರ್, ಡಾ.ಬಸಪ್ಪ ಮಾದರ, ವಿದ್ಯಾರ್ಥಿನಿಯರು, ಸಂಶೋಧನಾ ವಿದ್ಯಾರ್ಥಿನಿಯರು ಹಾಗೂ ಮತ್ತಿತರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

೧೩ ದಿನಗಳಲ್ಲಿ ಎಸ್ಐಆರ್ ಕಾರ್ಯ ಪೂರ್ಣಗೊಳಿಸಿದ ಶಿಕ್ಷಕ

ವಿಜಯಪುರ ಜಿಲ್ಲೆಯಲ್ಲಿ ೧೮,೮೮,೬೫೭ ಗಣತಿ ನಮೂನೆ ವಿತರಣೆ

ಅಮೂಲ್ಯ ಜೀವ ಉಳಿಸಲು ರಕ್ತದಾನ ಮಾಡಿ :ದಾವುದ ಕರೆ

ಸರ್ಕಾರ ರೈತರ ಸಾಲ ಮನ್ನಾ ಮಾಡಿ ಬರಗಾಲವೆಂದು ಘೋಷಿಸಲಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ೧೩ ದಿನಗಳಲ್ಲಿ ಎಸ್ಐಆರ್ ಕಾರ್ಯ ಪೂರ್ಣಗೊಳಿಸಿದ ಶಿಕ್ಷಕ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ೧೮,೮೮,೬೫೭ ಗಣತಿ ನಮೂನೆ ವಿತರಣೆ
    In (ರಾಜ್ಯ ) ಜಿಲ್ಲೆ
  • ಅಮೂಲ್ಯ ಜೀವ ಉಳಿಸಲು ರಕ್ತದಾನ ಮಾಡಿ :ದಾವುದ ಕರೆ
    In (ರಾಜ್ಯ ) ಜಿಲ್ಲೆ
  • ಸರ್ಕಾರ ರೈತರ ಸಾಲ ಮನ್ನಾ ಮಾಡಿ ಬರಗಾಲವೆಂದು ಘೋಷಿಸಲಿ
    In (ರಾಜ್ಯ ) ಜಿಲ್ಲೆ
  • ಹೊಣೆಗಾರಿಕೆ ಪಾಠ ಕಲಿಸಲು ಶಾಲಾ ಸಂಸತ್ತು ಸಹಕಾರಿ :ಡಿವೈಎಸ್ಪಿ ನಾಗರಾಜ‌
    In (ರಾಜ್ಯ ) ಜಿಲ್ಲೆ
  • ಮೀಸಲಾತಿ ನಿಯಮಾನುಸಾರ ಮರು ಪರಿಶೀಲಿಸಲು ಡಿಸಿಗೆ ಮನವಿ
    In (ರಾಜ್ಯ ) ಜಿಲ್ಲೆ
  • ಉಕ ಭಾಗದ ಗ್ರಾಮೀಣ ಜೀವನದ ಮೌಲ್ಯ, ಬದುಕು ಆಧರಿಸಿದ ’ಧಗೆ’ ಚಿತ್ರ
    In (ರಾಜ್ಯ ) ಜಿಲ್ಲೆ
  • ಏಕತೆ ಮತ್ತು ಒಕ್ಕಟ್ಟು ಸಮಾಜದ ಆಭಿವೃದ್ದಿಗೆ ಪೂರಕ
    In (ರಾಜ್ಯ ) ಜಿಲ್ಲೆ
  • ಗಾನಕೋಗಿಲೆ ಎಸ್.ಜಾನಕಿ ನಿಧನದಿಂದ ಸಂಗೀತ ಲೋಕಕ್ಕೆ ನಷ್ಟ
    In (ರಾಜ್ಯ ) ಜಿಲ್ಲೆ
  • ಹಲಸಂಗಿ ಕ್ರಾಸ್ ಸಮೀಪ ವ್ಯಕ್ತಿಯ ಕೊಲೆ! :ಅಕ್ಕನ ಮೇಲೆ ಶಂಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.