ವಿಜಯಪುರ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ
ವಿಜಯಪುರ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ಎಂ.ಬಿ. ಪಾಟೀಲ ಅವರ ಅನುಮೋದನೆಯ ಮೇರೆಗೆ ಫಯಾಜ ಕಲಾದಗಿ ಅವರನ್ನು ವಿಜಯಪುರ ಜಿಲ್ಲಾ ಪ್ರಚಾರ ಸಮಿತಿಯ ಜಂಟಿ ಸಂಯೋಜಕರನ್ನಾಗಿ ನೇಮಿಸಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾದ ಮಹ್ಮದ ರಫೀಕ ಟಪಾಲ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆಯಲ್ಲಿ ತಿಳಿಸಿದ ಅವರು ಫಯಾಜ ಅವರು ಕೂಡಲೇ ಈ ಆದೇಶ ತಕ್ಷಣದಿಂದ ಜಾರಿಗೆ ಬರುತ್ತಿದ್ದು, ಅಧಿಕಾರವನ್ನು ವಹಿಸಿಕೊಂಡು ಪಕ್ಷದ ಮುಖಂಡರ ಮಾರ್ಗದರ್ಶನದಲ್ಲಿ ಹಾಗೂ ಸ್ಥಳೀಯ ನಾಯಕರ ಸಹಕಾರದೊಂದಿಗೆ ತಮಗೆ ನೀಡಲಾಗಿರುವ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸುವಂತೆ ಸೂಚಿಸಿದ್ದಾರೆ.