ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದ ವತಿಯಿಂದ ಗಿರಿಜನ ಉಪಯೋಜನೆಯಡಿ ಕುರಿ-ಮೇಕೆ ಘಟಕ ಸ್ಥಾಪನೆಗೆ ಸಹಾಯಧನ ಪಡೆಯಲು ಗ್ರಾಮೀಣ ಭಾಗದ ಪರಿಶಿಷ್ಟ ಪಂಗಡದ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದ ಸಹಕಾರಿ ಸಂಘದ ಪರಿಶಿಷ್ಟ ಪಂಗಡದ ಸದ್ಯಸರು ಈ ಯೋಜನೆಯಡಿ ಅರ್ಜಿ ಸಲ್ಲಿಸಬಹುದಾಗಿದ್ದು, ಜಿಲ್ಲೆಗೆ ಒಟ್ಟು-೦೨ ಗುರಿ ನಿಗದಿಪಡಿಸಲಾಗಿದ್ದು, ಈ ಯೋಜನೆಯಡಿ ಶೇ.೯೦ರಷ್ಟು ಸಹಾಯಧನ ಒದಗಿಸಲಾಗುವುದು.
ನಿಗದಿತ ಅರ್ಜಿ ನಮೂನೆಯನ್ನು ಪಡೆದು, ದಿನಾಂಕ : ೧೫-೧೨-೨೦೨೪ರೊಳಗೆ ಸಲ್ಲಿಸಬೇಕು. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮ ನಿಯಮಿತ, ಪಶು ಆಸ್ಪತ್ರೆ ಆವರಣ, ಶಿಕಾರಖಾನೆ ವಿಜಯಪುರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
