ವಿಜಯಪುರ: ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ಶಿಂಧೆ ಅವರು ಬುಧವಾರ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಬಬಲೇಶ್ವರ ತಾಲೂಕಿನ ಸಾರವಾಡ ಗ್ರಾಮ ಪಂಚಾಯತಿಗೆ ಭೇಟಿ ನೀಡಿ, ‘ಸಖಿ’ ಬೂತ್ ಮತದಾನ ಕೇಂದ್ರದ ಮುಂಭಾಗದಲ್ಲಿ ಬಿಡಿಸಿರುವ ಸುಂದರ ಕಲಾಕೃತಿಗಳನ್ನು ವೀಕ್ಷಿಸಿದರು. ಪ್ರಗತಿಯಲ್ಲಿರುವ ಘನ ತ್ಯಾಜ್ಯ ವಿಲೇವಾರಿ ಘಟಕ ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ತಾಂತ್ರಿಕ ಸಿಬ್ಬಂದಿಗಳಿಗೆ ಸೂಚಿಸಿದರು.
ಕಂಬಾಗಿ ಗ್ರಾಮದ ಪ್ರಗತಿಯಲ್ಲಿರುವ ಅಮೃತ ಸರೋವರ ಯೋಜನೆಯ ಕೆರೆ ಹೂಳೆತ್ತಿ ಅಭಿವೃದ್ಧಿಪಡಿಸುತ್ತಿರುವ ಹಿನ್ನೆಲೆಯಲ್ಲಿ,ಸುತ್ತ-ಮುತ್ತಲಿನ ರೈತರಿಗೆ ಅನುಕೂಲವಾಗಿರುವ ಕುರಿತು ರೈತರೊಂದಿಗೆ ಸಮಾಲೋಚಿಸಿದರು. ಕಾಮಗಾರಿಯಲ್ಲಿ ತೊಡಗಿರುವ ಕೂಲಿಕಾರ್ಮಿಕರಿಗೆ ನೆರಳಿನ ವ್ಯವಸ್ಥೆ ಕಲ್ಪಿಸಲು ಮತ್ತು ಕ್ಯಾಪ್ ವಿತರಿಸಲು ಪಂಚಾಯತ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದರು. ಮದರಕಂಡಿ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ನಿರ್ಮಿಸಿರುವ ಬಾಸ್ಕೆಟ್ ಬಾಲ್ ಕ್ರೀಡಾಂಗಣದ ಕಾಮಗಾರಿ ಪರಿಶೀಲನೆ ನಡೆಸಿ, ಬಾಸ್ಕೆಟ್ ಬಾಲ್ ಕಂಬಗಳಿಗೆ ೩ ಎಂಎA ಫೈಬರ್ ಗ್ಲಾಸ್ ಅಳವಡಿಸುವಂತೆಯೂ, ಕ್ರೀಡಾಂಗಣದ ಸುತ್ತ ಗುಣಮಟ್ಟದ ಕೆಂಪು ಮರಳು ಹಾಕುವ ವ್ಯವಸ್ಥೆ ಮಾಡುವಂತೆ ತಾಂತ್ರಿಕ ಸಹಾಯಕರಿಗೆ ಸೂಚಿಸಿದರು. ಗ್ರಾಮೀಣ ಭಾಗದ ೮ ರಿಂದ ೧೫ ವರ್ಷದ ವಯೋಮಾನದ ವಿದ್ಯಾರ್ಥಿಗಳಿಗೆ ಕ್ರೀಡಾ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವ ದೃಷ್ಠಿಯಿಂದ ಬೇಸಿಗೆ ಶಿಬಿರ ಹಮ್ಮಿಕೊಂಡು ಸ್ಕೇಟಿಂಗ್ ತರಬೇತಿ ಸೇರಿದಂತೆ, ವಿವಿಧ ಕ್ರೀಡಾ ತರಬೇತಿ ಕಲ್ಪಿಸಿಕೊಡುವಂತೆ ಪಂಚಾಯತ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜೈನಾಪುರ ಗ್ರಾಮ ಪಂಚಾಯತಿಯ ಬೆಳ್ಳುಬ್ಬಿ ಗ್ರಾಮದಲ್ಲಿ ಸ್ಥಾಪಿಸಲಾಗಿರುವ ಮತದಾನ ಕೇಂದ್ರಕ್ಕೆ ಭೇಟಿ ನೀಡಿ, ಮೂಲಭೂತ ಸೌಲಭ್ಯಗಳಾದ ವಿದ್ಯುತ್ ದೀಪ, ಫ್ಯಾನ್, ಕಿಟಕಿ ಬಾಗಿಲುಗಳ ಮತ್ತು ವಿಕಲಚೇತನರಿಗೆ ಮತದಾನಕ್ಕೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಸೂಕ್ತ ರ್ಯಾಂಪ್ ಹಾಗೂ ಅಗತ್ಯ ದುರಸ್ತಿಯನ್ನು ಕೈಗೊಳ್ಳಲು ಪಂಚಾಯತ ಅಭಿವೃದ್ಧಿ ಅಧಿಕಾರಿಗಳಿಗೆ ಹೇಳಿದರು. ಗ್ರಾಮದ ಸರಕಾರಿ ಶಾಲೆಯಲ್ಲಿನ ಬೋಜನಾಲಯದಲ್ಲಿನ ಸೂಕ್ತ ಆಸನ ವ್ಯವಸ್ಥೆ ಕಲ್ಪಿಸಬೇಕೆಂದೂ, ಜೈನಾಪುರ ಗ್ರಾಮದಲ್ಲಿನ ನೀರು ಸರಬರಾಜು ಕೇಂದ್ರದ ಕಾಮಗಾರಿಯನ್ನು ಉತ್ಕೃಷ್ಟ ಗುಣ್ಣಮಟ್ಟದಿಂದ ಕೂಡಿರುವಂತೆ ನೋಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ತಿಳಿಸಿದರು.
ಕಾರ್ಯನಿರ್ವಾಹಕ ಅಧಿಕಾರಿಗಳಾದ ಜೆ.ಎಸ್.ಪಠಾಣ, ಬಬಲೇಶ್ವರ ತಾಲೂಕು ಪಂಚಾಯತಿಯ ಸಹಾಯಕ ನಿರ್ದೇಶಕಿ ಶ್ರೀಮತಿ ಭಾರತಿ ಹಿರೇಮಠ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಇಂಜಿನೀಯರ ಎಚ್.ಎಮ್. ಸಾರವಾಡ, ಪಂಚಾಯತ ರಾಜ್, ಇಂಜಿನಿಯರಿAಗ ಉಪ ವಿಭಾಗದ ಎಇಇ ಪಿ.ಎಸ್.ಚವಾಣ್, ಪಂಚಾಯತ ಅಭಿವೃದ್ಧಿ ಅಧಿಕಾರಿಗಳಾದ ಶ್ರೀಮತಿ ಗೀತಾ ಕಲ್ಲವಗೊಳ, ಶ್ರೀಮತಿ ರೇಖಾ ಪಾಟೀಲ, ಮಹೇಶ ಕಗ್ಗೂಡ, ತಾಂತ್ರಿಕ ಸಂಯೋಜಕ ಕಲ್ಲನಗೌಡ ಪಾಟೀಲ, ಐಇಸಿ ಸಂಯೋಜಕ ಶಾಂತಪ್ಪ ಇಂಡಿ, ಶ್ರೀಧರ್ ರೆಡ್ಡಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
Related Posts
Add A Comment