ಮಾನವ ಸರಪಳಿ: ನಾವೀನ್ಯತೆ ವಿಭಾಗದಲ್ಲಿ ವಿಜಯಪುರ ಜಿಲ್ಲೆಗೆ ಪ್ರಥಮ ಸ್ಥಾನ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಪ್ರಜಾಪ್ರಭುತ್ವ ಜಾಗೃತಿ ಮೂಡಿಸಲು ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ವಿರೇಶನಗರದಿಂದ ಬಾಗಲಕೋಟೆ ಜಿಲ್ಲೆಯ ಗಡಿ ಭಾಗದ ಆಲಮಟ್ಟಿಯವರೆಗಿನ ಸುಮಾರು ೬೨ ಕಿ.ಮೀ.ವರೆಗೆ ಯಶಸ್ವಿಯಾಗಿ ಹಮ್ಮಿಕೊಂಡ ಮಾನವ ಸರಪಳಿ ನಿರ್ಮಾಣಕ್ಕೆ ಮಾನವ ಸರಪಳಿ ನಾವೀನ್ಯತೆ ವಿಭಾಗದಲ್ಲಿ ವಿಜಯಪುರ ಜಿಲ್ಲೆಗೆ ಪ್ರಥಮ ಸ್ಥಾನ ಲಭಿಸಿದೆ.
ಪ್ರಜಾಪ್ರಭುತ್ವ ಜಾಗೃತಿ ಮೂಡಿಸಲು ಬೀದರನಿಂದ ಚಾಮರಾಜನಗರವರೆಗೆ ಮಾನವ ಸರಪಳಿ ನಿರ್ಮಾಣ ಹಾಗೂ ವಿಶಿಷ್ಟ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ವಲ್ಡ್ ಆಫ್ ಬುಕ್ ರೆಕಾರ್ಡ ಸೇರ್ಪಡೆಗೊಂಡಿದ್ದು, ಈ ಪೈಕಿ ವಿಜಯಪುರ ಜಿಲ್ಲೆಗೆ ನಾವೀನ್ಯತೆ ವಿಭಾಗದಲ್ಲಿ ಪ್ರಥಮ ಸ್ಥಾನ ಸಂದಿರುವ ಹಿನ್ನಲೆಯಲ್ಲಿ ನವೆಂಬರ್ ೨೬ ರಂದು ಬೆಂಗಳೂರಿನ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರಿಂದ ವಿಜಯಪುರ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಪ್ರಶಸ್ತಿ ಸ್ವೀಕರಿಸಿದರು.

