ಉದಯರಶ್ಮಿ ದಿನಪತ್ರಿಕೆ
ಬಸವನಬಾಗೇವಾಡಿ: ತಾಲೂಕಿನಲ್ಲಿ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಅಲ್ಲಲ್ಲಿ ಜಿಆರ್ಜಿ೧೫೨ ತಳಿ ತೊಗರಿ ಬೆಳೆದ ರೈತರ ಜಮೀನುಗಳಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಹೂ ಮತ್ತು ಕಾಯಿ ಉದುರುತ್ತಿರುವುದು ಕಂಡುಬಂದಲ್ಲಿ ರೈತ ಬಾಂಧವರು ಬೆಳೆ ವಿಮೆ ನೋಂದಣಿ ಮಾಡಿದ ರಶೀದಿ, ಜಿಪಿಎಸ್ ಪೋಟೋದೊಂದಿಗೆ ಅರ್ಜಿಯನ್ನು ಆಯಾ ರೈತ ಸಂಪರ್ಕ ಕೇಂದ್ರ ಇಲ್ಲವೇ ವಿಮಾ ಸಂಸ್ಥೆಯ ಪ್ರತಿನಿಧಿ ಮೊ.ಸಂಖ್ಯೆ ೯೬೩೨೧೦೫೪೭೬ ಸಂಖ್ಯೆ ಸಂಪರ್ಕಿಸಿ ಸಲ್ಲಿಸಬೇಕೆಂದು ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕ ಎಂ.ಎಚ್. ಯರಝರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
