ಉದಯರಶ್ಮಿ ದಿನಪತ್ರಿಕೆ
ಬಸವನಬಾಗೇವಾಡಿ: ಪಟ್ಟಣದ ಹೃದಯ ಭಾಗದಲ್ಲಿರುವ ಮೆಗಾ ಮಾರುಕಟ್ಟೆ ಕಟ್ಟಡದ ಮುಂಭಾಗ ಹಾಗೂ ಅದರ ಕಂಬಗಳಿಗೆ ಯಾವುದೇ ಬ್ಯಾನರ್ಗಳನ್ನು ಕಟ್ಟಬಾರದು ಎಂದು ಜಿಲ್ಲಾಧಿಕಾರಿಗಳು ಪುರಸಭೆ ಅಧಿಕಾರಿಗಳಿಗೆ ಸೂಚಿಸಿದರೂ ಅಧಿಕಾರಿಗಳು ಗಮನ ಹರಿಸುತ್ತಿಲ್ಲ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯ ಸಂಘಟನಾ ಕಾರ್ಯದರ್ಶಿ ಅಶೋಕ ಹಾರಿವಾಳ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಈಚೆಗೆ ಜಿಲ್ಲಾಧಿಕಾರಿಗಳು ಪಟ್ಟಣಕ್ಕೆ ಬಂದಾಗ ಮೆಗಾಮಾರುಕಟ್ಟೆ ಕಟ್ಟಡದ ಮುಂಭಾಗ ಇಲ್ಲವೇ ಅದರ ಕಂಬಗಳಿಗೆ ಯಾರೂ ಬ್ಯಾನರ್ ಅಳವಡಿಸದಂತೆ ಪುರಸಭೆ ಅಧಿಕಾರಿಗಳು ಗಮನಹರಿಸಬೇಕು. ಈ ಕುರಿತು ಪುರಸಭೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುವದನ್ನು ಕರವೇ ಖಂಡಿಸುತ್ತದೆ. ಮುಂಬರುವ ದಿನಗಳಲ್ಲಿ ಯಾರಾದರೂ ಮೆಗಾಮಾರುಕಟ್ಟೆ ಮುಂಭಾಗ, ಕಂಬಗಳಿಗೆ ಬ್ಯಾನರ್ ಅಳವಡಿಸಿದರೆ ಪುರಸಭೆ ಅಧಿಕಾರಿಗಳ ವಿರುದ್ದ ಕರವೇ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.
