Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಒಲವಿನ ಪೂಜೆಯಲಿ ಒಂದಾಗೋಣ

ಮಾ.29ರಿಂದ ಕೊಲ್ಹಾರದಲ್ಲಿ ವಿಶೇಷ ಪ್ರಶಿಕ್ಷಣ ವರ್ಗ

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 28, 2026

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ದೇಶದ ಘನತೆ ಗೌರವ ಎತ್ತಿಹಿಡಿಯುವ ಸಂವಿಧಾನ ನಮ್ಮದು
(ರಾಜ್ಯ ) ಜಿಲ್ಲೆ

ದೇಶದ ಘನತೆ ಗೌರವ ಎತ್ತಿಹಿಡಿಯುವ ಸಂವಿಧಾನ ನಮ್ಮದು

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಇಂಡಿ: ನಮ್ಮ ದೇಶ ವಿವಿಧತೆಯಲ್ಲಿ ಏಕತೆಯನ್ನು ಜಗತ್ತಿಗೆ ಸಾರಿರುವ ದೇಶ, ನಮ್ಮ ಸಂವಿಧಾನ ರಚನೆಯ ಸಂದರ್ಭದಲ್ಲಿ ರಚನಾ ಸಮಿತಿಯವರು ಜಗತ್ತಿನಾದ್ಯಂತ ಸುತ್ತಾಡಿ ಅಲ್ಲಿನ ಸಂವಿಧಾನಗಳನ್ನು ಅದ್ಯಯನ ಮಾಡಿ ಅವುಗಳಲ್ಲಿರುವ ಉತ್ತಮ ಅಂಶಗಳನ್ನು ಕ್ರೂಡಿಕರಿಸಿ ನಮ್ಮ ದೇಶದ ಘನತೆ ಗೌರವ ಎತ್ತಿಹಿಡಿಯುವ ಜಗತ್ತಿನ ಅತಿದೊಡ್ಡ ಸಂವಿಧಾನ ರಚಿಸಿದ್ದಾರೆ ಎಂದು ಹಿರಿಯ ದಿವಾಣಿ ನ್ಯಾಯಾಧೀಶ ಕೋಟೆಪ್ಪ ಕಾಂಬಳೆ ಹೇಳಿದರು.
ಮಂಗಳವಾರ ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ತಾಲ್ಲೂಕು ಕಾನೂನು ಸೇವೆಗಳ ಸಮಿತಿ ಹಾಗೂ ವಕೀಲರ ಸಂಘ ಮತ್ತು ಸಿ.ವ್ಹಿ.ರಾಮನ್ ವಿಜ್ಞಾನ ಪದವಿ ಪೂರ್ವ ಕಾಲೇಜು, ಇಂಡಿ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ “ಸಂವಿಧಾನ ದಿನ” ಪ್ರಯುಕ್ತ ಕಾನೂನು ಅರಿವು-ನೆರವು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ಈ ಸಂವಿಧಾನದ ಕುರಿತು ಸದನದಲ್ಲಿ ಚರ್ಚಿಸುವ ಸಮಯದಲ್ಲಿ ಕ್ಲಿಷ್ಟಕರವಾದ ಸಂದರ್ಭದಲ್ಲಿ, ಕ್ಲಿಷ್ಟಕರವಾದ ಸಮಸ್ಯೆಗಳಿಗೆ ಡಾ.ಬಿ.ಆರ್.ಅಂಬೇಡ್ಕರ್ ಅವರು ಮಾತ್ರ ಉತ್ತರ ನೀಡುತ್ತಿದ್ದರು. ಸಂವಿಧಾನ ಹೇಗೆ ಅನ್ವಯಿಸುತ್ತೆ ಅಂದರೆ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಥಿಮ್ ಸಾಂಗ್ ನಲ್ಲಿರುವಂತೆ ನೀರಿನಂತೆ ನ್ಯಾಯ ಎಲ್ಲರಿಗೂ, ಗಾಳಿಯಂತೆ ನ್ಯಾಯ ಎಲ್ಲರಿಗೂ, ನೆಮ್ಮದಿಯ ನ್ಯಾಯ ಎಲ್ಲರಿಗೂ ಮತ್ತು ನಂಬಿಕೆಯ ನ್ಯಾಯ ಎಲ್ಲರಿಗೂ ಎಂಬಂತೆ ಎಂದು ಹೇಳಿದರು.
ಕಾರ್ಯಕ್ರಮದ ಉಪನ್ಯಾಸಕರಾಗಿದ್ದ ನ್ಯಾಯವಾದಿ ವ್ಹಿ.ಎಸ್.ಹಂಜಗಿ ಮಾತನಾಡಿ, ಒಂದು ಮನೆ ನಿರ್ಮಾಣ ಮಾಡಬೇಕಾದರೆ ಅಡಿಪಾಯ ಎಷ್ಟು ಮಹತ್ವಯಿದೆಯೊ ಅಷ್ಟೇ ಮಹತ್ವ ದೇಶ ಬೇಳೆಯಬೇಕಾದರೆ ಇದೆ. ದೇಶ ಒಂದು ಶ್ರೇಷ್ಠ ದೇಶ ಆಗಬೇಕಾದರೆ ಅದಕ್ಕೆ ಸಂವಿಧಾನ ಬಹಳ ಮುಖ್ಯ ಎಂದರು.
ಸಂವಿಧಾನ ದಿನದ ಅಂಗವಾಗಿ ತಾಲ್ಲೂಕಿನ ಪ್ರಾಥಮಿಕ ಮತ್ತು ಶಾಲೆಯ ವಿದ್ಯಾರ್ಥಿಗಳಿಗೆ ಪ್ರಭಂದ, ಭಾಷಣ ಮತ್ತು ರಸಪ್ರಶ್ನೆ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು ಈ ಕಾರ್ಯಕ್ರಮದಲ್ಲಿ ಬಹುಮಾನ ವಿತರಣೆ ಮಾಡಲಾಯಿತು
ಕಾರ್ಯಕ್ರಮದಲ್ಲಿ ದಿವಾಣಿ ನ್ಯಾಯಾಧೀಶ ಸುನಿಲ್ ಕುಮಾರ್ ಎಂ.ಎಸ್. ಅವರು ಉಪಸ್ಥಿತರಿದ್ದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಿ.ವಿ. ರಾಮನ್ ಕಾಲೇಜು ಅಧ್ಯಕ್ಷ ಶಿವಾನಂದ ಕಾಮಗೊಂಡ ವಹಿಸಿದ್ದರು,
ಕಾರ್ಯಕ್ರಮದಲ್ಲಿ ನ್ಯಾಯವಾದಿಗಳಾದ ಎಸ್.ಆರ್.ಬಿರಾದಾರ, ಕಾಲೇಜಿನ ಪಿ.ಜಿ.ನಾಡಗೌಡ, ಜೆ.ಬಿ.ಬೆನೂರ, ಎಸ್.ಬಿ.ನಿಂಬರಗಿಮಠ, ವಿ.ಪಿ. ಪಾಟೀಲ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಒಲವಿನ ಪೂಜೆಯಲಿ ಒಂದಾಗೋಣ

ಮಾ.29ರಿಂದ ಕೊಲ್ಹಾರದಲ್ಲಿ ವಿಶೇಷ ಪ್ರಶಿಕ್ಷಣ ವರ್ಗ

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 28, 2026

ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಒಲವಿನ ಪೂಜೆಯಲಿ ಒಂದಾಗೋಣ
    In ವಿಶೇಷ ಲೇಖನ
  • ಮಾ.29ರಿಂದ ಕೊಲ್ಹಾರದಲ್ಲಿ ವಿಶೇಷ ಪ್ರಶಿಕ್ಷಣ ವರ್ಗ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 28, 2026
    In ದಿನಪತ್ರಿಕೆ
  • ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ
    In ವಿಶೇಷ ಲೇಖನ
  • ಮಹಿಳೆಯರಿಂದ ನಂಜಿಕೆ ತಿನಿಸು ತಯಾರಿಕೆ ಈಗ ಬಲು ಜೋರು
    In (ರಾಜ್ಯ ) ಜಿಲ್ಲೆ
  • ಜಾನುವಾರುಗಳ ಉಚಿತ ತಪಾಸಣೆ ಹಾಗೂ ಚಿಕಿತ್ಸೆ ಶಿಬಿರ
    In (ರಾಜ್ಯ ) ಜಿಲ್ಲೆ
  • ದುಡಿದು ತಿನ್ನದವರು ಗಂಡಸರಲ್ಲ :ದಿಂಗಾಲೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಅಂತರಂಗದ ಅರಿವು ಜಾಗೃತಗೊಳಿಸುವ ಪ್ರಕ್ರಿಯೆ ಲಿಂಗದೀಕ್ಷೆ
    In (ರಾಜ್ಯ ) ಜಿಲ್ಲೆ
  • ಡಾ.ಅಂಬೇಡ್ಕರ್ ಜಯಂತಿಯಲ್ಲಿ ಅಧಿಕಾರಿಗಳು ಕಡ್ಡಾಯವಾಗಿ ಪಾಲ್ಗೊಳ್ಳಿ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ ಮಡಿವಾಳ ಮಾಚಿದೇವರ ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.