ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ೨೦೨೫-೨೬ನೇ ಶೈಕ್ಷಣಿಕ ಸಾಲಿಗಾಗಿ ಸಂಯೋಜನಾ ಅರ್ಜಿಗಳನ್ನು ಸಲ್ಲಿಸುವ ಅವಧಿಯನ್ನು ವಿಸ್ತರಿಸಲಾಗಿದೆ. ಇದೇ ನವೆಂಬರ್ ೩೦ರ ಸಂಜೆ ೫ ಗಂಟೆಯ ಒಳಗಾಗಿ ದಂಡ ಸಹಿತ ಶುಲ್ಕದೊಂದಿಗೆ ಸಂಯೋಜನಾ ಅರ್ಜಿಯನ್ನು ಆನ್‌ಲೈನ್ ಮುಖಾಂತರ ಸಲ್ಲಿಸಬಹುದು.
೨೦೨೫-೨೬ನೇ ಶೈಕ್ಷಣಿಕ ಸಾಲಿಗಾಗಿ ಸಂಯೋಜಿತ ಮಹಿಳಾ ಮಹಾವಿದ್ಯಾಲಯಗಳಿಂದ ಸ್ನಾತಕ/ ಸ್ನಾತಕೋತ್ತರ ಕೋರ್ಸುಗಳಿಗಾಗಿ, ವಿವಿಧ ಬಗೆಯ ಸಂಯೋಜನೆಗಾಗಿ ಹಾಗೂ ನೋಂದಾಯಿತ ಸಂಘ-ಸಂಸ್ಥೆಗಳು/ ಸಾರ್ವಜನಿಕ ಟ್ರಸ್ಟ್ಗಳಿಂದ ಹೊಸ ಮಹಿಳಾ ಮಹಾವಿದ್ಯಾಲಯ ಪ್ರಾರಂಭಕ್ಕಾಗಿ ಸಂಯೋಜನಾ ಅಧಿಸೂಚನೆಯನ್ನು ಹೊರಡಿಸಲಾಗಿತ್ತು. ಈಗ ಆ ದಿನಾಂಕಗಳನ್ನು ಮರುನಿಗದಿಗೊಳಿಸಿ ಆದೇಶ ಹೊರಡಿಸಲಾಗಿದೆ ಎಂದು ವಿವಿ ಪ್ರಕಟಣೆ ತಿಳಿಸಿದೆ.
ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾನಿಲಯದ ವೆಬ್‌ಸೈಟ್ ತಿತಿತಿ.ಞsತಿu.ಚಿಛಿ.iಟಿ ಸಂಪರ್ಕಿಸಬಹುದು ಎಂದು ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

