Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಒಲವಿನ ಪೂಜೆಯಲಿ ಒಂದಾಗೋಣ

ಮಾ.29ರಿಂದ ಕೊಲ್ಹಾರದಲ್ಲಿ ವಿಶೇಷ ಪ್ರಶಿಕ್ಷಣ ವರ್ಗ

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 28, 2026

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಗ್ರಾಮ ಪಂಚಾಯತಿಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಿ
(ರಾಜ್ಯ ) ಜಿಲ್ಲೆ

ಗ್ರಾಮ ಪಂಚಾಯತಿಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಸವನಬಾಗೇವಾಡಿ ತಾಲೂಕಿನ ವಿವಿಧ ಗ್ರಾಪಂಗಳಿಗೆ ಭೇಟಿ ನೀಡಿದ ಜಿ.ಪಂ.ಸಿಇಓ ರಿಷಿ ಆನಂದ ಸೂಚನೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಬಸವನಬಾಗೇವಾಡಿ ತಾಲೂಕಿನ ವಿವಿಧ ಗ್ರಾಮ ಪಂಚಾಯತಿಗಳಿಗೆ ಬುಧವಾರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬಸವನ ಬಾಗೇವಾಡಿ ತಾಲೂಕು ಪಂಚಾಯಿತಿ ಮತ್ತು ನರಸಲಗಿ ಗ್ರಾಮ ಪಂಚಾಯಿತಿಗೆ ದಿಢೀರ್ ಭೇಟಿ ನೀಡಿ ವಿವಿಧ ಯೋಜನೆಗಳ ಕಾಮಗಾರಿಗಳನ್ನು ಪರಿಶೀಲನೆ, ತಾಲೂಕು ಪಂಚಾಯಿತಿ ಕಛೇರಿ ಸಿಬ್ಬಂದಿ ಹಾಜರಾತಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವಿವಿಧ ಯೋಜನೆಗಳ ಕುರಿತು ಪ್ರಗತಿ ಪರಿಶೀಲನೆ ನಡೆಸಿದ ಅವರು, ಕಛೇರಿ ಒಳಾಂಗಣ ಹಾಗೂ ಹೊರಾಂಗಣ ಆವರಣಗಳನ್ನು ಪ್ರತಿದಿನ ಸ್ವಚ್ಛತೆಯಿಂದ ಕಾಪಾಡಿಕೊಳ್ಳಬೇಕು ಮತ್ತು ಪ್ರತಿ ಮಾಹೆಯ ಮೊದಲನೇ ಶನಿವಾರ ಸ್ವಚ್ಛ ಶನಿವಾರ ಆಚರಣೆ ಮಾಡುವಂತೆ ಅವರು ಸೂಚನೆ ನೀಡಿದರು.
ನರಸಲಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಂಚಿನಾಳ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆ ಮತ್ತು ಅಂಗನವಾಡಿಗೆ ಭೇಟಿ ನೀಡಿ, ಮಕ್ಕಳ ಹಾಜರಾತಿ, ಮಕ್ಕಳಿಗೆ ನೀಡುವ ಪೌಷ್ಟಿಕ ಆಹಾರ, ಬಿಸಿಯೂಟ ಕೋಣೆ ಮತ್ತು ದಾಸ್ತಾನುಗಳನ್ನು ಪರಿಶೀಲಿಸಿದರು. ಶಾಲೆ ಮತ್ತು ಅಂಗನವಾಡಿ ಕೇಂದ್ರಗಳಲ್ಲಿ ಪ್ರತಿನಿತ್ಯ ಸ್ವಚ್ಛತೆಯನ್ನು ಕಾಪಾಡಿಕೊಳ್ಳುವುದರ ಜೊತೆಗೆ ಮಕ್ಕಳಿಗೆ ಶಿಸ್ತು ಪಾಲನೆ ಹಾಗೂ ಕಲಿಕೆಗೆ ಆದ್ಯತೆ ನೀಡಬೇಕು ಎಂದರು.
ನರಸಲಗಿ ಗ್ರಾಮದ ಪ್ರೌಢ ಶಾಲೆಗೆ ಭೇಟಿ ನೀಡಿ, ಹತ್ತನೇ ತರಗತಿ ಕೊಠಡಿಗೆ ತೆರಳಿ ಮಕ್ಕಳ ಕಲಿಕಾ ಮಟ್ಟವನ್ನು ಪರಿಶೀಲಿಸಿದರು. ಇದೇ ವೇಳೆ ೧೦ನೇ ತರಗತಿಯ ಮಕ್ಕಳಿಗೆ ಗಣಿತ ವಿಷಯವನ್ನು ಬೋಧನೆ ಮಾಡಿದ ಅವರು, ಹತ್ತನೇ ತರಗತಿಯ ವಿದ್ಯಾರ್ಥಿಗಳು ಅಭ್ಯಾಸದಲ್ಲಿ ಹೆಚ್ಚಿನ ಗಮನವಿಟ್ಟು ಓದಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶವನ್ನು ಪಡೆಯಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತುಗಳನ್ನು ಹೇಳಿದರು. ಬಳಿಕ ನರಸಲಗಿ ಹಿಂದುಳಿದ ವರ್ಗದ ಬಾಲಕರ ವಸತಿ ನಿಲಯಕ್ಕೆ ಭೇಟಿ ನೀಡಿ ವಸತಿ ನಿಲಯದ ಆವರಣ, ಆಹಾರ ಕೋಣೆ, ಶುದ್ದ ಕುಡಿಯುವ ನೀರು, ಅಡುಗೆ ಕೋಣೆ, ಗ್ರಂಥಾಲಯ ಪರಿಶೀಲಿಸಿದರು.
ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ, ಸಿಬ್ಬಂದಿ ಹಾಜರಾತಿ ಪರಿಶೀಲನೆ ನಡೆಸಿದ ಅವರು, ಆಸ್ಪತ್ರೆಯಲ್ಲಿ ನಿರಂತರ ಸ್ವಚ್ಛತೆಯನ್ನು ಕಾಪಾಡಿಕೊಳ್ಳುವಂತೆ ಸೂಚನೆ ನೀಡಿದರು. ನರಸಲಗಿ ಗ್ರಾಮದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಸತಿ ನಿಲಯಕ್ಕೆ ಭೇಟಿ ನೀಡಿ ಮೂಲಭೂತ ಸೌಕರ್ಯಗಳನ್ನು ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯರಾದ ಎ ಎಮ್ ನರಸರಡ್ಡಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಸತಿ ನಿಲಯದ ನಿಲಯಪಾಲಕರಾದ ರಸೂಲಸಾಬ, ಅಂಗನವಾಡಿ ಕಾರ್ಯಕರ್ತೆ ಗೀತಾ ಚಿಂಚೂಳ್ಳಿ ಹಾಗೂ ಇತರರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಒಲವಿನ ಪೂಜೆಯಲಿ ಒಂದಾಗೋಣ

ಮಾ.29ರಿಂದ ಕೊಲ್ಹಾರದಲ್ಲಿ ವಿಶೇಷ ಪ್ರಶಿಕ್ಷಣ ವರ್ಗ

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 28, 2026

ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಒಲವಿನ ಪೂಜೆಯಲಿ ಒಂದಾಗೋಣ
    In ವಿಶೇಷ ಲೇಖನ
  • ಮಾ.29ರಿಂದ ಕೊಲ್ಹಾರದಲ್ಲಿ ವಿಶೇಷ ಪ್ರಶಿಕ್ಷಣ ವರ್ಗ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 28, 2026
    In ದಿನಪತ್ರಿಕೆ
  • ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ
    In ವಿಶೇಷ ಲೇಖನ
  • ಮಹಿಳೆಯರಿಂದ ನಂಜಿಕೆ ತಿನಿಸು ತಯಾರಿಕೆ ಈಗ ಬಲು ಜೋರು
    In (ರಾಜ್ಯ ) ಜಿಲ್ಲೆ
  • ಜಾನುವಾರುಗಳ ಉಚಿತ ತಪಾಸಣೆ ಹಾಗೂ ಚಿಕಿತ್ಸೆ ಶಿಬಿರ
    In (ರಾಜ್ಯ ) ಜಿಲ್ಲೆ
  • ದುಡಿದು ತಿನ್ನದವರು ಗಂಡಸರಲ್ಲ :ದಿಂಗಾಲೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಅಂತರಂಗದ ಅರಿವು ಜಾಗೃತಗೊಳಿಸುವ ಪ್ರಕ್ರಿಯೆ ಲಿಂಗದೀಕ್ಷೆ
    In (ರಾಜ್ಯ ) ಜಿಲ್ಲೆ
  • ಡಾ.ಅಂಬೇಡ್ಕರ್ ಜಯಂತಿಯಲ್ಲಿ ಅಧಿಕಾರಿಗಳು ಕಡ್ಡಾಯವಾಗಿ ಪಾಲ್ಗೊಳ್ಳಿ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ ಮಡಿವಾಳ ಮಾಚಿದೇವರ ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.