ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ವಿಜಯಪುರ ಕೇಂದ್ರ ಕಾರಾಗೃಹ ಹಾಗೂ ಕಾನೂನು ಸೇವಾ ಪ್ರಾಧಿಕಾರದ ಸಹಯೋಗದಲ್ಲಿ ನ.೨೬ರಂದು ಸಂವಿಧಾನ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಹಿರಿಯ ಸಿವ್ಹಿಲ್ ನ್ಯಾಯಾಧೀಶ ಅರವಿಂದ ಹಾಗರಗಿ ಅವರು ಸಂವಿಧಾನ ಪ್ರಮಾಣ ವಚನ ಬೋಧಿಸಿ, ಬಂಧಿಗಳಿಗಿರುವ ಉಚಿತ ಕಾನೂನು ಸೇವೆಗಳ ಕುರಿತು ಮಾತನಾಡಿದರು.
ಕೇಂದ್ರ ಕಾರಾಗೃಹದ ಅಧೀಕ್ಷಕರಾದ ಬಿ.ಎಂ.ಕೊಟ್ರೇಶ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾರಾಗೃಹದ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು. ಅಶೋಕ ರಾಠೋಡ ನಿರೂಪಿಸಿ, ವಂದಿಸಿದರು.

