ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಡ್ರೋನ್ ಕ್ಯಾಮರಾ ಫೋಟೋಗ್ರಾಫಿ ಮತ್ತು ವಿಡಿಯೋಗ್ರಾಫಿ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಉದ್ಯೋಗ ಪಡೆಯಲು ಪರಿಶಿಷ್ಟ ಪಂಗಡದ ಯುವಕ-ಯುವತಿಯರಿಗೆ ತರಬೇತಿ ನೀಡಲಾಗುತ್ತಿದ್ದು, ಆಸಕ್ತ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಪರಿಶಿಷ್ಟ ಪಂಗಡಕ್ಕೆ ಸೇರಿದ ಎಸ್.ಎಸ್.ಎಲ್.ಸಿ. ಉತ್ತೀರ್ಣರಾದ ೩೫ ರಿಂದ ೪೦ ವರ್ಷ ವಯೋಮಾನದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ನಿಗದಿತ ಅರ್ಜಿ ನಮೂನೆ ಹಾಗೂ ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಹಾಗೂ ತಾಲೂಕಾ ಸಮಾಜ ಕಲ್ಯಾಣ ಇಲಾಖೆ ಕಚೇರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
