ದೇವರಹಿಪ್ಪರಗಿ: ರಾಜ್ಯದಲ್ಲಿ ಕಾಂಗ್ರೆಸ್ ಸುಭದ್ರ ಸರಕಾರ ರಚನೆಗೆ ಕ್ಷೇತ್ರದ ಮತದಾರ ಪ್ರಭುಗಳು ಬೆಂಬಲಿಸಿ ಆಶೀರ್ವಾದ ಮಾಡಬೇಕು. ಉತ್ತಮ ಆಡಳಿತಕ್ಕೆ ಅನುಕೂಲ ಮಾಡಿಕೊಡಬೇಕೆಂದು ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಸುಣಗಾರ ಮನವಿ ಮಾಡಿದರು.
ದೇವರಹಿಪ್ಪರಗಿ ಮತಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಮತಯಾಚನೆ ಮಾಡಿ ಮಾತನಾಡಿದ ಅವರು, ಪ್ರತಿಯೊಂದು ಗ್ರಾಮಗಳಲ್ಲಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಸ್ವಯಂಪ್ರೇರಣೆಯಿAದ ಪಕ್ಷದ ಪರವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇನ್ನೂ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳೆಲ್ಲ ಮುಂದಾಳತ್ವ ವಹಿಸಿ ಪ್ರತಿಯೊಂದು ಸಮುದಾಯದ ಮತ ಪಡೆಯುವಲ್ಲಿ ಯಶಸ್ವಿಯಾಗುತ್ತಿದ್ದಾರೆ. ಇಡೀ ಕ್ಷೇತ್ರದ ಜನ ಹೋದಲ್ಲಿ ಪ್ರೀತಿ ವಿಶ್ವಾಸ, ಅಭಿಮಾನದಿಂದ ಬರಮಾಡಿಕೊಂಡು ಶುಭ ಹರಸುತ್ತಿದ್ದಾರೆ. ಅದಕ್ಕಾಗಿ ಈ ಸಲ ದೇವರಹಿಪ್ಪರಗಿ ಮತಕ್ಷೇತ್ರದಲ್ಲಿ ಕಾಂಗ್ರೆಸ್ ಬಾವುಟ ಹಾರಾಡುವುದು ಗ್ಯಾರಂಟಿಯಾಗಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದು ಕ್ಷೇತ್ರದ ಅಭಿವೃದ್ದಿಗೆ ಕಾಂಗ್ರೆಸ್‌ಗೆ ಮತ ನೀಡಿ, ಪ್ರತಿಯೊಬ್ಬರು ಬೆಂಬಲಿಸಿ ಆಶೀರ್ವದಿಸಬೇಕೆಂದು ಮನವಿ ಮಾಡಿದರು.
ಕೆಪಿಸಿಸಿ ಸದಸ್ಯ ಬಿ ಎಸ್ ಪಾಟೀಲ ಯಾಳಗಿ, ಗಡಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಸುಭಾಷ ಛಾಯಾಗೋಳ ಮಾತನಾಡಿ, ಕಾಂಗ್ರೆಸ್ ಪಕ್ಷದ ಎಲ್ಲ ಮುಖಂಡರು ಅಭ್ಯರ್ಥಿ ಗೆಲುವಿಗಾಗಿ ಶ್ರಮಿಸುತ್ತಿದ್ದೇವೆ. ಈ ಸಲ ಕಾಂಗ್ರೆಸ್ ಗಾಳಿ ಬೀಸುತ್ತಿದ್ದು, ಉತ್ತಮ ಪ್ರಜಾಪ್ರಭುತ್ವ ವ್ಯವಸ್ಥೆಗೆ ಪ್ರತಿಯೊಬ್ಬರು ಕಾಂಗ್ರೆಸ್ ಬೆಂಬಲಿಸಿ ನಮ್ಮ ಅಭ್ಯರ್ಥಿ ಶರಣಪ್ಪ ಸುಣಗಾರ ಇವರನ್ನು ಗೆಲ್ಲಿಸಬೇಕೆಂದು ವಿನಂತಿಸಿದರು.
ಹುಣಶ್ಯಾಳ, ಆಲಗೂರ, ಯಲಗೋಡ, ವಂದಾಲ, ಕದರಾಪೂರ, ಸಲಾದಹಳ್ಳಿ, ಚಟ್ನಳ್ಳಿ, ಆನೆಮಡು, ಹಾಳಗುಂಡಕನಾಳ, ಬೂದಿಹಾಳ ಸೇರಿದಂತೆ ಹತ್ತಾರು ಗ್ರಾಮಗಳಿಗೆ ಭೇಟಿ ನೀಡಿ ಮತಯಾಚನೆ ಮಾಡಿದ್ದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಆನಂದಗೌಡ ದೊಡ್ಡಮನಿ, ಡಾ. ಪ್ರಭುಗೌಡ ಲಿಂಗದಳ್ಳಿ, ಡಾ. ನಂದಕುಮಾರ ಭೈರಿ, ಮಲ್ಲನಗೌಡ ಬಿರಾದಾರ, ಕೆಸರಟ್ಟಿ, ಬ್ಲಾಕ್ ಅಧ್ಯಕರಾದ ಬಶೀರಹಮ್ಮದ ಬೇಪಾರಿ, ಬಾಳನಗೌಡ ಪಾಟೀಲ ಸಾತಿಹಾಳ ಸರಿತಾ ನಾಯಿಕ, ಲಲಿತಾ ದೊಡ್ಡಮನಿ, ಮೈನುದ್ದೀನ ಬಾಗವಾನ ಸೇರಿದಂತೆ ಕಾಂಗ್ರೆಸ್ ಪದಾಧಿಕಾರಿಗಳು, ಕಾರ್ಯಕರ್ತರು ಅಭಿಮಾನಿಗಳು ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
ದೇವರಹಿಪ್ಪರಗಿ ಕ್ಷೇತ್ರದಲ್ಲಿ ಕಾಂಗ್ರೆಸ್ ಬಾವುಟ ಹಾರಾಡೋದು ಗ್ಯಾರಂಟಿ :ಸುಣಗಾರ
Related Posts
Add A Comment