ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಅಲ್ಲಲ್ಲಿ ತೊಗರಿ ಬೆಳೆದ ರೈತರ ಜಮೀನುಗಳಲ್ಲಿ ಹವಾಮಾನ ವೈಪರಿತ್ಯದಿಂದ ಹೂ ಮತ್ತು ಕಾಯಿ ಉದುರುತ್ತಿರುವುದು ಕಂಡು ಬಂದಲ್ಲಿ ರೈತರು ಬೆಳೆ ವಿಮೆ ನೋಂದಣಿ ಮಾಡಿದ ರಶೀದಿ, ಜಿಪಿಎಸ್ ಫೋಟೋದೊಂದಿಗೆ ಅರ್ಜಿಯನ್ನು ಆಯಾ ರೈತ ಸಂಪರ್ಕ ಕೇಂದ್ರ ಅಥವಾ ವಿಮಾ ಸಂಸ್ಥೆಯ ಪ್ರತಿನಿಧಿಗಳಿಗೆ ಸಂಪರ್ಕಿಸುವಂತೆ ವಿಜಯಪುರ ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ರೈತ ಸಂಪರ್ಕ ಕೇಂದ್ರ ಅಥವಾ ವಿಜಯಪುರ ತಾಲೂಕಿನ ವಿಮಾ ಸಂಸ್ಥೆ ಪ್ರತಿನಿಧಿ ಸಂತೋಷ ಜಗರಿ ಮೊ: 7349113727, ಬಬಲೇಶ್ವರ ತಾಲೂಕಿನ ಸಾಗರ ಔರಸಂಗ ಮೊ: 9590921699 ಹಾಗೂ ತಿಕೋಟಾ ತಾಲೂಕಿನ ರಮೇಶ ಹಳ್ಳಿ ಮೊ: 7892547066 ಸಂಖ್ಯೆಗೆ ಸಂಪರ್ಕಿಸುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.