ವಿಜಯಪುರ: ಕರ್ನಾಟಕದಲ್ಲಿ ಭಾರತೀಯ ಜನತಾ ಪಕ್ಷ ಬಹುಮತ ಸಾಧಿಸಿ ಮತ್ತೆ ಅಧಿಕಾರ ಹಿಡಿಯುವುದು ಖಚಿತ ಎಂದು ಮಹಾರಾಷ್ಟçದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ವಿಶ್ವಾಸ ವ್ಯಕ್ತಪಡಿಸಿದರು.
ಬುಧವಾರ ನಗರದ ಬಿಜೆಪಿ ಕಾರ್ಯಾಲಯದಲ್ಲಿ ಸುದ್ಧಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬಡವರಿಗಾಗಿ ಅನೇಕ ಕಲ್ಯಾಣ ಯೋಜನೆಗಳನ್ನು ರುಪಿಸಿದ್ದಾರೆ. ರೈತರಿಗಾಗಿ ಕೃಷಿ ಸಮ್ಮಾನ್ ಯೋಜನೆ ರೂಪಿಸಿ ಕೇಂದ್ರ ಸರಕಾರದಿಂದ ರೂ. ೬೦೦೦ ಹಾಗೂ ರಾಜ್ಯ ಸರಕಾರದಿಂದ ರೂ.೪೦೦೦ ಸೇರಿ ಒಟ್ಟು ರೂ.೧೦,೦೦೦ ರೈತರ ನೇರ ಖಾತೆಗೆ ಜಮೆಯಾಗುವಂತೆ ಮಾಡಿದ್ದಾರೆ. ಹಾಗೆಯೇ ಕರ್ನಾಟಕದ ಬಸವರಾಜ ಬೊಮ್ಮಾಯಿ ಸರಕಾರವೂ ಸಹ ಕೃಷಿಕ ಮತ್ತು ಕೂಲಿಕಾರರ ಮಕ್ಕಳಿಗಾಗಿ ವಿದ್ಯಾಸಿರಿ ಯೋಜನೆ ಸೇರಿದಂತೆ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದು ನಾಡಿನ ಜನತೆಯ ಶ್ರೇಯೋಭಿವೃದ್ಧಿಗಾಗಿ ಶ್ರಮಿಸಿದ್ದಾರೆ.
ಕೇಂದ್ರ ಮತ್ತು ರಾಜ್ಯದ ಡಬಲ್ ಎಂಜಿನ್ ಸರಕಾರದ ಸಾಧನೆಗಳನ್ನು ಮುಂದಿಟ್ಟುಕೊAಡು ಬಿಜೆಪಿ ಚುನಾವಣೆಯನ್ನು ಎದುರಿಸುತ್ತಿದ್ದು ಬಿಜೆಪಿ ತನ್ನ ಸ್ವಂತ ಬಲದ ಮೇಲೆ ಮತ್ತೊಮ್ಮೆ ಅಧಿಕಾರ ಗದ್ದುಗೆ ಏರುವುದು ನಿಶ್ಚಿತ ಎಂದರು.
ವಿಜಯಪುರದ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಜನಪ್ರೀಯ ಶಾಸಕರಾಗಿದ್ದು ಅವರಿಗೆ ಎಲ್ಲ ವರ್ಗದ ಜನರ ಬೆಂಬಲವಿದೆ. ಈ ಬಾರಿ ಅವರು ಅತ್ಯಧಿಕ ಮತಗಳಿಂದ ಗೆಲುವು ಸಾಧಿಸಲಿದ್ದಾರೆ ಎಂದು ಭವಿಷ್ಯ ನುಡಿದರು.
ಕರ್ನಾಟಕ ಮಹಾರಷ್ಟç ಗಡಿ ವಿವಾದ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಈ ವಿವಾದ ಈಗ ಸುಪ್ರೀಂ ಕೊರ್ಟ್ನಲ್ಲಿದ್ದು, ಗೃಹ ಸಚಿವ ಅಮಿತ ಶಾ ಅವರು ಎರಡೂ ರಾಜ್ಯಗಳ ಮುಖ್ಯಮಂತ್ರಿಗಳೊAದಿಗೆ ಚರ್ಚಿಸಿ ಸೌಹಾರ್ದಯುತವಾಗಿ ಬಗೆಹರಿಸುವ ವಿಶ್ವಾಸ ವ್ಯಕ್ತಪಡಿಸಿದರು.
ಬಿಜೆಪಿ ಸರಕಾರದ ಶೇ.೪೦ ಭ್ರಷ್ಟಾಚಾರ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಕಾಂಗ್ರೆಸ್ ಪಕ್ಷವು ಬಿಜೆಪಿ ಸರಕಾರದ ಕುರಿತು ಆಧಾರ ರಹಿತವಾದ ಆರೋಪಗಳನ್ನು ಮಾಡುತ್ತಿದೆಯೇ ಹೊರತು ಈವರೆಗೂ ಯಾವೊಂದೂ ಸಾಕ್ಷಿ ಒದಗಿಸಲು ಸಮರ್ಥವಾಗಿಲ್ಲ. ಸುಳ್ಳು ಆರೋಪಗಳ ಮೂಲಕ ಅಧಿಕಾರಕ್ಕೆ ಬರುವ ಕನಸು ಕಾಣುತ್ತಿದ್ದಾರೆ. ಕರ್ನಾಟಕವನ್ನು ಕಾಂಗ್ರೆಸ್ ಪಕ್ಷದ ವರಿಷ್ಠರ ಎಟಿಎಮ್ ಮಾಡಲು ಹೊರಟಿದ್ದಾರೆಂದು ದೇವೆಂದ್ರ ಫಡ್ನವೀಸ್ ವ್ಯಂಗ್ಯವಾಡಿದರು.
ಬಿಜೆಪಿ ಜಿಲ್ಲಾದ್ಯಕ್ಷ ಆರ್.ಎಸ್.ಪಾಟೀಲ (ಕೂಚಬಾಳ) ಮಾತನಾಡಿದರು.
ಪಕ್ಷದ ವಿಭಾಗ ಪ್ರಭಾರಿ ಚಂದ್ರಶೇಖರ ಕವಟಗಿ, ಪ್ರ.ಕಾರ್ಯದರ್ಶಿ ಬಸವರಾಜ ಬಿರಾದಾರ, ಮಲ್ಲಿಕಾರ್ಜುನ ಜೋಗೂರ, ಜಿಲ್ಲಾ ವಕ್ತಾರ ಸುರೇಶ ಬಿರಾದಾರ, ಸಂಜಯ ಪಾಟೀಲ ಕನಮಡಿ, ಸೋಲಾಪೂರ ಜಿಲ್ಲಾಧ್ಯಕ್ಷ ಸಾವಜಿ ಪವಾರ ಇದ್ದರು.
ಕರ್ನಾಟಕದಲ್ಲಿ ಮತ್ತೆ ಬಿಜೆಪಿ ಸರಕಾರ ಖಚಿತ: ದೇವೇಂದ್ರ ಫಡ್ನವೀಸ್
Related Posts
Add A Comment