Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಗ್ರಾಮೀಣ ಮಟ್ಟದಲ್ಲಿ ಮಧ್ಯಸ್ಥಿಕೆ ಬಗ್ಗೆ ಹೆಚ್ಚು ಅರಿವು ಮೂಡಿಸಬೇಕು

ರೋಣಿಹಾಳ 110 ಕೆವಿ ಮಾರ್ಗ ನಿರ್ವಹಣೆ: ಇಂದು ವಿದ್ಯುತ್ ವ್ಯತ್ಯಯ

ಹೊಸ ತಲೆಮಾರಿನ ಕ್ರಾಂತಿಕಾರಕ ಸಾಹಿತಿ ಪಿ.ಲಂಕೇಶ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಮೃತ-1.0 ಯೋಜನೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ
(ರಾಜ್ಯ ) ಜಿಲ್ಲೆ

ಅಮೃತ-1.0 ಯೋಜನೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಉಜ್ವಲ್‍ಕುಮಾರ ಘೋಷ್ ಸೂಚನೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಕೇಂದ್ರ ಪುರಸ್ಕೃತ ಅಮೃತ್-1.0 ಯೋಜನೆಯಡಿಯ ಕಾಮಗಾರಿಗಳನ್ನು 2024ರ ಡಿಸೆಂಬರ್ ಅಂತ್ಯದೊಳಗಾಗಿ ಪೂರ್ಣಗೊಳಿಸುವಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಸರ್ಕಾರದ ಕಾರ್ಯದರ್ಶಿಗಳಾದ ವಿಜಯಪುರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಉಜ್ವಲ್‍ಕುಮಾರ್ ಘೋಷ ಸೂಚನೆ ನೀಡಿದರು.
ರವಿವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವ್ಯವಸ್ಥಾಪಕ ನಿರ್ದೇಶಕ ಡಾ.ಸೆಲ್ವಮಣಿ ಆರ್. ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಉಜ್ವಲ್‍ಕುಮಾರ ಘೋಷ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ವಿಜಯಪುರ ನಗರದಲ್ಲಿ ಕೇಂದ್ರ ಪುರಸ್ಕೃತ ಅಮೃತ್- 1.0 ಯೋಜನೆಯನ್ನು ಪೂರ್ಣಗೊಳಿಸಲು ವಿವಿಧ ಹಂತಗಳಲ್ಲಿ ಹಲವು ಬಾರಿ ಜಲಮಂಡಳಿ ವತಿಯಿಂದ ನೋಟೀಸ್ ನೀಡಲಾಗಿದ್ದು, ಪ್ರಸ್ತುತ ವಲಯವಾರು ಪ್ರಗತಿಯನ್ನು ಅವಲೋಕಿಸಿ, ಎಲ್ಲ ಕಾಮಗಾರಿಗಳನ್ನು ಡಿಸೆಂಬರ್-2024 ರ ಅಂತ್ಯಕ್ಕೆ ಪೂರ್ಣಗೊಳಿಸಬೇಕು. ಒಂದು ವೇಳೆ ಗುತ್ತಿಗೆದಾರರು ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸದಿದ್ದಲ್ಲಿ ಟೆಂಡರ್ ನಿಯಮಾವಳಿಗಳಂತೆ, ದಂಡ ವಿಧಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.
ಜಿಲ್ಲಾ ಉಸ್ತುವಾರಿ ಸಚಿವರ ನಿರ್ದೇಶನದಂತೆ ವಿಜಯಪುರ ಜಿಲ್ಲೆಯ ಬಬಲೇಶ್ವರ ಹಾಗೂ ತಿಕೋಟಾ ಪಟ್ಟಣಗಳಿಗೆ ಸಗಟು ನೀರು ಸರಬರಾಜು ಹಾಗೂ ಕೇಂದ್ರ ಪುರಸ್ಕೃತ ಅಮೃತ್-2.0 ಯೋಜನೆಯಲ್ಲಿ ವಿತರಣಾ ನೀರು ಸರಬರಾಜು ಯೋಜನೆಗಳ ಕುರಿತು ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ಇಲಾಖೆ ಹಾಗೂ ನಗರಾಭಿವೃದ್ಧಿ ಇಲಾಖೆಯ ಅಧೀನದಲ್ಲಿ ಬರುವ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಅಧಿಕಾರಿಗಳೊಂದಿಗೆ ಸುಧೀರ್ಘವಾಗಿ ಚರ್ಚೆ ನಡೆಸಿದ ಅವರು, ಎರಡೂ ಪಟ್ಟಣಗಳಿಗೆ ಸಗಟು ನೀರು ಸರಬರಾಜು ಮಾಡಲು ರಾಜ್ಯ ಸರ್ಕಾರದ ಅನುದಾನದಲ್ಲಿ ಹಾಗೂ ವಿತರಣಾ ನೀರು ಸರಬರಾಜು ವ್ಯವಸ್ಥೆ ಮಾಡಲು ಕೇಂದ್ರ ಪುರಷ್ಕೃತ ಅಮೃತ್ 2.0 ಅನುದಾನದಲ್ಲಿ ಯೋಜನೆಗಳ ರೂಪು ರೇμÉಗಳನ್ನು ತಯಾರಿಸಿ, ಆಡಳಿತಾತ್ಮಕ ಅನುಮೋದನೆ ಪಡೆದು, ಟೆಂಡರ್ ಕರೆಯಲು ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.
ವಿಜಯಪುರ ನಗರದ ವಾರ್ಡ ನಂ.4, 5, 6, 10 ಮತ್ತು 12 ಗಳು ಭೂತನಾಳ ಕೆರೆಯ ಮೇಲೆ ಅವಲಂಬಿತವಾಗಿದ್ದು, ಇವುಗಳಿಗೆ ವರ್ಷ ಪೂರ್ತಿ ಕುಡಿಯುವ ನೀರು ಸರಬರಾಜು ಮಾಡಲು ಭೂತನಾಳ ಕೆರೆಯನ್ನು ಪ್ರತಿ ವರ್ಷ 2 ಬಾರಿ ಸಂರ್ಪೂಣವಾಗಿ ತುಂಬುವುದು ಅವಶ್ಯಕವಾಗಿದೆ. ಸನ್ 2023-24ನೇ ಸಾಲಿನ 15ನೇ ಹಣಕಾಸು ಯೋಜನೆಯಡಿ ನಿಬರ್ಂಧಿತ ಅನುದಾನ (ಖಿiಜe ಉಡಿಚಿಟಿಣ) ದಲ್ಲಿ ಅಂದಾಜು ಮೊತ್ತ ರೂ.327.40 ಲಕ್ಷಗಳನ್ನು ಮೀಸಲಿರಿಸಲಾಗಿರುತ್ತದೆ. ಸದರಿ ಕಾಮಗಾರಿಯನ್ನು ಶೀಘ್ರದಲ್ಲಿ ಕೈಗೊಂಡಲ್ಲಿ ಮುಂಬರುವ ಬೇಸಿಗೆಯಲ್ಲಿ ಕೆರೆಯಲ್ಲಿ ನೀರು ಖಾಲಿಯಾಗದಂತೆ ನೋಡಿಕೊಳ್ಳಬಹುದಾಗಿದ್ದು, ಈ ಕುರಿತು ಮಹಾನಗರ ಪಾಲಿಕೆ ಆಯುಕ್ತರು ಕೆಬಿಜೆಎನ್‍ಎಲ್ ಅಧಿಕಾರಿಗಳೊಂದಿಗೆ ಸಮನ್ವಯತೆ ಸಾಧಿಸಿ ಅನುಮತಿ ಹಾಗೂ ಅನುಮತಿ ಪಡೆಯಲು ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.
ವಿಜಯಪುರ ನಗರಕ್ಕೆ ಸಗಟು ನೀರು ಸರಬರಾಜು ಮಾಡುವ ಆಲಮಟ್ಟಿ ಹೀನ್ನೀರಿನ (ಕೊಲ್ಹಾರದಿಂದ ವಿಜಯಪುರ ನಗರಕ್ಕೆ) ಪಿ.ಎಸ್.ಸಿ. ಕೊಳವೆ ಮಾರ್ಗವನ್ನು ಬದಲಾಯಿಸಿ ಎಮ್.ಎಸ್. ಪೈಪ್ ಅಳವಡಿಸುವ ಕಾಮಗಾರಿಯ ಮರು ಟೆಂಡರ್ ಕರೆಯಲು ಕಾರ್ಯಪಾಲಕ ಅಭಿಯಂತರೊಂದಿಗೆ ಸ್ಥಳ ಪರಿಶೀಲನೆ ನಡೆಸಿ, ಪ್ರಸ್ತಾವನೆಯನ್ನು ಆಡಳಿತಾತ್ಮಕ ಅನುಮೋದನೆಗೆ 52 ಕೋಟಿ ರೂ.ಗಳ ಪರಿಷ್ಕøತ ಅಂದಾಜು ಪಟ್ಟಿಯನ್ನು ಸಲ್ಲಿಸುವಂತೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವ್ಯವಸ್ಥಾಪಕ ನಿರ್ದೇಶಕ ಡಾ.ಸೆಲ್ವಮಣಿ ಆರ್. ಸೂಚನೆ ನೀಡಿದರು.
ಜಿಲ್ಲೆಯ ಇತರ ಪಟ್ಟಣಗಳಲ್ಲಿ ಕೇಂದ್ರ ಪುರಸ್ಕೃತ ಅಮೃತ-2.0 ಯೋಜನೆಗಳ ಪ್ರಗತಿ ಕುರಿತು ಚರ್ಚಿಸಿ, ಬಹುತೇಕ ಪಟ್ಟಣಗಳಲ್ಲಿ ಕಾಮಗಾರಿಯ ಕರಾರು ಪತ್ರಗಳನ್ನು ನೀಡಲಾಗಿದ್ದು, ಶೀಘ್ರದಲ್ಲಿ ಕಾಮಗಾರಿಗಳನ್ನು ಪ್ರಾರಂಭಿಸಬೇಕು. ಕೆಲವು ಪಟ್ಟಣಗಳಲ್ಲಿ ನೀರು ಸರಬರಾಜು ಯೋಜನೆಗಳ ಆಡಳಿತಾತ್ಮಕ ಅನುಮೋದನೆಗೆ ಬಾಕಿ ಇರುವ ಯೋಜನೆಗಳನ್ನು ಸರ್ಕಾರಕ್ಕೆ ಸಲ್ಲಿಸಿ ಅನುಮೋದನೆ ಪಡೆಯುವಂತೆ ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್, ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಗ್ರಾಮೀಣ ಮಟ್ಟದಲ್ಲಿ ಮಧ್ಯಸ್ಥಿಕೆ ಬಗ್ಗೆ ಹೆಚ್ಚು ಅರಿವು ಮೂಡಿಸಬೇಕು

ರೋಣಿಹಾಳ 110 ಕೆವಿ ಮಾರ್ಗ ನಿರ್ವಹಣೆ: ಇಂದು ವಿದ್ಯುತ್ ವ್ಯತ್ಯಯ

ಹೊಸ ತಲೆಮಾರಿನ ಕ್ರಾಂತಿಕಾರಕ ಸಾಹಿತಿ ಪಿ.ಲಂಕೇಶ

ಗಡಿ ರಕ್ಷಿಸುತ್ತಿರುವ ಸೈನಿಕರು ನಿಜ ಹೀರೋಗಳು :ಹಂಚಲಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಗ್ರಾಮೀಣ ಮಟ್ಟದಲ್ಲಿ ಮಧ್ಯಸ್ಥಿಕೆ ಬಗ್ಗೆ ಹೆಚ್ಚು ಅರಿವು ಮೂಡಿಸಬೇಕು
    In (ರಾಜ್ಯ ) ಜಿಲ್ಲೆ
  • ರೋಣಿಹಾಳ 110 ಕೆವಿ ಮಾರ್ಗ ನಿರ್ವಹಣೆ: ಇಂದು ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಹೊಸ ತಲೆಮಾರಿನ ಕ್ರಾಂತಿಕಾರಕ ಸಾಹಿತಿ ಪಿ.ಲಂಕೇಶ
    In ವಿಶೇಷ ಲೇಖನ
  • ಗಡಿ ರಕ್ಷಿಸುತ್ತಿರುವ ಸೈನಿಕರು ನಿಜ ಹೀರೋಗಳು :ಹಂಚಲಿ
    In (ರಾಜ್ಯ ) ಜಿಲ್ಲೆ
  • ವಿಧಾನಸಭೆಯಲ್ಲಿ ಡಿಸಿಎಂ ಡಿಕೆಶಿ ವರ್ತನೆ ಸರಿಯಲ್ಲ :ಯತ್ನಾಳ
    In (ರಾಜ್ಯ ) ಜಿಲ್ಲೆ
  • ಒಲವಿನ ಪೂಜೆಯಲಿ ಒಂದಾಗೋಣ
    In ವಿಶೇಷ ಲೇಖನ
  • ಮಾ.29ರಿಂದ ಕೊಲ್ಹಾರದಲ್ಲಿ ವಿಶೇಷ ಪ್ರಶಿಕ್ಷಣ ವರ್ಗ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 28, 2026
    In ದಿನಪತ್ರಿಕೆ
  • ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ
    In ವಿಶೇಷ ಲೇಖನ
  • ಮಹಿಳೆಯರಿಂದ ನಂಜಿಕೆ ತಿನಿಸು ತಯಾರಿಕೆ ಈಗ ಬಲು ಜೋರು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.